- Kannada News Photo gallery Cricket photos Rishabh Pant is set to become the new Captain of Lucknow Supergiants in IPL 2025
IPL 2025: LSG ತಂಡಕ್ಕೆ ಹೊಸ ನಾಯಕ ಆಯ್ಕೆ
IPL 2025: ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸಿದ್ದರು. ಆದರೆ ಈ ಬಾರಿಯ ಮೆಗಾ ಹರಾಜಿನ ಮೂಲಕ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದ್ದಾರೆ. ಹೀಗಾಗಿ ಇದೀಗ ಲಕ್ನೋ ಸೂಪರ್ ಜೈಂಟ್ಸ್ ಐಪಿಎಲ್ 2025 ರಲ್ಲಿ ರಿಷಭ್ ಪಂತ್ ಅವರನ್ನು ನಾಯಕರಾಗಿ ಆಯ್ಕೆ ಮಾಡಲು ನಿರ್ಧರಿಸಿದ್ದಾರೆ.
Updated on:Jan 19, 2025 | 8:47 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಹೊಸ ನಾಯಕ ಮುನ್ನಡೆಸಲಿದ್ದಾರೆ. ಅದು ಸಹ ಭಾರತೀಯ ಆಟಗಾರನ ಮುಂದಾಳತ್ವದಲ್ಲಿ ಕಣಕ್ಕಿಳಿಯಲು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ನಿರ್ಧರಿಸಿದೆ.

ಅದರಂತೆ ಐಪಿಎಲ್ 2025 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕ್ಯಾಪ್ಟನ್ ಆಗಿ ರಿಷಭ್ ಪಂತ್ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಪಂತ್ ಅವರನ್ನು ಈ ಬಾರಿಯ ಮೆಗಾ ಹರಾಜಿನ ಮೂಲಕ ಲಕ್ನೋ ಫ್ರಾಂಚೈಸಿ ಖರೀದಿಸಿತ್ತು.

ಇದೀಗ 27 ಕೋಟಿ ರೂ. ನೀಡಿ ಖರೀದಿಸಿದ ಆಟಗಾರನಿಗೆ ಕ್ಯಾಪ್ಟನ್ ಪಟ್ಟ ನೀಡಲು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ನಿರ್ಧರಿಸಿದೆ. ಅದರಂತೆ ಮುಂಬರುವ ಐಪಿಎಲ್ನಲ್ಲಿ ರಿಷಭ್ ಪಂತ್ ಮುಂದಾಳತ್ವದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಕಣಕ್ಕಿಳಿಯಲಿದೆ.

ಇದಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ನಿಕೋಲಸ್ ಪೂರನ್ ಕಾಣಿಸಿಕೊಳ್ಳಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೀಗ ನಿರ್ಧಾರ ಬದಲಿಸಿರುವ ಲಕ್ನೋ ಸೂಪರ್ ಜೈಂಟ್ಸ್ ಮಾಲೀಕರು ರಿಷಭ್ ಪಂತ್ ಅವರಿಗೆ ಪಟ್ಟ ಕಟ್ಟಲು ಮುಂದಾಗಿದ್ದಾರೆ. ಇನ್ನು ಪೂರನ್ ಉಪನಾಯಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಲಕ್ನೋ ಸೂಪರ್ ಜೈಂಟ್ಸ್ ತಂಡ: ರಿಷಭ್ ಪಂತ್, ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಆಯುಷ್ ಬದೋನಿ, ರಿಷಭ್ ಪಂತ್, ಡೇವಿಡ್ ಮಿಲ್ಲರ್, ಐಡೆನ್ ಮಾರ್ಕ್ರಾಮ್, ಮಿಚೆಲ್ ಮಾರ್ಷ್, ಅವೇಶ್ ಖಾನ್, ಅಬ್ದುಲ್ ಸಮದ್, ಆರ್ಯನ್ ಜುಯಲ್, ಆಕಾಶ್ ದೀಪ್, ಹಿಮ್ಮತ್ ಸಿಂಗ್, ಎಂ. ಸಿದ್ಧಾರ್ಥ್, ದಿಗ್ವೇಶ್ ಸಿಂಗ್, ಶಹಬಾಝ್ ಅಹ್ಮದ್, ಆಕಾಶ್ ಸಿಂಗ್, ಶಮರ್ ಜೋಸೆಫ್, ಪ್ರಿನ್ಸ್ ಯಾದವ್, ಯುವರಾಜ್ ಚೌಧರಿ, ರಾಜವರ್ಧನ್ ಹಂಗರ್ಗೇಕರ್, ಅರ್ಶಿನ್ ಕುಲಕರ್ಣಿ, ಮ್ಯಾಥ್ಯೂ ಬ್ರೀಟ್ಝ್ಕ್.
Published On - 8:30 am, Sun, 19 January 25



















