IPL 2025: RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಗಾಯಾಳು

|

Updated on: Mar 23, 2025 | 7:05 AM

Kolkata Knight Riders vs Royal Challengers Bengaluru: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟರ್ ಮಾಡಿದ ಕೆಕೆಆರ್ ತಂಡವು 20 ಓವರ್​ಗಳಲ್ಲಿ 174 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ಪರ ಫಿಲ್ ಸಾಲ್ಟ್ (56) ಹಾಗೂ ವಿರಾಟ್ ಕೊಹ್ಲಿ (59) ಸ್ಪೋಟಕ ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕಗಳ ನೆರವಿನೊಂದಿಗೆ ಆರ್​ಸಿಬಿ 16.2 ಓವರ್​ಗಳಲ್ಲಿ 177 ರನ್ ಬಾರಿಸಿ 7 ವಿಕೆಟ್​ಗಳ ಜಯ ಸಾಧಿಸಿದೆ.

1 / 5
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​ ಸೀಸನ್-18ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಬಗ್ಗು ಬಡಿದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡವು ಬೌಲಿಂಗ್ ಆಯ್ದುಕೊಂಡಿತು.

2 / 5
ಆದರೆ ಬೌಲಿಂಗ್​ಗಾಗಿ ಕಣಕ್ಕಿಳಿದ ಆರ್​ಸಿಬಿ ಬಳಗದಲ್ಲಿ ಪ್ರಮುಖ ವೇಗಿ ಭುವನೇಶ್ವರ್ ಕುಮಾರ್ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ಇಂಪ್ಯಾಕ್ಟ್ ಸಬ್ ಆಗಿಯೂ ಕೂಡ ಅವರನ್ನು ಬಳಸಿಕೊಳ್ಳಲಾಗಲಿಲ್ಲ. ಇದರ ಬೆನ್ನಲ್ಲೇ ಭುವಿ ಕಣಕ್ಕಿಳಿಯದಿರಲು ಕಾರಣವೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ.

3 / 5
ಕೊಲ್ಕತ್ತಾದಲ್ಲಿ ನಡೆದ ಅಭ್ಯಾಸದ ವೇಳೆ ಭುವನೇಶ್ವರ್ ಕುಮಾರ್ ಅವರ ಕೈಗೆ ಸಣ್ಣ ಗಾಯವಾಗಿದ್ದು, ಹೀಗಾಗಿ ಅವರು ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ. ಈ ಗಾಯವು ಗಂಭೀರವಲ್ಲದಿದ್ದರೂ, ಅವರು ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ.

4 / 5
ಏಕೆಂದರೆ ಭುವಿ ಆರ್​ಸಿಬಿ ತಂಡದ ಪ್ರಮುಖ ವೇಗಿ. ಇನ್ನುಳಿದ 13 ಲೀಗ್​ ಪಂದ್ಯಗಳು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮುಖ್ಯ. ಹೀಗಾಗಿ ಅವರ ಗಾಯವು ಸಂಪೂರ್ಣವಾಗಿ ಗುಣವಾದರೆ ಮಾತ್ರ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಆರ್​ಸಿಬಿ ಮೂಲಗಳು ತಿಳಿಸಿವೆ.

5 / 5
ಆರ್​ಸಿಬಿ ತಂಡದ ಮುಂದಿನ ಪಂದ್ಯವು ಮಾರ್ಚ್ 28 ರಂದು ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಇನ್ನೂ ಐದು ದಿನಗಳ ಕಾಲಾವಕಾಶವಿದೆ. ಇದರೊಳಗೆ ಭುವನೇಶ್ವರ್ ಕುಮಾರ್ ಅವರ ಗಾಯವು ಸಂಪೂರ್ಣ ವಾಸಿಯಾದರೆ, ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದ್ದಾರೆ.

Published On - 7:04 am, Sun, 23 March 25