- Kannada News Photo gallery Cricket photos IPL 2025: RCB's Virat Kohli Creates New Records in T20 Cricket
Virat Kohli: ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
IPL 2025 RCB vs SRH: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 231 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಆರ್ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಸ್ಪೋಟಕ ಆರಂಭ ಒದಗಿಸಿದ್ದರು. ಇದಾಗ್ಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 19.5 ಓವರ್ಗಳಲ್ಲಿ 189 ರನ್ಗಳಿಸಿ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿದೆ.
Updated on: May 24, 2025 | 7:39 AM

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಮತ್ತೊಂದು ದಾಖಲೆ ಬರೆದಿದ್ದಾರೆ. ಅದು ಸಹ ಫೋರ್ಗಳೊಂದಿಗೆ ಎಂಬುದು ವಿಶೇಷ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 25 ಎಸೆತಗಳಲ್ಲಿ 43 ರನ್ ಬಾರಿಸಿದ್ದರು.

ಈ 43 ರನ್ಗಳಲ್ಲಿ 1 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳು ಒಳಗೊಂಡಿದ್ದವು. ಈ ಏಳು ಫೋರ್ಗಳೊಂದಿಗೆ ಟಿ20 ಕ್ರಿಕೆಟ್ನಲ್ಲಿ ಒಂದೇ ತಂಡದ ಪರ 800 ಫೋರ್ಗಳನ್ನು ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ. ಅಂದರೆ ಕಿಂಗ್ ಕೊಹ್ಲಿ ಆರ್ಸಿಬಿ ಪರ ಈವರೆಗೆ 800+ ಫೋರ್ಗಳನ್ನು ಬಾರಿಸಿದ್ದಾರೆ.

ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿದರೆ ವಿಶ್ವದ ಯಾವುದೇ ಬ್ಯಾಟರ್ ಒಂದೇ ತಂಡದ ಪರ 800 ಫೋರ್ಗಳನ್ನು ಬಾರಿಸಿಲ್ಲ. ಇದಕ್ಕೂ ಮುನ್ನ ಇಂಗ್ಲೆಂಡ್ನ ಜೇಮ್ಸ್ ವಿನ್ಸ್ ಹ್ಯಾಂಪ್ಶೈರ್ ತಂಡದ ಪರ 694 ಫೋರ್ಗಳನ್ನು ಬಾರಿಸಿರುವುದು ಸರ್ವಶ್ರೇಷ್ಠ ದಾಖಲೆಯಾಗಿತ್ತು.

ಆದರೆ ಈ ದಾಖಲೆಯನ್ನು ಅಳಿಸಿ ಹಾಕಿರುವ ವಿರಾಟ್ ಕೊಹ್ಲಿ ಇದೀಗ 800 ಫೋರ್ಗಳ ಮೈಲುಗಲ್ಲು ದಾಟಿದ್ದಾರೆ. ಈ ಮೂಲಕ ಒಂದೇ ತಂಡದ ಪರ ಟಿ20 ಕ್ರಿಕೆಟ್ನಲ್ಲಿ 800+ ಫೋರ್ಗಳನ್ನು ಬಾರಿಸಿದ ವಿಶ್ವದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅದರಲ್ಲೂ ಐಪಿಎಲ್ ದಾಖಲೆಯೊಂದಿಗೆ ಕೊಹ್ಲಿ ವರ್ಲ್ಡ್ ರೆಕಾರ್ಡ್ ಅನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಆರ್ಸಿಬಿ ಪರ ಈವರೆಗೆ 270 ಇನಿಂಗ್ಸ್ ಆಡಿದ್ದು ಈ ವೇಳೆ 6724 ಎಸೆತಗಳನ್ನು ಎದುರಿಸಿ ಒಟ್ಟು 8976 ರನ್ ಕಲೆಹಾಕಿದ್ದಾರೆ. ಇದರ ನಡುವೆ ಒಟ್ಟು 801 ಫೋರ್ ಹಾಗೂ 305 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಒಂದೇ ತಂಡದ ಪರ 1000+ ಬೌಂಡರಿ ಬಾರಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು ಇಶಾನ್ ಕಿಶನ್ (94) ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ 20 ಓವರ್ಗಳಲ್ಲಿ 231 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 19.5 ಓವರ್ಗಳಲ್ಲಿ 189 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಎಸ್ಆರ್ಹೆಚ್ ತಂಡ 42 ರನ್ಗಳ ಭರ್ಜರಿ ಜಯ ಸಾಧಿಸಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




