IPL 2025: ದೂರದ ಬ್ರಿಸ್ಬೇನ್​ನಿಂದ RCB ಅಭಿಮಾನಿಗಳಿಗೆ ಗುಡ್ ನ್ಯೂಸ್

Updated on: May 20, 2025 | 3:18 PM

IPL 2025 RCB: ಈ ಬಾರಿಯ ಐಪಿಎಲ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 12 ಪಂದ್ಯಗಳನ್ನಾಡಿದೆ. ಈ ವೇಳೆ 8 ಜಯ ಸಾಧಿಸಿರುವ ಆರ್​ಸಿಬಿ ತಂಡವು ಒಟ್ಟು 17 ಅಂಕಗಳನ್ನು ಕಲೆಹಾಕಿದೆ. ಈ ಮೂಲಕ ಪ್ಲೇಆಫ್ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ. ಇನ್ನೂ ಆರ್​ಸಿಬಿ ತಂಡಕ್ಕೆ ಎರಡು ಲೀಗ್ ಪಂದ್ಯಗಳು ಬಾಕಿಯಿದ್ದು, ಈ ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬಹುದು.

1 / 5
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪ್ಲೇಆಫ್​ಗೆ ಪ್ರವೇಶಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳಿಗೆ ಗುಡ್ ನ್ಯೂಸ್​. ಆರ್​ಸಿಬಿ ತಂಡದ ಪ್ರಮುಖ ಜೋಶ್ ಹೇಝಲ್​ವುಡ್ (Josh Hazelwood) ಮತ್ತೆ ಬೌಲಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಅದು ಕೂಡ ದೂರದ ಬ್ರಿಸ್ಬೇನ್​ನಲ್ಲಿ ಎಂಬುದು ವಿಶೇಷ.

2 / 5
ಅಂದರೆ ಜೋಶ್ ಹೇಝಲ್​ವುಡ್  ಇನ್ನೂ ಸಹ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಭುಜದ ನೋವಿನ ಕಾರಣ ಆಸ್ಟ್ರೇಲಿಯಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೇಝಲ್​ವುಡ್ ಇದೀಗ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ತಮ್ಮ ಚೇತರಿಕೆ ಪ್ರಕ್ರಿಯೆಯ ಭಾಗವಾಗಿ ಬೌಲಿಂಗ್ ಅಭ್ಯಾಸವನ್ನು ಪ್ರಾರಂಭಿಸಿದ್ದಾರೆ. 

3 / 5
ವೈದ್ಯಕೀಯ ಮೇಲ್ವಿಚಾರಣೆಯೊಂದಿಗೆ ಬೌಲಿಂಗ್ ಅಭ್ಯಾಸ ಆರಂಭಿಸಿರುವ ಜೋಶ್ ಹೇಝಲ್​ವುಡ್ ಅವರ ಫಿಟ್​ನೆಸ್ ಬಗ್ಗೆ ಈ ವಾರದೊಳಗೆ ಕ್ರಿಕೆಟ್ ಆಸ್ಟ್ರೇಲಿಯಾಗೆ ಮಾಹಿತಿ ನೀಡುವ ಸಾಧ್ಯತೆಯಿದೆ. ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಿರುವುದು ಖಚಿತವಾದರೆ, ಮೇ 29 ರೊಳಗೆ ಆರ್​ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ.

4 / 5
ಅಂದರೆ ಮೇ 29 ರಿಂದ ಪ್ಲೇಆಫ್ ಪಂದ್ಯಗಳು ಶುರುವಾಗಲಿದ್ದು, ಅದಕ್ಕೂ ಮುನ್ನ ಜೋಶ್ ಹೇಝಲ್​ವುಡ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಲ್ಲಿ ಹೇಝಲ್​ವುಡ್ ಕಣಕ್ಕಿಳಿಯುವುದನ್ನು ನಿರೀಕ್ಷಿಸಬಹುದು.

5 / 5
ಮತ್ತೊಂದೆಡೆ ಆರ್​ಸಿಬಿ ತಂಡದ ವೇಗಿ ಲುಂಗಿ ಎನ್​ಗಿಡಿ ಪ್ಲೇಆಫ್ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ಹೆಸರಿಸಲಾದ ಸೌತ್ ಆಫ್ರಿಕಾ ತಂಡದಲ್ಲಿ ಲುಂಗಿ ಎನ್​ಗಿಡಿ ಸ್ಥಾನ ಪಡೆದಿದ್ದು, ಹೀಗಾಗಿ ಅವರು ಈ ವಾರ ತವರಿಗೆ ಹಿಂತಿರುಗಲಿದ್ದಾರೆ. ಇನ್ನು ಅವರ ಬದಲಿಯಾಗಿ ಆರ್​ಸಿಬಿ ಫ್ರಾಂಚೈಸಿ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿಯನ್ನು ಆಯ್ಕೆ ಮಾಡಿಕೊಂಡಿದೆ.