AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಇಂದು RCB ಗೆದ್ದರೆ ಮಹತ್ವದ ಬದಲಾವಣೆ ಖಚಿತ

IPL 2025 RCB vs RR: ಐಪಿಎಲ್​ನ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ಈಗಾಗಲೇ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಆರ್​ಸಿಬಿ ತಂಡವು ಆರ್​ಆರ್ ವಿರುದ್ಧ ಗೆದ್ದರೆ ಒಟ್ಟು 12 ಅಂಕಗಳನ್ನು ಪಡೆದುಕೊಳ್ಳಲಿದೆ.

ಝಾಹಿರ್ ಯೂಸುಫ್
|

Updated on: Apr 24, 2025 | 12:30 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಅಂಕ ಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಲಿದೆ.

1 / 5
ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದರೆ, 12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಬಹುದು. ಅಲ್ಲದೆ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಸುಲಭಗೊಳಿಸಬಹುದಾಗಿದೆ. ಹೀಗಾಗಿ ಇಂದಿನ ಪಂದ್ಯವು ಆರ್​ಸಿಬಿ ಪಾಲಿಗೆ ತುಂಬಾ ಮಹತ್ವದ್ದು.

2 / 5
ಸದ್ಯ ಐಪಿಎಲ್ ಪಾಯಿಂಟ್ಸ್​ ಟೇಬಲ್​ನಲ್ಲಿ ಆರ್​ಸಿಬಿ ತಂಡವು ನಾಲ್ಕನೇ ಸ್ಥಾನದಲ್ಲಿದೆ. ಆಡಿರುವ 8 ಪಂದ್ಯಗಳಲ್ಲಿ 5 ಜಯ ಹಾಗೂ 3 ಸೋಲುಗಳೊಂದಿಗೆ ರಾಯಲ್ ಪಡೆ +0.472 ನೆಟ್ ರನ್ ರೇಟ್​ ಹೊಂದಿದೆ. ಇಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿದರೆ ಉತ್ತಮ ನೆಟ್​ ರನ್ ರೇಟ್​ನೊಂದಿಗೆ ಅಂಕ ಪಟ್ಟಿಯಲ್ಲಿ ಮೇಲೇರಬಹುದು.

3 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 33 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಆರ್​ಸಿಬಿ ತಂಡ 16 ಬಾರಿ ಗೆಲುವು ದಾಖಲಿಸಿದರೆ, ರಾಜಸ್ಥಾನ್ ರಾಯಲ್ಸ್ 14 ಬಾರಿ ಜಯ ಸಾಧಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದೆ.

4 / 5
ಇನ್ನು ಉಭಯ ತಂಡಗಳ ಕೊನೆಯ 5 ಮುಖಾಮಖಿಯನ್ನು ಮಾತ್ರ ತೆಗೆದುಕೊಂಡರೆ, ಆರ್​ಸಿಬಿ ಮೇಲುಗೈ ಹೊಂದಿದೆ. ಕೊನೆಯ ಐದು ಮುಖಾಮುಖಿಯಲ್ಲಿ ಆರ್​ಸಿಬಿ 3 ಜಯ ಸಾಧಿಸಿದರೆ, ಆರ್​ಆರ್ 2 ಗೆಲುವು ದಾಖಲಿಸಿದೆ. ಅದರಲ್ಲೂ ಈ ಬಾರಿಯ ಮೊದಲ ಮುಖಾಮುಖಿಯಲ್ಲಿ ಆರ್​ಆರ್ ತಂಡಕ್ಕೆ ಸೋಲುಣಿಸುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವನ್ನು ಎದುರು ನೋಡಬಹುದು.

5 / 5
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!

‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್

ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?

ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು

ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ

ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್