- Kannada News Photo gallery Cricket photos IPL 2025: RCB's Captain Rajat Patidar Fined 12 Lakh rupees
IPL 2025: ಗೆಲುವಿನ ಬೆನ್ನಲ್ಲೇ RCB ನಾಯಕ ರಜತ್ ಪಾಟಿದಾರ್ಗೆ ದಂಡ ವಿಧಿಸಿದ ಬಿಸಿಸಿಐ
IPL 2025 RCB vs MI: ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2025) 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 221 ರನ್ ಕಲೆಹಾಕಿದರೆ, ಮುಂಬೈ ಇಂಡಿಯನ್ಸ್ ತಂಡವು 209 ರನ್ಗಳಿಸಲಷ್ಟೇ ಶಕ್ತರಾದರು.
Updated on:Apr 08, 2025 | 12:14 PM

IPL 2025: ಮುಂಬೈ ಇಂಡಿಯನ್ಸ್ (MI) ತಂಡದ ಅಂಗಳದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರಾಯಲ್ಲಾಗಿಯೇ ಗೆಲುವು ದಾಖಲಿಸಿದೆ. ಈ ಮೂಲಕ ವಾಂಖೆಡೆ ಸ್ಟೇಡಿಯಂನಲ್ಲಿ ಮರೀಚಿಕೆಯಾಗಿದ್ದ ಗೆಲುವನ್ನು ಮರಳಿ ಪಡೆಯುವಲ್ಲಿ ಆರ್ಸಿಬಿ ತಂಡ ಯಶಸ್ವಿಯಾಗಿದೆ. ಈ ಯಶಸ್ಸಿನ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಇದೀಗ ಆರ್ಸಿಬಿ ತಂಡದ ನಾಯಕ ರಜತ್ ಪಾಟಿದಾರ್ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಇನ್ನು ಈ ಬಾರಿಯ ಐಪಿಎಲ್ನಲ್ಲಿ ದಂಡದ ಶಿಕ್ದೆಗೆ ಗುರಿಯಾಗುತ್ತಿರುವ ನಾಲ್ಕನೇ ನಾಯಕ ರಜತ್ ಪಾಟಿದಾರ್. ಇದಕ್ಕೂ ಮುನ್ನ....

ಹಾರ್ದಿಕ್ ಪಾಂಡ್ಯ: ಮಾರ್ಚ್ 30 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಹಮದಾಬಾದ್ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಲೋ ಓವರ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ವಿಧಿಸಲಾಗಿದೆ.

ರಿಯಾನ್ ಪರಾಗ್: ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪರಾಗ್ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ರಿಷಭ್ ಪಂತ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ದಂಡ ತೆತ್ತಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದ ಕಾರಣ ಪಂತ್ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
Published On - 12:09 pm, Tue, 8 April 25



















