- Kannada News Photo gallery Cricket photos IPL 2025: Rishabh Pant spotted having intense chat with LSG owner Sanjiv Goenka
IPL 2025: ಸೋಲಿನ ಬೆನ್ನಲ್ಲೇ ರಿಷಭ್ ಪಂತ್ಗೂ ಬಿಸಿ ಮುಟ್ಟಿಸಿದ ಸಂಜೀವ್ ಗೊಯೆಂಕಾ
IPL 2025 LSG vs DC: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್-18 ರಲ್ಲಿ ಹೊಸ ನಾಯಕನೊಂದಿಗೆ ಕಣಕ್ಕಿಳಿದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮೊದಲ ಪಂದ್ಯದಲ್ಲೇ ಸೋಲನುಭವಿಸಿದೆ. ಈ ಪಂದ್ಯದಲ್ಲಿ ನಾಯಕನಾಗಿ ಪಾದಾರ್ಪಣೆ ಮಾಡಿದ ರಿಷಭ್ ಪಂತ್ ಶೂನ್ಯಕ್ಕೆ ಔಟಾಗಿದ್ದರು. ಅತ್ತ ಪಂದ್ಯವನ್ನೂ ಕೂಡ ಸೋತುಕೊಂಡರು. ಇದರ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಪಂತ್ ಜೊತೆ ಚರ್ಚಿಸುತ್ತಿರುವುದು ಕಂಡು ಬಂದಿದೆ.
Updated on: Mar 25, 2025 | 7:30 AM

IPL 2025: ಐಪಿಎಲ್ನ 4ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ (LSG) 1 ವಿಕೆಟ್ನಿಂದ ಸೋಲೊಪ್ಪಿಕೊಂಡಿದೆ. ಈ ಸೋಲಿನ ಬೆನ್ನಲ್ಲೇ LSG ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಅವರು ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಅದು ಕೂಡ ಈ ಹಿಂದಿನಂತೆ ನಾಯಕನಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಂತೆ..!

ಹೌದು, ಕಳೆದ ಸೀಸನ್ ಐಪಿಎಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬಳಿಕ ಸಂಜೀವ್ ಗೊಯೆಂಕಾ ಎಲ್ಎಸ್ಜಿ ತಂಡದ ನಾಯಕರಾಗಿದ್ದ ಕೆಎಲ್ ರಾಹುಲ್ ಅವರನ್ನು ಮೈದಾನದಲ್ಲೇ ತರಾಟೆಗೆ ತೆಗೆದುಕೊಂಡಿದ್ದರು.

ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರ ಈ ನಡೆಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಅಲ್ಲದೆ ಇದೇ ಕಾರಣದಿಂದ ಕೆಎಲ್ ರಾಹುಲ್ ಕೂಡ LSG ತಂಡವನ್ನು ತೊರೆದಿದ್ದರು. ಇದೀಗ ನಾಯಕ ಬದಲಾದರೂ, ಲಕ್ನೋ ಸೂಪರ್ ಜೈಂಟ್ಸ್ ಮಾಲೀಕರು ಮಾತ್ರ ಬದಲಾಗಿಲ್ಲ.

ಏಕೆಂದರೆ ಮೊದಲ ಪಂದ್ಯದ ಸೋಲಿನ ಬೆನ್ನಲ್ಲೇ ಹೊಸ ನಾಯಕ ರಿಷಭ್ ಪಂತ್ ಅವರೊಂದಿಗೆ ಸಂಜೀವ್ ಗೊಯೆಂಕಾ ಅದೇನೋ ಚರ್ಚಿಸುತ್ತಿರುವಂತೆ ಕಂಡು ಬಂದಿದ್ದಾರೆ. ಇದರ ಬೆನ್ನಲ್ಲೇ ಕೆಎಲ್ ರಾಹುಲ್ಗೆ ಆದ ಪರಿಸ್ಥಿತಿಯೇ ಪಂತ್ಗೂ ಬಂದು ಎರಗಲಿದೆಯಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಮುಂದಿನ ಪಂದ್ಯಗಳ ಫಲಿತಾಂಶದೊಂದಿಗೆ ಸ್ಪಷ್ಟ ಉತ್ತರವಂತು ಸಿಗಲಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಿಚೆಲ್ ಮಾರ್ಷ್ (72) ಹಾಗೂ ನಿಕೋಲಸ್ ಪೂರನ್ (75) ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕಗಳ ನೆರವಿನಿಂದ ಲಕ್ನೋ ತಂಡ 209 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಅಶುತೋಷ್ ಶರ್ಮಾ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 31 ಎಸೆತಗಳನ್ನು ಎದುರಿಸಿದ ಅಶುತೋಷ್ 5 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ ಅಜೇಯ 66 ರನ್ ಬಾರಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 1 ವಿಕೆಟ್ನ ರೋಚಕ ಜಯ ತಂದುಕೊಟ್ಟರು.



















