AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 2025 ರ ಐಪಿಎಲ್​ಗೆ ಆರ್​ಸಿಬಿಯ ಬಲಿಷ್ಠ ಪ್ಲೇಯಿಂಗ್ 11

RCB playing 11, IPL 2025: 2025 ರ ಐಪಿಎಲ್ ಮೆಗಾ ಹರಾಜಿನಲ್ಲಿ ಎಲ್ಲಾ 10 ಫ್ರಾಂಚೈಸಿಗಳು ಬಲಿಷ್ಠ ತಂಡಗಳನ್ನು ಕಟ್ಟುವಲ್ಲಿ ಯಶಸ್ವಯಾಗಿವೆ. ಎಲ್ಲಾ ಫ್ರಾಂಚೈಸಿಗಳಂತೆ ಆರ್​ಸಿಬಿ ಕೂಡ ಈ ಬಾರಿ ಅಳೆದು ತೂಗಿ ಹಲವು ಸ್ಟಾರ್ ಕ್ರಿಕೆಟಿಗರನ್ನು ಖರೀದಿಸಿದೆ. ಅವರಲ್ಲಿ ಯಾರು ಪ್ಲೇಯಿಂಗ್​ 11 ರಲ್ಲಿ ಸ್ಥಾನ ಪಡೆಯಲಿದ್ದಾರೆ ಎಂಬುದನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: Nov 25, 2024 | 11:04 PM

Share
ಸೌದಿ ಅರೇಬಿಯಾದ ಜೆಡ್ಡಾ ನಗರದಲ್ಲಿ ನಡೆದ 2025 ರ ಐಪಿಎಲ್ ಮೆಗಾ ಹರಾಜಿನಲ್ಲಿ ಎಲ್ಲಾ 10 ಫ್ರಾಂಚೈಸಿಗಳು ಬಲಿಷ್ಠ ತಂಡಗಳನ್ನು ಕಟ್ಟುವಲ್ಲಿ ಯಶಸ್ವಯಾಗಿವೆ. ಎಲ್ಲಾ ಫ್ರಾಂಚೈಸಿಗಳಂತೆ ಆರ್​ಸಿಬಿ ಕೂಡ ಈ ಬಾರಿ ಅಳೆದು ತೂಗಿ ಹಲವು ಸ್ಟಾರ್ ಕ್ರಿಕೆಟಿಗರನ್ನು ಖರೀದಿಸಿದೆ. ಅವರಲ್ಲಿ ಯಾರು ಪ್ಲೇಯಿಂಗ್​ 11 ರಲ್ಲಿ ಸ್ಥಾನ ಪಡೆಯಲಿದ್ದಾರೆ ಎಂಬುದನ್ನು ನೋಡುವುದಾದರೆ..

1 / 12
ಕಳೆದ ಬಾರಿ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದು ಅಬ್ಬರ ಸೃಷ್ಟಿಸಿದ್ದ ಇಂಗ್ಲೆಂಡ್​ನ ಸ್ಟಾರ್ ವಿಕೆಟ್​ಕೀಪರ್ ಪಿಲ್ ಸಾಲ್ಟ್, ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿಯುವುದು ಖಚಿತವಗಿದೆ. ಇದರ ಜೊತೆಗೆ ಸಾಲ್ಟ್ ವಿಕೆಟ್​ ಕೀಪರ್ ಆಗಿಯೂ ಕಾಣಿಸಿಕೊಳ್ಳಲಿದ್ದಾರೆ.

2 / 12
ಎಂದಿನಂತೆ ವಿರಾಟ್ ಕೊಹ್ಲಿ, ಈ ಬಾರಿಯೂ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಕಳೆದ ಕೆಲವು ಆವೃತ್ತಿಗಳಿಂದ ಆರಂಭಿಕನಾಗಿ ಯಶಸ್ವಿಯಾಗಿರುವ ಕೊಹ್ಲಿ ಆರಂಭಿಕ ಜವಬ್ದಾರಿಯ ಜೊತೆಗೆ ನಾಯಕನಾಗಿಯೂ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.

3 / 12
ಈಗಾಗಲೇ ತಂಡದಲ್ಲಿ ಉಳಿದುಕೊಂಡಿದ್ದ ಭಾರತದ ಆಟಗಾರ ರಜತ್ ಪಾಟೀದರ್, ಮುಂದಿನ  ಆವೃತ್ತಿಯಲ್ಲೂ ಆರ್​ಸಿಬಿ ಪರ ಕಣಕ್ಕಿಳಿಯಲಿದ್ದು, ಅವರು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಹುದು.

4 / 12
ಕಳೆದ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಆಡಿದ್ದ ಇಂಗ್ಲೆಂಡ್​ನ ಸ್ಟಾರ್ ಆಲ್‌ರೌಂಡರ್ ಲಿಯಾಮ್ ಲಿವಿಂಗ್​ಸ್ಟೋನ್, ಈ ಬಾರಿ ಆರ್​ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ. ಮಧ್ಯಮ ಕ್ರಮಾಂಕಕ್ಕೆ ಹೇಳಿ ಮಾಡಿಸಿದ ಆಟಗಾರನಾಗಿರುವ ಲಿವಿಂಗ್​ಸ್ಟೋನ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದು, ಬೌಲಿಂಗ್​ನಲ್ಲೂ ನೆರವಾಗಲಿದ್ದಾರೆ.

5 / 12
ಲಿಯಾಮ್ ಲಿವಿಂಗ್​ಸ್ಟೋನ್​ರಂತೆ ಕಳೆದ ಬಾರಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜಿತೇಶ್ ಶರ್ಮಾ ಐದನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ಸಾಧ್ಯತೆಗಳಿವೆ. ವಿಕೆಟ್ ಕೀಪರ್ ಆಗಿ ಪಿಲ್ ಸಾಲ್ಟ್ ಇರುವ ಕಾರಣ, ಜಿತೇಶ್ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ.

6 / 12
ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್‌ಮನ್ ಟಿಮ್ ಡೇವಿಡ್ ಮತ್ತೆ ಆರ್​ಸಿಬಿ ತಂಡವನ್ನು ಸೇರಿಕೊಂಡಿದ್ದು, ಎಂದಿನಂತೆ ಅವರ ಗೇಮ್ ಫಿನಿಶರ್​ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಆರನೇ ಕ್ರಮಾಂಕದಲ್ಲಿ ಟಿಮ್ ಡೇವಿಡ್ ಆಡಲಿದ್ದಾರೆ.

7 / 12
ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್​ಜೈಂಟ್ಸ್ ತಂಡದ ಪರ ಆಡಿದ್ದ ಸ್ಪಿನ್ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಇದೇ ಮೊದಲ ಬಾರಿಗೆ ಆರ್​ಸಿಬಿ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದು, ಅವರು 7ನೇ ಕ್ರಮಾಂದಲ್ಲಿ ಕಣಕ್ಕಿಳಿಯಲಿದ್ದಾರೆ.

8 / 12
ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ 14 ವರ್ಷಗಳ ನಂತರ ಮತ್ತೆ ಆರ್​ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ. ಅವರು ತಂಡದ ಬೌಲಿಂಗ್ ದಾಳಿಯನ್ನು ಮುನ್ನಡೆಸುವುದರ ಜೊತೆಗೆ 8ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.

9 / 12
ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹೇಜಲ್​ವುಡ್ ತಂಡದ ಪ್ರಮುಖ ವಿದೇಶಿ ಬೌಲರ್​ಗಳಲ್ಲಿ ಒಬ್ಬರಾಗಿದ್ದು, ಅವರು ಪ್ಲೇಯಿಂಗ್​ 11 ರಲ್ಲಿ ಕಾಣಿಸಿಕೊಳ್ಳುವುದು ಖಚಿತ. ಹೀಗಾಗಿ ಅವರು 9ನೇ ಕ್ರಮಾಂಕದಲ್ಲಿ ಆಡಬಹುದು.

10 / 12
ಇನ್ನು ಈ ಮೊದಲೇ ಆರ್​ಸಿಬಿ ತಂಡದಲ್ಲಿರುವ ಭಾರತದ ಯುವ ವೇಗದ ಬೌಲರ್​ ಯಶ್ ದಯಾಳ್ ತಂಡದಲ್ಲಿ ಆಡುವುದು ಖಚಿತವಾಗಿದ್ದು, ಅವರು 10ನೇ ಕ್ರಮಾಂಕದಲ್ಲಿ ಆಡಬಹುದು.

11 / 12
11ನೇ ಆಟಗಾರನಾಗಿ ಸುಯೇಶ್ ಶರ್ಮಾ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕಳೆದ ಬಾರಿ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡದ ಪರ ಆಡಿದ್ದ ಸುಯೇಶ್ ತಮ್ಮ ಗೂಗ್ಲಿ ಸ್ಪಿನ್ ದಾಳಿಯ ಮೂಲಕವೇ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

12 / 12
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್