
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 52 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ RCB ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ. ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 8 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 3 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ.

ಈ ಮೂಲಕ ಒಟ್ಟು 16 ಅಂಕಗಳನ್ನು ಪಡೆದಿರುವ ಆರ್ಸಿಬಿ ತಂಡ ಇನ್ನೂ ಸಹ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಲ್ಲ. ಏಕೆಂದರೆ ಲೀಗ್ ಹಂತದಲ್ಲಿ ಇನ್ನೂ 18 ಪಂದ್ಯಗಳಿವೆ. ಈ ಮ್ಯಾಚ್ಗಳ ಮೂಲಕ 5 ತಂಡಗಳಿಗೆ 18 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ಅವಕಾಶವಿದೆ. ಹೀಗಾಗಿಯೇ 16 ಅಂಕಗಳನ್ನು ಹೊಂದಿದ್ದರೂ ಆರ್ಸಿಬಿ ಅಧಿಕೃತವಾಗಿ ಪ್ಲೇಆಫ್ಗೆ ಪ್ರವೇಶಿಸಿಲ್ಲ.

ಅತ್ತ ಕಡೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನೂ 3 ಪಂದ್ಯಗಳಿದ್ದು, ಈ ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ ಒಟ್ಟು 20 ಅಂಕಗಳನ್ನು ಪಡೆಯಬಹುದು. ಹಾಗೆಯೇ ಗುಜರಾತ್ ಟೈಟಾನ್ಸ್ ತಂಡವು ಮುಂದಿನ 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ 22 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಬಹುದು.

ಇನ್ನು ಪಂಜಾಬ್ ಕಿಂಗ್ಸ್ ತಂಡವು ಮುಂದಿನ 4 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 21 ಅಂಕಗಳನ್ನು ಪಡೆಯಲಿದೆ. ಅದೇ ರೀತಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಂದಿನ 4 ಮ್ಯಾಚ್ಗಳಲ್ಲೂ ಗೆಲುವು ದಾಖಲಿಸಲು ಯಶಸ್ವಿಯಾದರೆ ಒಟ್ಟು 20 ಅಂಕಗಳನ್ನು ಪಡೆದುಕೊಳ್ಳಲಿದೆ.

ಇತ್ತ ಐದು ತಂಡಗಳಿಗೆ 16 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ಅವಕಾಶ ಇರುವ ಕಾರಣ ಆರ್ಸಿಬಿ ತಂಡದ ಪ್ಲೇಆಫ್ ಪ್ರವೇಶ ಇನ್ನೂ ಸಹ ಖಚಿತವಾಗಿಲ್ಲ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಧಿಕೃತವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಬೇಕಿದ್ದರೆ ಮುಂದಿನ ಮೂರು ಮ್ಯಾಚ್ಗಳಲ್ಲಿ 2 ಗೆಲುವು ದಾಖಲಿಸುವುದು ಅನಿವಾರ್ಯ.

ಇನ್ನು ಆರ್ಸಿಬಿ ತಂಡದ ಮುಂದಿನ ಎದುರಾಳಿಗಳು ಯಾರೆಂದು ನೋಡುವುದಾದರೆ... ಲಕ್ನೋ ಸೂಪರ್ ಜೈಂಟ್ಸ್ (ಮೇ.9), ಸನ್ರೈಸರ್ಸ್ ಹೈದರಾಬಾದ್ (ಮೇ.13) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (ಮೇ.17). ಈ ತಂಡಗಳ ವಿರುದ್ಧದ ಗೆಲುವು ದಾಖಲಿಸಿದರೆ ಆರ್ಸಿಬಿ ತಂಡವು ಅಧಿಕೃತವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ.