IPL 2025: ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ಶ್ರೇಯಸ್ ಅಯ್ಯರ್

Updated on: May 20, 2025 | 1:30 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-18 ರಲ್ಲಿ (ಐಪಿಎಲ್ 2025) ಪಂಜಾಬ್ ಕಿಂಗ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದೆ. ಈ ವೇಳೆ 8 ಗೆಲುವು ದಾಖಲಿಸಿರುವ ಪಂಜಾಬ್ ಪಡೆ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಈ ಮೂಲಕ 11 ವರ್ಷಗಳ ಬಳಿಕ ಪಂಜಾಬ್ ಕಿಂಗ್ಸ್ ತಂಡವು ಪ್ಲೇಆಫ್ ಆಡಲು ಸಜ್ಜಾಗಿ ನಿಂತಿದೆ.

1 / 5
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬರೋಬ್ಬರಿ 11 ವರ್ಷಗಳ ಬಳಿಕ ಪಂಜಾಬ್ ಕಿಂಗ್ಸ್ ಪ್ಲೇಆಫ್ ಪ್ರವೇಶಿಸಿದೆ. ಇದಕ್ಕೂ ಮುನ್ನ ಪಂಜಾಬ್ ಪಡೆ ಪ್ಲೇಆಫ್ ಆಡಿದ್ದು 2014 ರಲ್ಲಿ. ಇದಾದ ಬಳಿಕ ಒಮ್ಮೆಯೂ ಟಾಪ್-4 ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿರಲಿಲ್ಲ. ಆದರೆ ಈ ಬಾರಿ ಶ್ರೇಯಸ್ ಅಯ್ಯರ್ (Shreyas Iyer) ಮುಂದಾಳತ್ವದಲ್ಲಿ ಕಣಕ್ಕಿಳಿದಿರುವ ಪಂಜಾಬ್ ಕಿಂಗ್ಸ್ ಲೀಗ್ ಹಂತದ ಪಂದ್ಯಗಳ ಮುಕ್ತಾಯಕ್ಕೂ ಮುನ್ನವೇ ಪ್ಲೇಆಫ್​ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ.

2 / 5
ಇದರೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಮೂರು ತಂಡಗಳನ್ನು ಪ್ಲೇಆಫ್​ಗೇರಿಸಿದ ಮೊದಲ ನಾಯಕ ಎಂಬ ದಾಖಲೆಯೊಂದು ಶ್ರೇಯಸ್ ಅಯ್ಯರ್ ಪಾಲಾಗಿದೆ. ಐಪಿಎಲ್​ನಲ್ಲಿ ಶ್ರೇಯಸ್ ಅಯ್ಯರ್ ಈವರೆಗೆ ಮೂರು ತಂಡಗಳನ್ನು ಮುನ್ನಡೆಸಿದ್ದಾರೆ. ಈ ಮೂರು ತಂಡಗಳು ಕೂಡ ಪ್ಲೇಆಫ್​ಗೆ ಪ್ರವೇಶಿಸಿದೆ ಎಂಬುದೇ ವಿಶೇಷ.

3 / 5
2019 ಮತ್ತು 2020 ರಲ್ಲಿ ಶ್ರೇಯಸ್ ಅಯ್ಯರ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಡೆಲ್ಲಿ ಪಡೆ ಪ್ಲೇಆಫ್​ಗೇರಿತ್ತು. ಅದರಲ್ಲೂ 2020 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಫೈನಲ್​ಗೇರಿಸುವಲ್ಲಿ ಶ್ರೇಯಸ್ ಅಯ್ಯರ್ ಪ್ರಮುಖ ಪಾತ್ರವಹಿಸಿದ್ದರು.

4 / 5
2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಶ್ರೇಯಸ್ ಅಯ್ಯರ್, ಕೆಕೆಆರ್​ ಪಡೆಗೆ 10 ವರ್ಷಗಳ ಬಳಿಕ ಟ್ರೋಫಿ ಗೆದ್ದು ಕೊಡುವಲ್ಲಿ ಯಶಸ್ವಿಯಾದರು. ಈ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್​​ ತಂಡಕ್ಕೆ ಟ್ರೋಫಿ ಗೆದ್ದುಕೊಟ್ಟ 2ನೇ ಕ್ಯಾಪ್ಟನ್ ಎನಿಸಿಕೊಂಡರು.

5 / 5
ಇದೀಗ ಶ್ರೇಯಸ್ ಅಯ್ಯರ್ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಲ್ಲದೆ ಚೊಚ್ಚಲ ಸೀಸನ್​ನಲ್ಲೇ ಪಂಜಾಬ್ ಪಡೆಯನ್ನು ಪ್ಲೇಆಫ್​ಗೆ ತಲುಪಿಸಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಮೂರು ತಂಡಗಳನ್ನು ಪ್ಲೇಆಫ್​ಗೇರಿಸಿದ ಏಕೈಕ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರ್ ಹೊರಹೊಮ್ಮಿದ್ದಾರೆ.