AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆ ಭರ್ಜರಿ ದಾಖಲೆ… ಈ ರೀತಿಯಾಗಿ ಟ್ರೋಫಿ ಎತ್ತಿಹಿಡಿದ ಏಕೈಕ ತಂಡ RCB

IPL 2025 Final RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಯಲ್ಲಾಗಿ ಟ್ರೋಫಿ ಎತ್ತಿ ಹಿಡಿದಿದೆ. ಅದು ಕೂಡ ಭರ್ಜರಿ ದಾಖಲೆಯೊಂಧಿಗೆ ಎಂಬುದು ವಿಶೇಷ. ಅಂದರೆ ಐಪಿಎಲ್​ ಇತಿಹಾಸದಲ್ಲಿ ಯಾವುದೇ ತಂಡಕ್ಕೂ ಸಾಧ್ಯವಾಗದ ರೀತಿಯಲ್ಲಿ ಆರ್​ಸಿಬಿ ಚೊಚ್ಚಲ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿದೆ.

ಝಾಹಿರ್ ಯೂಸುಫ್
|

Updated on: Jun 04, 2025 | 8:24 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆದರೆ ಈ ಚಾಂಪಿಯನ್ ಪಟ್ಟವು ಅಂತಿಂಥ ಗೆಲುವಿನಿಂದ ದಕ್ಕಿದ್ದಲ್ಲ. ಬದಲಾಗಿ ದಾಖಲೆಯ ವಿಜಯದೊಂದಿಗೆ ಮೂಡಿಬಂದಿದೆ. ಅಂದರೆ ಐಪಿಎಲ್ ಇತಿಹಾಸದಲ್ಲಿ ಆರ್​ಸಿಬಿ ರೀತಿ ಯಾವುದೇ ತಂಡ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿಲ್ಲ.

1 / 5
ಏಕೆಂದರೆ ಈ ಬಾರಿಯ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಟ್ಟು 16 ಪಂದ್ಯಗಳನ್ನಾಡಿದೆ. ಈ 16 ಮ್ಯಾಚ್​ಗಳಲ್ಲಿ ಸೋತಿರುವುದು ಕೇವಲ 4 ಪಂದ್ಯಗಳನ್ನು ಮಾತ್ರ. ಅದರಲ್ಲಿ 9 ಪಂದ್ಯಗಳನ್ನು ಅವೇ ಮೈದಾನದಲ್ಲಿ ಗೆದುಕೊಂಡಿದೆ. ಅಂದರೆ ಬೆಂಗಳೂರಿನ ಹೊರಗೆ ಆರ್​ಸಿಬಿ ಸತತ 9 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ.

2 / 5
ಐಪಿಎಲ್ ಸೀಸನ್​ವೊಂದರಲ್ಲಿ ತವರಿನ ಹೊರಗೆ ಸತತ 9 ಪಂದ್ಯಗಳನ್ನು ಗೆದ್ದು ಟ್ರೋಫಿ ಎತ್ತಿ ಹಿಡಿದ ಮತ್ತೊಂದು ತಂಡವಿಲ್ಲ. ಅಂದರೆ ಆರ್​ಸಿಬಿ ತಂಡವು ಐಪಿಎಲ್​ನಲ್ಲಿ ಈವರೆಗೆ ಯಾರಿಂದಲೂ ಕೂಡ ಸಾಧ್ಯವಾಗದ ಗೆಲುವಿನ ನಾಗಾಲೋಟದೊಂದಿಗೆ ಚಾಂಪಿಯನ್​ ಪಟ್ಟ ಅಲಂಕರಿಸಿದೆ.

3 / 5
ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಎದುರಾಳಿ ತಂಡಗಳ ತವರು ಮೈದಾನದಲ್ಲಿ 7 ಜಯ ಹಾಗೂ ತವರಿನ ಹೊರಗೆ ನಡೆದ ಪ್ಲೇಆಫ್ ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಐಪಿಎಲ್ ಟ್ರೋಫಿ ಗೆದ್ದ ಏಕೈಕ ತಂಡವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊರಹೊಮ್ಮಿದೆ. ಅದು ಕೂಡ 17 ವರ್ಷಗಳ ಕಾಯುವಿಕೆಯ ಬಳಿಕ ಎಂಬುದು ವಿಶೇಷ.

4 / 5
ಇನ್ನು ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 190 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 184 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 6 ರನ್​ಗಳ ರೋಚಕ ಜಯ ಸಾಧಿಸಿ ಆರ್​ಸಿಬಿ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿದಿದೆ.

5 / 5
Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?

ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ

ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!

ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!

ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!

ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ

ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?

ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!

ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?

ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು