AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಗಾಯಾಳು!

IPL 2025: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಈವರೆಗೆ 11 ಪಂದ್ಯಗಳನ್ನಾಡಿದೆ. ಈ ವೇಳೆ ಆರ್​ಸಿಬಿ ತಂಡ 8 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೆ, ಮೂರು ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಒಬ್ಬರಾಗಿರುವ ಆರ್​ಸಿಬಿ ತಂಡದ ಪ್ರಮುಖ ಆಟಗಾರರೊಬ್ಬರು ಇದೀಗ ಗಾಯದ ಸಮಸ್ಯೆಗೆ ಸಿಲುಕಿದ್ದಾರೆ.

ಝಾಹಿರ್ ಯೂಸುಫ್
|

Updated on: May 04, 2025 | 12:54 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ (Josh Hazlewood) ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೇ ಕಾರಣದಿಂದಾಗಿ ಅವರು ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 52ನೇ ಪಂದ್ಯದಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್​ಸಿಬಿ ಪರ ಜೋಶ್ ಹ್ಯಾಝಲ್​​ವುಡ್ ಕಣಕ್ಕಿಳಿದಿರಲಿಲ್ಲ. ಬದಲಾಗಿ ಲುಂಗಿ ಎನ್​ಗಿಡಿ ಅವರನ್ನು ಕಣಕ್ಕಿಳಿಸಲಾಗಿತ್ತು.

2 / 5
ಈ ಪಂದ್ಯದಿಂದ ಜೋಶ್ ಹ್ಯಾಝಲ್​ವುಡ್ ಹೊರಗುಳಿಯಲು ಮುಖ್ಯ ಕಾರಣ ಭುಜದ ನೋವಿನ ಸಮಸ್ಯೆ. ಭುಜದ ನೋವಿನಿಂದ ಬಳಲುತ್ತಿರುವ ಹ್ಯಾಝಲ್​ವುಡ್​ಗೆ ಸಿಎಸ್​ಕೆ ವಿರುದ್ಧದ ಪಂದ್ಯದ ವೇಳೆ ವಿಶ್ರಾಂತಿ ನೀಡಲಾಗಿದೆ. ಇದಾಗ್ಯೂ ಅವರು ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬುದಕ್ಕೆ ಯಾವುದೇ ಖಚಿತತೆ ಇಲ್ಲ.

3 / 5
ಏಕೆಂದರೆ ಜೋಶ್ ಹ್ಯಾಝಲ್​ವುಡ್ ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಾತ್ರ ಮುಂದಿನ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಆರ್​ಸಿಬಿ ತಂಡದ ಮೆಂಟರ್ ದಿನೇಶ್ ಕಾರ್ತಿಕ್ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧದ ನಿರ್ಣಾಯಕ ಪಂದ್ಯದಿಂದಲೂ ಹ್ಯಾಝಲ್​ವುಡ್ ಹೊರಗುಳಿಯುವ ಸಾಧ್ಯತೆಯಿದೆ.

4 / 5
ವಿಶೇಷ ಎಂದರೆ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ತಂಡವು ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಜೋಶ್ ಹ್ಯಾಝಲ್​ವುಡ್ ಕೊಡುಗೆ ಅಪಾರ. ಆಡಿರುವ 10 ಪಂದ್ಯಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ ಹ್ಯಾಝಲ್​ವುಡ್ ಒಟ್ಟು 18 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ ಕಳೆದ 7 ಮ್ಯಾಚ್​ಗಳಲ್ಲಿ ಜಯ ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ನಿರ್ಣಾಯಕ ಹಂತದಲ್ಲಿ ಜೋಶ್ ಹ್ಯಾಝಲ್​ವುಡ್ ಗಾಯಗೊಂಡಿರುವುದು ಆರ್​ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿದೆ.

5 / 5
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು

ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ

ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು

ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ

ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್

ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು

ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ

ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ

ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು