Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸೋಲಿನ ಬೆನ್ನಲ್ಲೇ ರಿಷಭ್ ಪಂತ್​ಗೂ ಬಿಸಿ ಮುಟ್ಟಿಸಿದ ಸಂಜೀವ್ ಗೊಯೆಂಕಾ

IPL 2025 LSG vs DC: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್-18 ರಲ್ಲಿ ಹೊಸ ನಾಯಕನೊಂದಿಗೆ ಕಣಕ್ಕಿಳಿದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮೊದಲ ಪಂದ್ಯದಲ್ಲೇ ಸೋಲನುಭವಿಸಿದೆ. ಈ ಪಂದ್ಯದಲ್ಲಿ ನಾಯಕನಾಗಿ ಪಾದಾರ್ಪಣೆ ಮಾಡಿದ ರಿಷಭ್ ಪಂತ್ ಶೂನ್ಯಕ್ಕೆ ಔಟಾಗಿದ್ದರು. ಅತ್ತ ಪಂದ್ಯವನ್ನೂ ಕೂಡ ಸೋತುಕೊಂಡರು. ಇದರ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಪಂತ್ ಜೊತೆ ಚರ್ಚಿಸುತ್ತಿರುವುದು ಕಂಡು ಬಂದಿದೆ.

ಝಾಹಿರ್ ಯೂಸುಫ್
|

Updated on: Mar 25, 2025 | 7:30 AM

IPL 2025: ಐಪಿಎಲ್​ನ 4ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ (LSG) 1 ವಿಕೆಟ್​ನಿಂದ ಸೋಲೊಪ್ಪಿಕೊಂಡಿದೆ.​ ಈ ಸೋಲಿನ ಬೆನ್ನಲ್ಲೇ LSG ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಅವರು ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಅದು ಕೂಡ ಈ ಹಿಂದಿನಂತೆ ನಾಯಕನಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಂತೆ..!

1 / 5
ಹೌದು, ಕಳೆದ ಸೀಸನ್​ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬಳಿಕ ಸಂಜೀವ್ ಗೊಯೆಂಕಾ ಎಲ್​ಎಸ್​ಜಿ ತಂಡದ ನಾಯಕರಾಗಿದ್ದ ಕೆಎಲ್ ರಾಹುಲ್ ಅವರನ್ನು ಮೈದಾನದಲ್ಲೇ ತರಾಟೆಗೆ ತೆಗೆದುಕೊಂಡಿದ್ದರು.

2 / 5
ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರ ಈ ನಡೆಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಅಲ್ಲದೆ ಇದೇ ಕಾರಣದಿಂದ ಕೆಎಲ್ ರಾಹುಲ್ ಕೂಡ LSG ತಂಡವನ್ನು ತೊರೆದಿದ್ದರು. ಇದೀಗ ನಾಯಕ ಬದಲಾದರೂ, ಲಕ್ನೋ ಸೂಪರ್ ಜೈಂಟ್ಸ್ ಮಾಲೀಕರು ಮಾತ್ರ ಬದಲಾಗಿಲ್ಲ.

3 / 5
ಏಕೆಂದರೆ ಮೊದಲ ಪಂದ್ಯದ ಸೋಲಿನ ಬೆನ್ನಲ್ಲೇ ಹೊಸ ನಾಯಕ ರಿಷಭ್ ಪಂತ್ ಅವರೊಂದಿಗೆ ಸಂಜೀವ್ ಗೊಯೆಂಕಾ ಅದೇನೋ ಚರ್ಚಿಸುತ್ತಿರುವಂತೆ ಕಂಡು ಬಂದಿದ್ದಾರೆ. ಇದರ ಬೆನ್ನಲ್ಲೇ ಕೆಎಲ್ ರಾಹುಲ್​ಗೆ ಆದ ಪರಿಸ್ಥಿತಿಯೇ ಪಂತ್​ಗೂ ಬಂದು ಎರಗಲಿದೆಯಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಮುಂದಿನ ಪಂದ್ಯಗಳ ಫಲಿತಾಂಶದೊಂದಿಗೆ ಸ್ಪಷ್ಟ ಉತ್ತರವಂತು ಸಿಗಲಿದೆ.

4 / 5
ಇನ್ನು ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಿಚೆಲ್ ಮಾರ್ಷ್ (72) ಹಾಗೂ ನಿಕೋಲಸ್ ಪೂರನ್ (75) ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕಗಳ ನೆರವಿನಿಂದ ಲಕ್ನೋ ತಂಡ 209 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಅಶುತೋಷ್ ಶರ್ಮಾ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 31 ಎಸೆತಗಳನ್ನು ಎದುರಿಸಿದ ಅಶುತೋಷ್ 5 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 66 ರನ್ ಬಾರಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 1 ವಿಕೆಟ್​ನ ರೋಚಕ ಜಯ ತಂದುಕೊಟ್ಟರು.

5 / 5
Follow us