IPL 2025: ಕ್ರಿಸ್ ಗೇಲ್ ದಾಖಲೆ ಧೂಳೀಪಟ ಮಾಡಿದ ರೊಮಾರಿಯೊ ಶೆಫರ್ಡ್

Updated on: May 04, 2025 | 10:32 AM

IPL 2025 Romario Shepherd: ಇಂಡಿಯನ್ ಪ್ರೀಮಿಯರ್​ ಲೀಗ್​ನಲ್ಲಿ (ಐಪಿಎಲ್ 2025) ರೊಮಾರಿಯೊ ಶೆಫರ್ಡ್ ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ. ಈ ಅರ್ಧಶತಕದೊಂದಿಗೆ ಐಪಿಎಲ್​ನಲ್ಲಿ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್ (13 ಎಸೆತಗಳು) ಅಗ್ರಸ್ಥಾನದಲ್ಲಿದ್ದಾರೆ.

1 / 5
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರೊಮಾರಿಯೊ ಶೆಫರ್ಡ್ (Romario Shepherd)​ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 52ನೇ ಪಂದ್ಯದಲ್ಲಿ ರೊಮಾರಿಯೊ ಶೆಫರ್ಡ್ ಸ್ಪೋಟಕ ಅರ್ಧಶತಕ ಬಾರಿಸಿದ್ದರು.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರೊಮಾರಿಯೊ ಶೆಫರ್ಡ್ (Romario Shepherd)​ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 52ನೇ ಪಂದ್ಯದಲ್ಲಿ ರೊಮಾರಿಯೊ ಶೆಫರ್ಡ್ ಸ್ಪೋಟಕ ಅರ್ಧಶತಕ ಬಾರಿಸಿದ್ದರು.

2 / 5

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೊಮಾರಿಯೊ ಶೆಫರ್ಡ್ 14 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 53 ರನ್ ಬಾರಿಸಿದ್ದರು. ಈ ಸ್ಪೋಟಕ ಅರ್ಧಶತಕದೊಂದಿಗೆ ಆರ್​ಸಿಬಿ ಪರ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ ದಾಖಲೆ ರೊಮಾರಿಯೊ ಪಾಲಾಯಿತು.

3 / 5

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. 2013 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಗೇಲ್ ಪುಣೆ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದರು.

4 / 5

ಇದೀಗ ಬರೋಬ್ಬರಿ 12 ವರ್ಷಗಳ ಬಳಿಕ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆ ಮುರಿಯುವಲ್ಲಿ ವೆಸ್ಟ್ ಇಂಡೀಸ್ ಆಟಗಾರನೇ ಆಗಿರುವ ರೊಮಾರಿಯೊ ಶೆಫರ್ಡ್ ಯಶಸ್ವಿಯಾಗಿದ್ದಾರೆ. ಅದು ಕೂಡ 14 ಎಸೆತಗಳಲ್ಲಿ ಸ್ಪೋಟಕ ಹಾಫ್ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ.

5 / 5

ಇನ್ನು ರೊಮಾರಿಯೊ ಶೆಫರ್ಡ್ ಬಾರಿಸಿದ ಈ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 213 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 211 ರನ್​ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ 2 ರನ್​ಗಳ ರೋಚಕ ಜಯ ಸಾಧಿಸಿದೆ.

Loading...
Unable to load recommendations.
Follow Us