IPL 2025: RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಗಾಯಾಳು!
IPL 2025: ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಈವರೆಗೆ 11 ಪಂದ್ಯಗಳನ್ನಾಡಿದೆ. ಈ ವೇಳೆ ಆರ್ಸಿಬಿ ತಂಡ 8 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದರೆ, ಮೂರು ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಒಬ್ಬರಾಗಿರುವ ಆರ್ಸಿಬಿ ತಂಡದ ಪ್ರಮುಖ ಆಟಗಾರರೊಬ್ಬರು ಇದೀಗ ಗಾಯದ ಸಮಸ್ಯೆಗೆ ಸಿಲುಕಿದ್ದಾರೆ.
Updated on: May 04, 2025 | 12:54 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್ವುಡ್ (Josh Hazlewood) ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೇ ಕಾರಣದಿಂದಾಗಿ ಅವರು ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 52ನೇ ಪಂದ್ಯದಲ್ಲಿ ಆರ್ಸಿಬಿ ಮತ್ತು ಸಿಎಸ್ಕೆ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್ಸಿಬಿ ಪರ ಜೋಶ್ ಹ್ಯಾಝಲ್ವುಡ್ ಕಣಕ್ಕಿಳಿದಿರಲಿಲ್ಲ. ಬದಲಾಗಿ ಲುಂಗಿ ಎನ್ಗಿಡಿ ಅವರನ್ನು ಕಣಕ್ಕಿಳಿಸಲಾಗಿತ್ತು.

ಈ ಪಂದ್ಯದಿಂದ ಜೋಶ್ ಹ್ಯಾಝಲ್ವುಡ್ ಹೊರಗುಳಿಯಲು ಮುಖ್ಯ ಕಾರಣ ಭುಜದ ನೋವಿನ ಸಮಸ್ಯೆ. ಭುಜದ ನೋವಿನಿಂದ ಬಳಲುತ್ತಿರುವ ಹ್ಯಾಝಲ್ವುಡ್ಗೆ ಸಿಎಸ್ಕೆ ವಿರುದ್ಧದ ಪಂದ್ಯದ ವೇಳೆ ವಿಶ್ರಾಂತಿ ನೀಡಲಾಗಿದೆ. ಇದಾಗ್ಯೂ ಅವರು ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬುದಕ್ಕೆ ಯಾವುದೇ ಖಚಿತತೆ ಇಲ್ಲ.

ಏಕೆಂದರೆ ಜೋಶ್ ಹ್ಯಾಝಲ್ವುಡ್ ಸಂಪೂರ್ಣ ಫಿಟ್ನೆಸ್ ಸಾಧಿಸಿದರೆ ಮಾತ್ರ ಮುಂದಿನ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಆರ್ಸಿಬಿ ತಂಡದ ಮೆಂಟರ್ ದಿನೇಶ್ ಕಾರ್ತಿಕ್ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧದ ನಿರ್ಣಾಯಕ ಪಂದ್ಯದಿಂದಲೂ ಹ್ಯಾಝಲ್ವುಡ್ ಹೊರಗುಳಿಯುವ ಸಾಧ್ಯತೆಯಿದೆ.

ವಿಶೇಷ ಎಂದರೆ ಈ ಬಾರಿಯ ಐಪಿಎಲ್ನಲ್ಲಿ ಆರ್ಸಿಬಿ ತಂಡವು ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಜೋಶ್ ಹ್ಯಾಝಲ್ವುಡ್ ಕೊಡುಗೆ ಅಪಾರ. ಆಡಿರುವ 10 ಪಂದ್ಯಗಳಲ್ಲಿ 36.5 ಓವರ್ಗಳನ್ನು ಎಸೆದಿರುವ ಹ್ಯಾಝಲ್ವುಡ್ ಒಟ್ಟು 18 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಆರ್ಸಿಬಿ ತಂಡ ಕಳೆದ 7 ಮ್ಯಾಚ್ಗಳಲ್ಲಿ ಜಯ ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ನಿರ್ಣಾಯಕ ಹಂತದಲ್ಲಿ ಜೋಶ್ ಹ್ಯಾಝಲ್ವುಡ್ ಗಾಯಗೊಂಡಿರುವುದು ಆರ್ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿದೆ.
