2019 ರಲ್ಲಿ ಡೆಲ್ಲಿ ತಂಡದ ನಾಯಕರಾಗಿ ಆಯ್ಕೆಯಾಗಿದ್ದ ಅಯ್ಯರ್, 2021 ರವರೆಗೆ ಈ ಪಾತ್ರವನ್ನು ನಿರ್ವಹಿಸಿದ್ದರು. 2020 ರಲ್ಲಿ, ಅವರು ತಮ್ಮ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಫೈನಲ್‌ಗೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದ್ದರು. ಆದರೆ 2021 ರ ನಂತರ, ದೆಹಲಿಯು ಅಯ್ಯರ್ ಅವರನ್ನು ನಾಯಕತ್ವದಿಂದ ತೆಗೆದುಹಾಕಿ ಅವರ ಸ್ಥಾನದಲ್ಲಿ ರಿಷಬ್ ಪಂತ್ಗೆ ತಂಡದ ನಾಯಕತ್ವವನ್ನು ನೀಡಲಾಯಿತು.