AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ CWI

IPL 2025 RCB vs KKR: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಇಂದಿನಿಂದ ಮತ್ತೆ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಣಕ್ಕಿಳಿಯಲಿವೆ.

ಝಾಹಿರ್ ಯೂಸುಫ್
|

Updated on:May 17, 2025 | 7:33 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-18ರ ಉಳಿದ ಪಂದ್ಯಗಳಿ ಇಂದಿನಿಂದ (ಮೇ 17) ಶುರುವಾಗಲಿದೆ. ಇಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೂ ಮುನ್ನವೇ ಆರ್​ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಅದು ಕೂಡ ವೆಸ್ಟ್ ಇಂಡೀಸ್​ ಕ್ರಿಕೆಟ್ ಮಂಡಳಿ ಕಡೆಯಿಂದ ಎಂಬುದು ವಿಶೇಷ.

1 / 5
ವೆಸ್ಟ್ ಇಂಡೀಸ್​ ತಂಡದ ಸ್ಟಾರ್ ಆಲ್​ರೌಂಡರ್ ರೊಮಾರಿಯೊ ಶೆಫರ್ಡ್ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಮೇ 29 ರಿಂದ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಣ ಸರಣಿ ಶುರುವಾಗಲಿದ್ದು, ಇದಕ್ಕಾಗಿ ಅವರು ಅರ್ಧದಲ್ಲೇ ಐಪಿಎಲ್ ಟೂರ್ನಿ ತೊರೆಯಲಿದ್ದಾರೆ ಎಂದು ವರದಿಯಾಗಿತ್ತು.

2 / 5
ಆದರೀಗ ರೊಮಾರಿಯೊ ಶೆಫರ್ಡ್​ಗೆ ಸಂಪೂರ್ಣ ಟೂರ್ನಿ ಮುಗಿಸಲು ಕ್ರಿಕೆಟ್ ವೆಸ್ಟ್ ಇಂಡೀಸ್ (CWI) ಅನುಮತಿ ನೀಡಿದೆ. ಅಲ್ಲದೆ ಅವರ ಬದಲಿಗೆ ಇಂಗ್ಲೆಂಡ್ ಸರಣಿಗೆ ಜೆಡಿಯಾ ಬ್ಲೇಡ್ಸ್ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಲ್ಲೂ ರೊಮಾರಿಯೊ ಶೆಫರ್ಡ್ ಕಾಣಿಸಿಕೊಳ್ಳುವುದು ಖಚಿತ.

3 / 5
ಇತ್ತ ರೊಮಾರಿಯೊ ಶೆಫರ್ಡ್ ಲಭ್ಯತೆಯು ಆರ್​ಸಿಬಿ ತಂಡದ ಬಲವನ್ನು ಮತ್ತಷ್ಟು ಹೆಚ್ಚಿಸಿದೆ ಎನ್ನಬಹುದು. ಏಕೆಂದರೆ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಅಂತಿಮ ಓವರ್​ಗಳಲ್ಲಿ ಅಬ್ಬರಿಸಿದ್ದ ಶೆಫರ್ಡ್ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಅಲ್ಲದೆ ಬೌಲಿಂಗ್ ಹಾಗೂ ಫೀಲ್ಡಿಂಗ್​ ಮೂಲಕ ಕೂಡ ಆರ್​ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಹೀಗಾಗಿ ಉಳಿದ ಪಂದ್ಯಗಳಿಗೆ ಶೆಫರ್ಡ್ ಲಭ್ಯತೆಯು ಮಧ್ಯಮ ಕ್ರಮಾಂಕದಲ್ಲಿ ಆರ್​ಸಿಬಿ ತಂಡದ ಚಿಂತೆಯನ್ನು ದೂರ ಮಾಡಿದೆ ಎನ್ನಬಹುದು.

4 / 5
ಇನ್ನು ರೊಮಾರಿಯೊ ಶೆಫರ್ಡ್ ಅಲ್ಲದೆ ಗುಜರಾತ್ ಟೈಟಾನ್ಸ್ ತಂಡದ ಶೆರ್ಫೇನ್ ರುದರ್ಫೋರ್ಡ್​ಗೂ ಪ್ಲೇಆಫ್ ಪಂದ್ಯಗಳನ್ನು ಆಡಲು ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ರುದರ್ಫೋರ್ಡ್​ ಬದಲಿಯಾಗಿ ವೆಸ್ಟ್ ಇಂಡೀಸ್ ತಂಡಕ್ಕೆ  ಜಾನ್ ಕ್ಯಾಂಪ್‌ಬೆಲ್ ಆಯ್ಕೆಯಾಗಿದ್ದಾರೆ. ಗುಜರಾತ್ ಟೈಟಾನ್ಸ್ ತಂಡದ ಎಲ್ಲಾ ಪಂದ್ಯಗಳಲ್ಳೂ ಶೆರ್ಫೇನ್ ರುದರ್ಫೋರ್ಡ್​ ಕೂಡ ಕಾಣಿಸಿಕೊಳ್ಳಲಿದ್ದಾರೆ.

5 / 5

Published On - 7:33 am, Sat, 17 May 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ