AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಎಡಗೈ ದಾಂಡಿಗರ ಸಿಡಿಲಬ್ಬರಕ್ಕೆ RCB ದಾಖಲೆ ಧೂಳೀಪಟ

IPL 2025 RR vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 47ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 209 ರನ್ ಕಲೆಹಾಕಿತು. ಈ ಗುರಿಯನ್ನು ರಾಜಸ್ಥಾನ್ ರಾಯಲ್ಸ್ ತಂಡ 15.5 ಓವರ್​ಗಳಲ್ಲಿ ಚೇಸ್ ಮಾಡಿ 8 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Apr 29, 2025 | 11:09 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ಅತೀ ಕಡಿಮೆ ಓವರ್​ಗಳಲ್ಲಿ 200+ ರನ್​ಗಳ ಚೇಸ್ ಮಾಡುವ ಮೂಲಕ. ಹೀಗೆ ಚೇಸ್ ಮಾಡಿ ಹೊಸ ಇತಿಹಾಸ ನಿರ್ಮಿಸಿದ್ದು ರಾಜಸ್ಥಾನ್ ರಾಯಲ್ಸ್ (RR) ತಂಡ. ಈ ಮೂಲಕ ಆರ್​ಸಿಬಿ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಆರ್​ಆರ್ ಪಡೆ ಮುರಿದಿದೆ.

1 / 7
ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ಪರ ನಾಯಕ ಶುಭ್​ಮನ್ ಗಿಲ್ (84) ಅರ್ಧಶತಕ ಬಾರಿಸಿದರು. ಈ ಹಾಫ್ ಸೆಂಚುರಿಯ ನೆರವಿನೊಂದಿಗೆ ಗುಜರಾತ್ ಟೈಟಾನ್ಸ್ 20 ಓವರ್​ಗಳಲ್ಲಿ 209 ರನ್ ಕಲೆಹಾಕಿತು.

2 / 7
ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಎಡಗೈ ದಾಂಡಿಗರಾದ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಸ್ಪೋಟಕ ಆರಂಭ ಒದಗಿಸಿದ್ದರು. ಇಬ್ಬರು ಯುವ ದಾಂಡಿಗ ಆರ್ಭಟಕ್ಕೆ ನಲುಗಿದ ಗುಜರಾತ್ ಟೈಟಾನ್ಸ್ ತಂಡವು ಪವರ್​ಪ್ಲೇನಲ್ಲೇ 87 ರನ್​ಗಳನ್ನು ಬಿಟ್ಟುಕೊಟ್ಟರು.

3 / 7
ಪವರ್​ಪ್ಲೇ ಬಳಿಕ ಕೂಡ ಸಿಡಿಲಬ್ಬರ ಮುಂದುವರೆಸಿದ ರಾಜಸ್ಥಾನ್ ರಾಯಲ್ಸ್ ಓಪನರ್​ಗಳು ಸಿಕ್ಸ್-ಫೋರ್​ಗಳ ಸುರಿಮಳೆಗೈದರು. ಇದರ ನಡುವೆ ವೈಭವ್ ಸೂರ್ಯವಂಶಿ ಕೇವಲ 35 ಎಸೆತಗಳಲ್ಲಿ ಶತಕ ಪೂರೈಸಿ ಭರ್ಜರಿ ದಾಖಲೆ ನಿರ್ಮಿಸಿದರು. ಅಲ್ಲದೆ ಮೊದಲ ವಿಕೆಟ್​ಗೆ 166 ರನ್​ಗಳ ಜೊತೆಯಾಟವಾಡಿದ ಬಳಿಕ ವೈಭವ್ ಸೂರ್ಯವಂಶಿ (101) ವಿಕೆಟ್ ಒಪ್ಪಿಸಿದರು.

4 / 7
ಆ ಬಳಿಕ ಸ್ಪೋಟಕ ಇನಿಂಗ್ಸ್ ಮುಂದುವರೆಸಿದ ಯಶಸ್ವಿ ಜೈಸ್ವಾಲ್ 40 ಎಸೆತಗಳಲ್ಲಿ ಅಜೇಯ 70 ರನ್ ಬಾರಿಸಿದರು. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಯಾನ್ ಪರಾಗ್ 15 ಎಸೆತಗಳಲ್ಲಿ 32 ರನ್ ಸಿಡಿಸಿದರು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವು 15.5 ಓವರ್​ಗಳಲ್ಲಿ 212 ರನ್ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

5 / 7
ಈ ಗೆಲುವಿನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತೀ ವೇಗವಾಗಿ 200+ ರನ್​ ಸ್ಕೋರ್ ಚೇಸ್ ಮಾಡಿ ಗೆದ್ದ ದಾಖಲೆ ರಾಜಸ್ಥಾನ್ ರಾಯಲ್ಸ್ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿತ್ತು. 2024 ರಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ  16 ಓವರ್​ಗಳಲ್ಲಿ 201 ರನ್​ಗಳನ್ನು ಬೆನ್ನತ್ತಿ ಆರ್​ಸಿಬಿ ತಂಡವು ಈ ಭರ್ಜರಿ ದಾಖಲೆ ನಿರ್ಮಿಸಿತ್ತು.

6 / 7
ಇದೀಗ ಕೇವಲ 15.5 ಓವರ್​ಗಳಲ್ಲಿ 212 ರನ್​ಗಳನ್ನು ಬೆನ್ನತ್ತುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವು ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಅತೀ ಕಡಿಮೆ ಎಸೆತಗಳಲ್ಲಿ 200+ ಸ್ಕೋರ್ ಚೇಸ್ ಮಾಡಿದ ತಂಡವೆಂಬ ಹೆಗ್ಗಳಿಕೆಯನ್ನು ಆರ್​ಆರ್​ ಪಡೆ ತನ್ನದಾಗಿಸಿಕೊಂಡಿದೆ.

7 / 7
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?

ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು