- Kannada News Photo gallery Cricket photos IPL 2025: Shreyas Iyer named new Punjab Kings captain on Big Boss' stage
IPL 2025: ಬಿಗ್ ಬಾಸ್ ವೇದಿಕೆ ಮೇಲೆ ಪಂಜಾಬ್ ಕಿಂಗ್ಸ್ ತಂಡದ ನೂತನ ನಾಯಕನ ಘೋಷಣೆ
IPL 2025 Punjab Kings Captain: ಐಪಿಎಲ್ ಸೀಸನ್ 17 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸಿದ್ದ ಶ್ರೇಯಸ್ ಅಯ್ಯರ್ ಅವರನ್ನು ಈ ಬಾರಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಬರೋಬ್ಬರಿ 26.75 ಕೋಟಿ ರೂ.ಗೆ ಖರೀದಿಸಿದೆ. ನಾಯಕತ್ವದ ಟಾರ್ಗೆಟ್ನೊಂದಿಗೆ ದುಬಾರಿ ವೆಚ್ಚದಲ್ಲಿ ಖರೀದಿಸಿದ ಆಟಗಾರನಿಗೆ ಇದೀಗ ಪಂಜಾಬ್ ಕಿಂಗ್ಸ್ ಕ್ಯಾಪ್ಟನ್ ಪಟ್ಟ ನೀಡಿದೆ.
Updated on: Jan 13, 2025 | 7:41 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ 18 ಕ್ಕಾಗಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ನೂತನ ನಾಯಕನನ್ನು ಆಯ್ಕೆ ಮಾಡಿದೆ. ಹೀಗೆ ಆಯ್ಕೆಯಾದ ನಾಯಕನ ಘೋಷಣೆಯಾಗಿದ್ದು ಬಿಗ್ ಬಾಸ್ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಎಂಬುದು ವಿಶೇಷ.

ಹೌದು, ಐಪಿಎಲ್ 2025 ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ. ಹಿಂದಿಯ ಬಿಗ್ ಬಾಗ್ ರಿಯಾಲಿಟಿ ಶೋನ ಭಾನುವಾರದ ಎಪಿಸೋಡ್ನಲ್ಲಿ ಪಂಜಾಬ್ ಕಿಂಗ್ಸ್ ಆಟಗಾರರಾದ ಶ್ರೇಯಸ್ ಅಯ್ಯರ್, ಯುಜ್ವೇಂದ್ರ ಚಹಲ್ ಹಾಗೂ ಶಶಾಂಕ್ ಸಿಂಗ್ ಮುಖ್ಯ ಅತಿಥಿಗಳಾಗಿ ಕಾಣಿಸಿಕೊಂಡಿದ್ದರು.

ಈ ವೇಳೆ ಅತಿಥಿಗಳನ್ನು ಬರಮಾಡಿಕೊಂಡ ಬಾಲಿವುಡ್ ತಾರೆ, ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಸಲ್ಮಾನ್ ಖಾನ್ ಪಂಜಾಬ್ ಕಿಂಗ್ಸ್ ತಂಡ ಮುಂದಿನ ನಾಯಕ ಶ್ರೇಯಸ್ ಅಯ್ಯರ್ ಎಂದು ಘೋಷಿಸಿದರು. ವಿಶೇಷ ಎಂದರೆ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಟಿವಿ ಕಾರ್ಯಕ್ರಮದ ಮೂಲಕ ನಾಯಕನ ಘೋಷಣೆಯಾಗಿದೆ.

ಇನ್ನು ಪಂಜಾಬ್ ಕಿಂಗ್ಸ್ ತಂಡದ ಉಪನಾಯಕನಾಗಿ ಮಾರ್ಕಸ್ ಸ್ಟೊಯಿನಿಸ್ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಏಕೆಂದರೆ ಸ್ಟೊಯಿನಿಸ್ ಬಿಗ್ ಬ್ಯಾಷ್ ಲೀಗ್ನಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ವೈಸ್ ಕ್ಯಾಪ್ಟನ್ ಆಗಿ ಮಾರ್ಕಸ್ ಸ್ಟೊಯಿನಿಸ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.

ಪಂಜಾಬ್ ಕಿಂಗ್ಸ್ ತಂಡ: ಶ್ರೇಯಸ್ ಅಯ್ಯರ್, ಯುಜ್ವೇಂದ್ರ ಚಹಲ್, ಅರ್ಷ್‌ದೀಪ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಶಶಾಂಕ್ ಸಿಂಗ್, ಪ್ರಭ್ಸಿಮ್ರಾನ್ ಸಿಂಗ್, ಹರ್‌ಪ್ರೀತ್ ಬ್ರಾರ್, ವಿಜಯ್‌ಕುಮಾರ್ ವೈಶಾಕ್, ಯಶ್ ಠಾಕೂರ್, ಮಾರ್ಕೊ ಯಾನ್ಸೆನ್, ಜೋಶ್ ಇಂಗ್ಲಿಸ್, ಲಾಕಿ ಫರ್ಗುಸನ್, ಅಝ್ಮತುಲ್ಲಾ ಒಮರ್ಝಾಹಿ,ಆರೋನ್ ಹಾರ್ಡಿ, ಮುಶೀರ್ ಖಾನ್, ಸೂರ್ಯಾಂಶ, ಕ್ಸೇವಿಯರ್ ಬ್ರಾಟ್ಲೆಟ್, ಪೈಲಾ ಅವಿನಾಶ್, ಪ್ರವೀಣ್ ದುಬೆ, ನೆಹಾಲ್ ವಧೇರಾ, ಹರ್ನೂರ್ ಪನ್ನು, ಕುಲ್ದೀಪ್ ಸೇನ್.
























