IPL 2025: RCB ಗೆದ್ದರೆ ಅಥವಾ ಸೋತರೆ ಏನಾಗಲಿದೆ?
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಪುನರಾರಂಭಕ್ಕೆ ವೇದಿಕೆ ಸಿದ್ಧವಾಗಿದೆ. ಅದರಂತೆ ಶನಿವಾರದಿಂದ (ಮೇ.17) ಟೂರ್ನಿಗೆ ಮತ್ತೆ ಚಾಲನೆ ದೊರೆಯಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಣಕ್ಕಿಳಿಯಲಿವೆ.
Updated on: May 17, 2025 | 10:23 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 58ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಆರ್ಸಿಬಿಗಿಂತ, ಕೆಕೆಆರ್ ಪಾಲಿಗೆ ನಿರ್ಣಾಯಕ.

ಏಕೆಂದರೆ ಈ ಮ್ಯಾಚ್ನಲ್ಲಿ ಗೆದ್ದರೆ ಮಾತ್ರ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಪ್ಲೇಆಫ್ ರೇಸ್ನಲ್ಲಿ ಉಳಿಯಲಿದೆ. ಅತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ದಾಖಲಿಸಿದರೆ ಪ್ಲೇಆಫ್ಗೇರುವುದು ಖಚಿತವಾಗಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಇನ್ನು ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದರೆ 18 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ. ಅಲ್ಲದೆ ಆರ್ಸಿಬಿ ಪಡೆ ಪ್ಲೇಆಫ್ ಆಡುವುದು ಬಹುತೇಕ ಖಚಿತವಾಗಲಿದೆ. ಅಷ್ಟೇ ಅಲ್ಲದೆ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿ ಕಾಣಿಸಿಕೊಳ್ಳಬೇಕಿದ್ದರೆ ಆರ್ಸಿಬಿ ತಂಡವು ಇಂದು ಗೆಲುವು ದಾಖಲಿಸಲೇಬೇಕು.

ಒಂದು ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೆಕೆಆರ್ ವಿರುದ್ಧ ಸೋಲನುಭವಿಸಿದರೆ, ಅಂಕ ಪಟ್ಟಿಯಲ್ಲಿ ಬದಲಾವಣೆ ಏನೂ ಆಗುವುದಿಲ್ಲ. ಅಲ್ಲದೆ ಆರ್ಸಿಬಿ 16 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲೇ ಉಳಿಯಲಿದೆ. ಇದಾಗ್ಯೂ ಪ್ಲೇಆಫ್ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಬೇಕಿದ್ದರೆ ಎಸ್ಆರ್ಹೆಚ್ ಅಥವಾ ಎಲ್ಎಸ್ಜಿ ವಿರುದ್ಧ ಜಯ ಸಾಧಿಸಲೇಬೇಕಾದ ಅನಿವಾರ್ಯತೆ ಎದುರಾಗಲಿದೆ.

ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಇಂದಿನ ಪಂದ್ಯದಲ್ಲಿ ಗೆಲುವು ದಾಖಲಿಸಲೇಬೇಕು. ಈ ಮೂಲಕ 18 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿ ಆರ್ಸಿಬಿ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ತನ್ನ ಹಾದಿಯನ್ನು ಮತ್ತಷ್ಟು ಸುಗಮಗೊಳಿಸಬಹುದು. ಹೀಗಾಗಿ ಇಂದಿನ ಪಂದ್ಯದಲ್ಲಿ ರಾಯಲ್ ಪಡೆಯಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದಾಗಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



