AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 16 ಅಂಕಗಳನ್ನು ಪಡೆದರೂ ಸಹ RCB ಪ್ಲೇಆಫ್​ಗೆ ಪ್ರವೇಶಿಸಿಲ್ಲ..!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಪ್ಲೇಆಫ್ ರೇಸ್​ನಲ್ಲಿ ಒಟ್ಟು 8 ತಂಡಗಳಿವೆ. 52 ಪಂದ್ಯಗಳ ಮುಕ್ತಾಯದ ವೇಳೆಗೆ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮಾತ್ರ ಅಧಿಕೃತವಾಗಿ ಹೊರಬಿದ್ದಿದೆ. ಇನ್ನುಳಿದ ತಂಡಗಳಿಗೆ ಪ್ಲೇಆಫ್​ಗೆ ಪ್ರವೇಶಿಸಲು ಅವಕಾಶವಿದ್ದು, ಹೀಗಾಗಿ ಈ ವಾರದ ಪಂದ್ಯಗಳಲ್ಲಿ ಪ್ಲೇಆಫ್​ನ ಸ್ಪಷ್ಟ ಚಿತ್ರಣ ದೊರೆಯಲಿದೆ.

ಝಾಹಿರ್ ಯೂಸುಫ್
|

Updated on: May 04, 2025 | 11:03 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 52 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ RCB ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ. ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 8 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 3 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. 

1 / 6
ಈ ಮೂಲಕ ಒಟ್ಟು 16 ಅಂಕಗಳನ್ನು ಪಡೆದಿರುವ ಆರ್​ಸಿಬಿ ತಂಡ ಇನ್ನೂ ಸಹ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಲ್ಲ. ಏಕೆಂದರೆ ಲೀಗ್ ಹಂತದಲ್ಲಿ ಇನ್ನೂ 18 ಪಂದ್ಯಗಳಿವೆ. ಈ ಮ್ಯಾಚ್​ಗಳ ಮೂಲಕ 5 ತಂಡಗಳಿಗೆ 18 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ಅವಕಾಶವಿದೆ. ಹೀಗಾಗಿಯೇ 16 ಅಂಕಗಳನ್ನು ಹೊಂದಿದ್ದರೂ ಆರ್​ಸಿಬಿ ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿಲ್ಲ.

2 / 6
ಅತ್ತ ಕಡೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನೂ 3 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ಒಟ್ಟು 20 ಅಂಕಗಳನ್ನು ಪಡೆಯಬಹುದು. ಹಾಗೆಯೇ ಗುಜರಾತ್ ಟೈಟಾನ್ಸ್ ತಂಡವು ಮುಂದಿನ 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ 22 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಬಹುದು.

3 / 6
ಇನ್ನು ಪಂಜಾಬ್ ಕಿಂಗ್ಸ್ ತಂಡವು ಮುಂದಿನ 4 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 21 ಅಂಕಗಳನ್ನು ಪಡೆಯಲಿದೆ. ಅದೇ ರೀತಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಂದಿನ 4 ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಲು ಯಶಸ್ವಿಯಾದರೆ ಒಟ್ಟು 20 ಅಂಕಗಳನ್ನು ಪಡೆದುಕೊಳ್ಳಲಿದೆ.

4 / 6
ಇತ್ತ ಐದು ತಂಡಗಳಿಗೆ 16 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ಅವಕಾಶ ಇರುವ ಕಾರಣ ಆರ್​ಸಿಬಿ ತಂಡದ ಪ್ಲೇಆಫ್ ಪ್ರವೇಶ ಇನ್ನೂ ಸಹ ಖಚಿತವಾಗಿಲ್ಲ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಬೇಕಿದ್ದರೆ ಮುಂದಿನ ಮೂರು ಮ್ಯಾಚ್​ಗಳಲ್ಲಿ 2 ಗೆಲುವು ದಾಖಲಿಸುವುದು ಅನಿವಾರ್ಯ.

5 / 6
ಇನ್ನು ಆರ್​ಸಿಬಿ ತಂಡದ ಮುಂದಿನ ಎದುರಾಳಿಗಳು ಯಾರೆಂದು ನೋಡುವುದಾದರೆ... ಲಕ್ನೋ ಸೂಪರ್ ಜೈಂಟ್ಸ್ (ಮೇ.9), ಸನ್​ರೈಸರ್ಸ್ ಹೈದರಾಬಾದ್ (ಮೇ.13) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (ಮೇ.17). ಈ ತಂಡಗಳ ವಿರುದ್ಧದ ಗೆಲುವು ದಾಖಲಿಸಿದರೆ ಆರ್​ಸಿಬಿ ತಂಡವು ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ.

6 / 6
Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ

ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು

‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ

ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!

ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ

ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ

ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್