AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಗೆದ್ದರೆ ಅಥವಾ ಸೋತರೆ ಏನಾಗಲಿದೆ?

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಪುನರಾರಂಭಕ್ಕೆ ವೇದಿಕೆ ಸಿದ್ಧವಾಗಿದೆ. ಅದರಂತೆ ಶನಿವಾರದಿಂದ (ಮೇ.17) ಟೂರ್ನಿಗೆ ಮತ್ತೆ ಚಾಲನೆ ದೊರೆಯಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಣಕ್ಕಿಳಿಯಲಿವೆ.

ಝಾಹಿರ್ ಯೂಸುಫ್
|

Updated on: May 17, 2025 | 10:23 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 58ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿಗಿಂತ, ಕೆಕೆಆರ್ ಪಾಲಿಗೆ ನಿರ್ಣಾಯಕ.

1 / 5
ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಪ್ಲೇಆಫ್​ ರೇಸ್​ನಲ್ಲಿ ಉಳಿಯಲಿದೆ. ಅತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ದಾಖಲಿಸಿದರೆ ಪ್ಲೇಆಫ್​ಗೇರುವುದು ಖಚಿತವಾಗಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

2 / 5
ಇನ್ನು ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದರೆ 18 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ. ಅಲ್ಲದೆ ಆರ್​ಸಿಬಿ ಪಡೆ ಪ್ಲೇಆಫ್​ ಆಡುವುದು ಬಹುತೇಕ ಖಚಿತವಾಗಲಿದೆ. ಅಷ್ಟೇ ಅಲ್ಲದೆ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿ ಕಾಣಿಸಿಕೊಳ್ಳಬೇಕಿದ್ದರೆ ಆರ್​ಸಿಬಿ ತಂಡವು ಇಂದು ಗೆಲುವು ದಾಖಲಿಸಲೇಬೇಕು.

3 / 5
ಒಂದು ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೆಕೆಆರ್ ವಿರುದ್ಧ ಸೋಲನುಭವಿಸಿದರೆ, ಅಂಕ ಪಟ್ಟಿಯಲ್ಲಿ ಬದಲಾವಣೆ ಏನೂ ಆಗುವುದಿಲ್ಲ. ಅಲ್ಲದೆ ಆರ್​ಸಿಬಿ 16 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲೇ ಉಳಿಯಲಿದೆ. ಇದಾಗ್ಯೂ ಪ್ಲೇಆಫ್​ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಬೇಕಿದ್ದರೆ ಎಸ್​ಆರ್​ಹೆಚ್ ಅಥವಾ ಎಲ್​ಎಸ್​ಜಿ ವಿರುದ್ಧ ಜಯ ಸಾಧಿಸಲೇಬೇಕಾದ ಅನಿವಾರ್ಯತೆ ಎದುರಾಗಲಿದೆ.

4 / 5
ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಇಂದಿನ ಪಂದ್ಯದಲ್ಲಿ ಗೆಲುವು ದಾಖಲಿಸಲೇಬೇಕು. ಈ ಮೂಲಕ 18 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿ ಆರ್​ಸಿಬಿ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ತನ್ನ ಹಾದಿಯನ್ನು ಮತ್ತಷ್ಟು ಸುಗಮಗೊಳಿಸಬಹುದು. ಹೀಗಾಗಿ ಇಂದಿನ ಪಂದ್ಯದಲ್ಲಿ ರಾಯಲ್ ಪಡೆಯಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದಾಗಿದೆ.

5 / 5