IPL 2025: ಹೀಗಾದ್ರೆ RCB ಐಪಿಎಲ್​ನಿಂದ ಹೊರಬೀಳುತ್ತೆ..!

Updated on: May 06, 2025 | 7:37 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 55 ಪಂದ್ಯಗಳು ಪೂರ್ಣಗೊಂಡರೂ ಯಾವುದೇ ತಂಡ ಪ್ಲೇಆಫ್​ಗೆ ಪ್ರವೇಶಿಸಿಲ್ಲ. ಇತ್ತ ಮೂರು ತಂಡಗಳು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದ್ದರೆ, 7 ತಂಡಗಳ ನಡುವೆ ಪ್ಲೇಆಫ್ ರೇಸ್ ಪೈಪೋಟಿ ಮುಂದುವರೆದಿದೆ. ಹೀಗಾಗಿ ಈ ವಾರದ ಪಂದ್ಯದೊಂದಿಗೆ ಪ್ಲೇಆಫ್ ಆಡಲಿರುವ ತಂಡಗಳ ಸ್ಪಷ್ಟ ಚಿತ್ರಣ ದೊರೆಯಲಿದೆ.

1 / 8
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 11 ಪಂದ್ಯಗಳಲ್ಲಿ 8 ಜಯ ಸಾಧಿಸಿ ಇದೀಗ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಒಟ್ಟು 16 ಅಂಕಗಳನ್ನು ಕಲೆಹಾಕಿದರೂ, ಆರ್​ಸಿಬಿ ತಂಡ ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿಲ್ಲ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 11 ಪಂದ್ಯಗಳಲ್ಲಿ 8 ಜಯ ಸಾಧಿಸಿ ಇದೀಗ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಒಟ್ಟು 16 ಅಂಕಗಳನ್ನು ಕಲೆಹಾಕಿದರೂ, ಆರ್​ಸಿಬಿ ತಂಡ ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿಲ್ಲ.

2 / 8

ಇದಕ್ಕೆ ಮುಖ್ಯ ಕಾರಣ ಇತರೆ 7 ತಂಡಗಳು ಪ್ಲೇಆಫ್​ ರೇಸ್​ನಲ್ಲಿರುವುದು. ಅದರಲ್ಲೂ 4 ತಂಡಗಳಿಗೆ ಆರ್​ಸಿಬಿ ತಂಡವನ್ನು ಹಿಂದಿಕ್ಕಿ ಪ್ಲೇಆಫ್ ಹಂತಕ್ಕೇರಲು ಉತ್ತಮ ಅವಕಾಶವಿದೆ. ಹೀಗಾಗಿಯೇ ಆರ್​ಸಿಬಿ ಪಾಲಿಗೆ ಮುಂದಿನ ಮೂರು ಪಂದ್ಯಗಳು ನಿರ್ಣಾಯಕ. ಏಕೆಂದರೆ...

3 / 8

ಮುಂಬೈ ಇಂಡಿಯನ್ಸ್ ತಂಡವು ಮುಂದಿನ ಮೂರು ಮ್ಯಾಚ್​ಗಳಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ಮಣಿಸಿದರೆ, ಒಟ್ಟು 20 ಅಂಕಗಳನ್ನು ಪಡೆದು ಪ್ಲೇಆಫ್​ಗೇರಲಿದೆ.

4 / 8

ಪಂಜಾಬ್ ಕಿಂಗ್ಸ್ ತಂಡವು ಮುಂದಿನ 3 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳನ್ನು ಸೋಲಿಸಿದರೆ 19 ಅಂಕಗಳೊಂದಿಗೆ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಲಿದೆ. 

5 / 8

ಹಾಗೆಯೇ ಗುಜರಾತ್ ಟೈಟಾನ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನು ಮಣಿಸಿದರೆ ಒಟ್ಟು 18 ಅಂಕಗಳೊಂದಿಗೆ ಪ್ಲೇಆಫ್ ಹಂತಕ್ಕೇರಲಿದೆ.

6 / 8

ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮುಂದಿನ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿದರೆ, ಅಂದರೆ ಚೆನ್ನೈ ಸೂಪರ್ ಕಿಂಗ್ಸ್, ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿದರೆ ಒಟ್ಟು 17 ಅಂಕಗಳನ್ನು ಪಡೆದು ಪ್ಲೇಆಫ್​ಗೆ ಅರ್ಹತೆ ಪಡೆಯಲಿದೆ.

7 / 8

ಇದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್, ಸನ್​ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ವಿರುದ್ಧ ಸೋತರೆ 16 ಅಂಕಗಳಲ್ಲೇ ಉಳಿಯಲಿದೆ.

8 / 8

ಹೀಗಾದಲ್ಲಿ ಆರ್​ಸಿಬಿ ತಂಡವು ಪ್ಲೇಆಫ್ ರೇಸ್​ನಿಂದ ಹೊರಬೀಳಲಿದ್ದು,  ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಂದಿನ ಹಂತಕ್ಕೇರಲಿದೆ. ಹೀಗಾಗಿಯೇ ಆರ್​ಸಿಬಿ ತಂಡದ ಪಾಲಿಗೆ ಮುಂದಿನ ಪಂದ್ಯಗಳು ನಿರ್ಣಾಯಕ.

Published On - 7:24 am, Tue, 6 May 25

Loading...
Unable to load recommendations.
Follow Us