AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪ್ಲೇಆಫ್ ಪಂದ್ಯಗಳಿಗೆ ರೊಮಾರಿಯೊ ಶೆಫರ್ಡ್ ಡೌಟ್

IPL 2025 Romario Shepherd: CSK ವಿರುದ್ಧದ ಪಂದ್ಯದಲ್ಲಿ ಕೇವಲ 14 ಎಸೆತಗಳಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿ ರೊಮಾರಿಯೊ ಶೆಫರ್ಡ್ ಆರ್​ಸಿಬಿ ತಂಡದ ಗೆಲುವಿನ ರೂವಾರಿಯಾಗಿ ಹೊರಹೊಮ್ಮಿದ್ದರು. ಅಲ್ಲದೆ ಬೌಲಿಂಗ್ ಹಾಗೂ ಫೀಲ್ಡಿಂಗ್ ಮೂಲಕ ಆರ್​ಸಿಬಿ ತಂಡ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಇದೀಗ ನಿರ್ಣಾಯಕ ಪಂದ್ಯಗಲಿಗೆ ರೊಮಾರಿಯೊ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ.

ಝಾಹಿರ್ ಯೂಸುಫ್
|

Updated on: May 08, 2025 | 7:55 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಆಘಾತದ ಮೇಲೆ ಆಘಾತ ಎದುರಾಗಿದೆ. ಒಂದೆಡೆ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಭುಜದ ನೋವಿನಿಂದ ಬಳಲುತ್ತಿದ್ದರೆ, ಮತ್ತೊಂದೆಡೆ ರೊಮಾರಿಯೊ ಶೆಫರ್ಡ್ (Romario Shepherd) ನಿರ್ಣಾಯಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

1 / 5
ಆರ್​ಸಿಬಿ ತಂಡದ ಆಲ್​ರೌಂಡರ್ ರೊಮಾರಿಯೊ ಶೆಫರ್ಡ್ ಮುಂದಿನ ವಾರ ವೆಸ್ಟ್ ಇಂಡೀಸ್​ಗೆ ಹಿಂತಿರುಗುವ ಸಾಧ್ಯತೆಯಿದೆ. ಏಕೆಂದರೆ ಮೇ 21 ರಿಂದ ವೆಸ್ಟ್ ಇಂಡೀಸ್ ತಂಡವು ಐರ್ಲೆಂಡ್ ವಿರುದ್ಧ ಸರಣಿ ಆಡಲಿದ್ದು. ಇದರ ಬೆನ್ನಲ್ಲೇ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ನಡೆಯಲಿದೆ. ಈ ಸರಣಿಗಾಗಿ ಆಯ್ಕೆ ಮಾಡಲಾದ ವೆಸ್ಟ್ ಇಂಡೀಸ್ ತಂಡದಲ್ಲಿ ರೊಮಾರಿಯೊ ಶೆಫರ್ಡ್ ಕಾಣಿಸಿಕೊಂಡಿದ್ದಾರೆ.

2 / 5
ಹೀಗಾಗಿ ಮೇ 17ರ ಬಳಿಕ ರೊಮಾರಿಯೊ ಶೆಫರ್ಡ್ ತವರಿಗೆ ಹಿಂತಿರುವ ಸಾಧ್ಯತೆ ಹೆಚ್ಚಿದೆ. ಅಂದರೆ ಆರ್​ಸಿಬಿ ತಂಡವು ತನ್ನ ಕೊನೆಯ ಲೀಗ್ ಪಂದ್ಯವನ್ನು ಮೇ 17 ರಂದು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದ್ದು, ಈ ಪಂದ್ಯದ ಬಳಿಕ ಶೆಫರ್ಡ್​ ರಾಷ್ಟ್ರೀಯ ತಂಡವನ್ನು ಸೇರಿಕೊಳ್ಳಲು ಕೆರಿಬಿಯನ್ ದ್ವೀಪಕ್ಕೆ ಮರಳಲಿದ್ದಾರೆ ಎನ್ನಬಹುದು.

3 / 5
ಇತ್ತ ಐಪಿಎಲ್ ಪ್ಲೇಆಫ್ ಪಂದ್ಯಗಳು ಮೇ 20 ರಿಂದ ಶುರುವಾಗಲಿದೆ. ಮೇ 20 ರಂದು ಕ್ವಾಲಿಫೈಯರ್ 1 ಪಂಧ್ಯ ನಡೆದರೆ, ಮೇ 21 ರಂದು ಎಲಿಮಿನೇಟರ್ ಪಂದ್ಯ ಜರುಗಲಿದೆ. ಇದಾದ ಬಳಿಕ ಮೇ 23 ರಂದು ಕ್ವಾಲಿಫೈಯರ್ 2 ಪಂದ್ಯ ನಡೆಯಲಿದೆ. ಹಾಗೆಯೇ ಫೈನಲ್ ಪಂದ್ಯವು ಮೇ 25 ರಂದು ಜರುಗಲಿದೆ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಒಂದು ಪಂದ್ಯ ಗೆದ್ದರೆ ಪ್ಲೇಆಫ್ ಪ್ರವೇಶಿಸುವುದು ಬಹುತೇಕ ಖಚಿತವಾಗಲಿದೆ. ಇದಾಗ್ಯೂ ಪ್ಲೇಆಫ್ ಪಂದ್ಯಗಳಲ್ಲಿ ಹೊಡಿಬಡಿ ದಾಂಡಿಗ ರೊಮಾರಿಯೊ ಶೆಫರ್ಡ್ ಕಾಣಿಸಿಕೊಳ್ಳುವುದು ಅನುಮಾನ ಎಂದೇ ಹೇಳಬಹುದು. 

5 / 5
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ

ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು