AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ಎಸೆತಗಳಲ್ಲಿ 31 ರನ್ ಬಾರಿಸಿ ದಾಖಲೆ ಬರೆದ ವಿರಾಟ್ ಕೊಹ್ಲಿ

IPL 2025 RCB vs CSK: ಇಂಡಿಯನ್ ಪ್ರೀಮಿಯರ್ ಲೀಗ್​ನ 8ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ ಪಡೆಯನ್ನು 50 ರನ್​ಗಳಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಶಿಖರ್ ಧವನ್ ಅವರ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on:Mar 29, 2025 | 9:04 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 8ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅತ್ಯಂತ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ನಿಧಾನಗತಿಯ ಬ್ಯಾಟಿಂಗ್​​ನೊಂದಿಗೆ 31 ರನ್​ ಕಲೆಹಾಕಿರುವ ಕೊಹ್ಲಿ ಹೆಸರಿಗೆ ಹೊಸ ದಾಖಲೆಯೊಂದು ಸೇರ್ಪಡೆಯಾಗಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಬೌಲಿಂಗ್ ಆಯ್ದುಕೊಂಡಿತು.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಸಾಲ್ಟ್ 16 ಎಸೆತಗಳಲ್ಲಿ 32 ರನ್ ಬಾರಿಸಿದರೆ, ವಿರಾಟ್ ಕೊಹ್ಲಿ 31 ರನ್​ ಕಲೆಹಾಕಲು ಬರೋಬ್ಬರಿ 30 ಎಸೆತಗಳನ್ನು ತೆಗೆದುಕೊಂಡರು. ಈ ಮೂವತ್ತು ರನ್​ಗಳೊಂದಿಗೆ ಕೊಹ್ಲಿ ಸಿಎಸ್​ಕೆ ವಿರುದ್ಧ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

2 / 5
ಐಪಿಎಲ್​ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಶಿಖರ್ ಧವನ್ ಹೆಸರಿನಲ್ಲಿತ್ತು. ಧವನ್ ಸಿಎಸ್​ಕೆ ವಿರುದ್ಧ ಆಡಿದ 29 ಪಂದ್ಯಗಳಲ್ಲಿ ಒಟ್ಟು 1057 ರನ್ ಬಾರಿಸಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅತ್ಯಂತ ಯಶಸ್ವಿ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದರು.

3 / 5
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾಗಿದ್ದಾರೆ. ಕಿಂಗ್ ಕೊಹ್ಲಿ ಸಿಎಸ್​ಕೆ ವಿರುದ್ಧ ಈವರೆಗೆ 33 ಇನಿಂಗ್ಸ್ ಆಡಿದ್ದು, ಈ ವೇಳೆ 9 ಅರ್ಧಶತಕಗಳೊಂದಿಗೆ 1084 ರನ್ ಕಲೆಹಾಕಿದ್ದಾರೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಇನ್ನು ವಿರಾಟ್ ಕೊಹ್ಲಿಯ ನಿಧಾನಗತಿಯ ಬ್ಯಾಟಿಂಗ್ ಹೊರತಾಗಿಯೂ ಈ ಪಂದ್ಯದಲ್ಲಿ ಆರ್​ಸಿಬಿ ತಂಡ 20 ಓವರ್​ಗಳಲ್ಲಿ 196 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 146 ರನ್​ಗಳಿಸಿ 50 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

5 / 5

Published On - 9:04 am, Sat, 29 March 25

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ

ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು