AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025 RCB vs DC: ಗೆದ್ದವರೇ ನಂಬರ್ 1

IPL 2025 DC vs RCB: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 46ನೇ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ.

ಝಾಹಿರ್ ಯೂಸುಫ್
|

Updated on: Apr 27, 2025 | 8:26 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 46ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರುವುದು ಖಚಿತ.

1 / 6
ಏಕೆಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 12 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, ಆರ್​ಸಿಬಿ ತಂಡ 12 ಪಾಯಿಂಟ್ಸ್​ನೊಂದಿಗೆ ತೃತೀಯ ಸ್ಥಾನದಲ್ಲಿದೆ. ಉಭಯ ತಂಡಗಳ ನಡುವಣ ಈ ಪಂದ್ಯದಲ್ಲಿ ಗೆಲ್ಲುವ ತಂಡ 14 ಅಂಕಗಳೊಂದಿಗೆ ಗುಜರಾತ್ ಟೈಟಾನ್ಸ್ ತಂಡವನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಲಿದೆ.

2 / 6
ಇನ್ನು ಇಂದಿನ ಪಂದ್ಯದಲ್ಲಿ ಜಯಗಳಿಸುವ ತಂಡವು ತನ್ನ ಪ್ಲೇಆಫ್​ ಹಾದಿಯನ್ನು ಮತ್ತಷ್ಟು ಸುಗಮಗೊಳಿಸಲಿದೆ. ಏಕೆಂದರೆ ಈ ಪಂದ್ಯದಲ್ಲಿ ಗೆಲುವು ದಾಖಲಿಸಿದರೆ ಒಟ್ಟು 14 ಅಂಕಗಳನ್ನು ಪಡೆಯಬಹುದು. ಅಲ್ಲದೆ ಮುಂದಿನ 4 ಮ್ಯಾಚ್​ಗಳಲ್ಲಿ ಒಂದು ಜಯ ಸಾಧಿಸಿದರೆ 16 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಬಹುದು. ಹೀಗಾಗಿ ಇಂದಿನ ಮ್ಯಾಚ್ ಉಭಯ ತಂಡಗಳಿಗೆ ಮಹತ್ವದ ಪಂದ್ಯವಾಗಿ ಮಾರ್ಪಟ್ಟಿದೆ. 

3 / 6
ಇದಾಗ್ಯೂ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ಗೆಲುವು ಅಂದುಕೊಂಡಷ್ಟು ಸುಲಭವಲ್ಲ. ಏಕೆಂದರೆ ಕಳೆದ ಪಂದ್ಯದಲ್ಲಿ ರಾಯಲ್ ಪಡೆ ವಿರುದ್ಧ ಪಾರುಪತ್ಯ ಮೆರೆಯುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಶಸ್ವಿಯಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಡೆಲ್ಲಿ ಬಾಯ್ಸ್ ಕಡೆಯಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

4 / 6
ಇನ್ನು ಉಭಯ ತಂಡಗಳು ಈವರೆಗೆ 32 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 19 ಬಾರಿ ಗೆಲುವು ದಾಖಲಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ 12 ಸಲ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು.

5 / 6
ಇಲ್ಲಿ ಆರ್​ಸಿಬಿ ಮೇಲುಗೈ ಹೊಂದಿದ್ದರೂ, ಪ್ರಸ್ತುತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬಲಿಷ್ಠವಾಗಿದೆ. ಹೀಗಾಗಿ ಈ ಹಿಂದಿನ ಅಂಕಿ ಅಂಶಗಳು ಇಲ್ಲಿ ಗಣನೆಗೆ ಬರುವುದಿಲ್ಲ ಎನ್ನಬಹುದು. ಅದರಲ್ಲೂ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೆಎಲ್ ರಾಹುಲ್ ಸೇರಿದಂತೆ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ದೆಹಲಿ ಜೇಟ್ಲಿ ಸ್ಟೇಡಿಯಂನಲ್ಲಿ ಆರ್​ಸಿಬಿ ಮತ್ತು ಡಿಸಿ ನಡುವೆ ಭರ್ಜರಿ ಪೈಪೋಟಿಯನ್ನಂತು ನಿರೀಕ್ಷಿಸಬಹುದು.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ

ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ

IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ

ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!