Virat Kohli: ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

Updated on: May 24, 2025 | 7:39 AM

IPL 2025 RCB vs SRH: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 231 ರನ್​ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಸ್ಪೋಟಕ ಆರಂಭ ಒದಗಿಸಿದ್ದರು. ಇದಾಗ್ಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 19.5 ಓವರ್​ಗಳಲ್ಲಿ 189 ರನ್​ಗಳಿಸಿ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿದೆ.

1 / 6
ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಮತ್ತೊಂದು ದಾಖಲೆ ಬರೆದಿದ್ದಾರೆ. ಅದು ಸಹ ಫೋರ್​ಗಳೊಂದಿಗೆ ಎಂಬುದು ವಿಶೇಷ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 25 ಎಸೆತಗಳಲ್ಲಿ 43 ರನ್ ಬಾರಿಸಿದ್ದರು.

2 / 6
ಈ 43 ರನ್​ಗಳಲ್ಲಿ 1 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳು ಒಳಗೊಂಡಿದ್ದವು. ಈ ಏಳು ಫೋರ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಒಂದೇ ತಂಡದ ಪರ 800 ಫೋರ್​ಗಳನ್ನು ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ. ಅಂದರೆ ಕಿಂಗ್ ಕೊಹ್ಲಿ ಆರ್​ಸಿಬಿ ಪರ ಈವರೆಗೆ 800+ ಫೋರ್​ಗಳನ್ನು ಬಾರಿಸಿದ್ದಾರೆ.

3 / 6
ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿದರೆ ವಿಶ್ವದ ಯಾವುದೇ ಬ್ಯಾಟರ್ ಒಂದೇ ತಂಡದ ಪರ 800 ಫೋರ್​ಗಳನ್ನು ಬಾರಿಸಿಲ್ಲ. ಇದಕ್ಕೂ ಮುನ್ನ ಇಂಗ್ಲೆಂಡ್​ನ ಜೇಮ್ಸ್ ವಿನ್ಸ್​ ಹ್ಯಾಂಪ್​ಶೈರ್ ತಂಡದ ಪರ 694 ಫೋರ್​ಗಳನ್ನು ಬಾರಿಸಿರುವುದು ಸರ್ವಶ್ರೇಷ್ಠ ದಾಖಲೆಯಾಗಿತ್ತು.

4 / 6
ಆದರೆ ಈ ದಾಖಲೆಯನ್ನು ಅಳಿಸಿ ಹಾಕಿರುವ ವಿರಾಟ್ ಕೊಹ್ಲಿ ಇದೀಗ 800 ಫೋರ್​ಗಳ ಮೈಲುಗಲ್ಲು ದಾಟಿದ್ದಾರೆ. ಈ ಮೂಲಕ ಒಂದೇ ತಂಡದ ಪರ ಟಿ20 ಕ್ರಿಕೆಟ್​ನಲ್ಲಿ 800+ ಫೋರ್​ಗಳನ್ನು ಬಾರಿಸಿದ ವಿಶ್ವದ ಏಕೈಕ ಬ್ಯಾಟರ್​ ಎನಿಸಿಕೊಂಡಿದ್ದಾರೆ. ಅದರಲ್ಲೂ ಐಪಿಎಲ್​ ದಾಖಲೆಯೊಂದಿಗೆ ಕೊಹ್ಲಿ ವರ್ಲ್ಡ್​ ರೆಕಾರ್ಡ್ ಅನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

5 / 6
ವಿರಾಟ್ ಕೊಹ್ಲಿ ಆರ್​ಸಿಬಿ ಪರ ಈವರೆಗೆ 270 ಇನಿಂಗ್ಸ್ ಆಡಿದ್ದು ಈ ವೇಳೆ 6724 ಎಸೆತಗಳನ್ನು ಎದುರಿಸಿ ಒಟ್ಟು 8976 ರನ್ ಕಲೆಹಾಕಿದ್ದಾರೆ. ಇದರ ನಡುವೆ ಒಟ್ಟು 801 ಫೋರ್​ ಹಾಗೂ 305 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಒಂದೇ ತಂಡದ ಪರ 1000+ ಬೌಂಡರಿ ಬಾರಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

6 / 6
ಇನ್ನು ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು ಇಶಾನ್ ಕಿಶನ್ (94) ಅವರ ಸ್ಪೋಟಕ ಬ್ಯಾಟಿಂಗ್​ ನೆರವಿನಿಂದ 20 ಓವರ್​ಗಳಲ್ಲಿ 231 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 19.5 ಓವರ್​ಗಳಲ್ಲಿ 189 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಎಸ್​ಆರ್​ಹೆಚ್​ ತಂಡ 42 ರನ್​ಗಳ ಭರ್ಜರಿ ಜಯ ಸಾಧಿಸಿದೆ.