AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯನ ಅಬ್ಬರಕ್ಕೆ ABDಯ ದಾಖಲೆಯೇ ಉಡೀಸ್

IPL 2025 MI vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 203 ರನ್ ಕಲೆಹಾಕಿದರೆ, ಈ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡ 19 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಸೋಲಿನ ನಡುವೆ ಮುಂಬೈ ಇಂಡಿಯನ್ಸ್ ದಾಂಡಿಗ ಸೂರ್ಯಕುಮಾರ್ ಯಾದವ್ ವಿಶೇಷ ದಾಖಲೆ ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 02, 2025 | 11:10 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸೂರ್ಯಕುಮಾರ್ ಯಾದವ್ (Suryakumar Yadav) ಹೊಸ ಇತಿಹಾಸ ರಚಿಸಿದ್ದಾರೆ. ಅದು ಕೂಡ 9 ವರ್ಷಗಳ ಹಿಂದೆ ಎಬಿ ಡಿವಿಲಿಯರ್ಸ್ ಬರೆದಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 6
ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್​ನ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ 26 ಎಸೆತಗಳಲ್ಲಿ 44 ರನ್ ಬಾರಿಸಿದ್ದರು. ಈ 44 ರನ್​ಗಳೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ಸೂರ್ಯ 700 ರನ್​ಗಳನ್ನು ಪೂರೈಸಿದ್ದಾರೆ.

2 / 6
ಇದರೊಂದಿಗೆ ಐಪಿಎಲ್​ ಸೀಸನ್​ವೊಂದರಲ್ಲಿ ಅತ್ಯಧಿಕ ರನ್ ಪೇರಿಸಿದ ಆರಂಭಿಕನಲ್ಲದ ಬ್ಯಾಟರ್ ಎಂಬ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಹೆಸರಿನಲ್ಲಿತ್ತು.

3 / 6
2016ರ ಐಪಿಎಲ್ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 16 ಇನಿಂಗ್ಸ್ ಆಡಿದ್ದ ಎಬಿ ಡಿವಿಲಿಯರ್ಸ್ ಬರೋಬ್ಬರಿ 687 ರನ್ ಕಲೆಹಾಕಿದ್ದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ರನ್ ಕಲೆಹಾಕಿದ ನಾನ್ ಓಪನರ್ ಎಂಬ ವಿಶೇಷ ದಾಖಲೆಯನ್ನು ಎಬಿಡಿ ನಿರ್ಮಿಸಿದ್ದರು. 

4 / 6
ಇದೀಗ ಎಬಿಡಿಯ ಈ ವಿಶೇಷ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ಅಳಿಸಿ ಹಾಕಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿ 16 ಇನಿಂಗ್ಸ್ ಆಡಿರುವ ಸೂರ್ಯಕುಮಾರ್ ಯಾದವ್ 5 ಅರ್ಧಶತಕಗಳೊಂದಿಗೆ ಒಟ್ಟು 717 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಆವೃತ್ತಿಯೊಂದರಲ್ಲಿ 700 ರನ್​ಗಳ ಗಡಿದಾಟಿದ ಆರಂಭಿಕನಲ್ಲದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 6
ಅಲ್ಲದೆ ಐಪಿಎಲ್ ಇತಿಹಾಸದಲ್ಲೇ ಸೀಸನ್​ವೊಂದರಲ್ಲಿ ಅತ್ಯಧಿನ ರನ್ ಪೇರಿಸಿದ ನಾನ್ ಓಪನರ್ (ಆರಂಭಿಕನಲ್ಲದ) ಬ್ಯಾಟರ್ ಎಂಬ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ. ಈ ದಾಖಲೆಗಳ ಹೊರತಾಗಿಯೂ ಸೂರ್ಯಕುಮಾರ್ ಯಾದವ್​ ಅವರ ಐಪಿಎಲ್ ಸೀಸನ್-18ರ ಅಭಿಯಾನ ಸೋಲಿನೊಂದಿಗೆ ಅಂತ್ಯಗೊಂಡಿದ್ದು ಮಾತ್ರ ವಿಪರ್ಯಾಸ.

6 / 6
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್

ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?

ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು

ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ

ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್

8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!

ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!

ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು

ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ

ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?