Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ನಾಯಕ

IPL 2025: ಐಪಿಎಲ್ 2024 ರಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಮುಂಬೈ ಇಂಡಿಯನ್ಸ್ ತಂಡವು ಮೂರು ಪಂದ್ಯಗಳಲ್ಲಿ ಸ್ಲೋ ಓವರ್ ತಪ್ಪು ಮಾಡಿತ್ತು. ಇದೀಗ ಅದರ ಶಿಕ್ಷಯಾಗಿ ಐಪಿಎಲ್ 2025 ರ ಮೊದಲ ಪಂದ್ಯದಿಂದ ಪಾಂಡ್ಯ ಹೊರಗುಳಿಯಲಿದ್ದಾರೆ. ಹೀಗಾಗಿ ಮಾರ್ಚ್ 23 ರಂದು ನಡೆಯಲಿರುವ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳುವುದಿಲ್ಲ.

ಝಾಹಿರ್ ಯೂಸುಫ್
|

Updated on: Mar 19, 2025 | 1:55 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ 18ರ ಮಾರ್ಚ್ 22 ರಿಂದ ಶುರುವಾಗಲಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲಿ KKR ಮತ್ತು RCB ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮಾರ್ಚ್ 23 ರಂದು ನಡೆಯಲಿರುವ ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣಸಲಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.

1 / 8
ಏಕೆಂದರೆ ಕಳೆದ ಸೀಸನ್​​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ನಾಯಕ ಹಾರ್ದಿಕ್ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿದೆ.

2 / 8
ಈ ಒಂದು ಪಂದ್ಯದ ನಿಷೇಧದ ಶಿಕ್ಷೆ ಈ ಬಾರಿಯ ಐಪಿಎಲ್​​ನಲ್ಲಿ ಮುಂದುವರೆಯಲಿದೆ. ಅದರಂತೆ ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ ಆಡುವ ಮೊದಲ ಪಂದ್ಯದಿಂದ ನಾಯಕ ಹಾರ್ದಿಕ್ ಪಾಂಡ್ಯ ಹೊರಗುಳಿಯಬೇಕಾಗುತ್ತದೆ. ಹೀಗಾಗಿ ಮಾರ್ಚ್ 23 ರಂದು ನಡೆಯಲಿರುವ ಸಿಎಸ್​ಕೆ ವಿರುದ್ಧದ ಮ್ಯಾಚ್​​ನಲ್ಲಿ ಪಾಂಡ್ಯ ಕಣಕ್ಕಿಳಿಯುವಂತಿಲ್ಲ.

3 / 8
ಹೀಗಾಗಿ ಮಾರ್ಚ್ 23 ರಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧದ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ ಎಂದು ಪಾಂಡ್ಯ ತಿಳಿಸಿದ್ದಾರೆ. ಇನ್ನುಳಿದ ಪಂದ್ಯಗಳಲ್ಲಿ ಹಾರ್ದಿಕ್ ಪಾಂಡ್ಯ ಅವರೇ ನಾಯಕರಾಗಿ ಮುಂದುವರೆಯಲಿದ್ದಾರೆ.

4 / 8
ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

5 / 8
ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ, ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ ತಲಾ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

6 / 8
ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಮೂರು ಬಾರಿ ತಪ್ಪು ಮಾಡಿದ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರು ತಲಾ 12 ಲಕ್ಷ ರೂ. ಅಥವಾ ಪಂದ್ಯದ ಶುಲ್ಕದ ಶೇ. 50 ರಷ್ಟು ದಂಡವನ್ನು ಪಾವತಿಸಬೇಕಾಗುತ್ತದೆ.

7 / 8
ಅದರಂತೆ ಕಳೆದ ಸೀಸನ್​​​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ (2 ಬಾರಿ) ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಗಳಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ 2025ರ ಮೊದಲ ಪಂದ್ಯದಿಂದ ಬ್ಯಾನ್ ಆಗಿದ್ದಾರೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಪಂದ್ಯದಿಂದ ಹಾರ್ದಿಕ್ ಪಾಂಡ್ಯ ಹೊರಗುಳಿಯಲಿದ್ದಾರೆ.

8 / 8
Follow us
ರಿಕ್ಕಿ ಬಲಗೈಯಲ್ಲಿದ್ದ ಗುಂಡನ್ನು ವೈದ್ಯರು ಹೊರತೆಗೆದಿದ್ದಾರೆ: ಜಗದೀಶ್

ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಪರಮೇಶ್ವರ್

ಮುಂಬೈನಲ್ಲಿ ದೇವಾಲಯ ಧ್ವಂಸ; ಸಾವಿರಾರು ಜೈನರಿಂದ ಪ್ರತಿಭಟನೆ

ಸಮುದ್ರದಲ್ಲಿ 28 ಕಿಮೀ ಈಜಿದ ಹುಬ್ಬಳ್ಳಿ CPI
ಸಮುದ್ರದಲ್ಲಿ 28 ಕಿಮೀ ಈಜಿದ ಹುಬ್ಬಳ್ಳಿ CPI
ರಥೋತ್ಸವ ಅವಘಡದಲ್ಲಿ ಯಾರೂ ಗಾಯಗೊಳ್ಳದಿರುವುದೇ ಪವಾಡ

ಶಿವಕುಮಾರ್ ಟೀಕಿಸಿದ್ದಕ್ಕೆ ಮುನಿರತ್ನ ಸಾಕಷ್ಟು ಅನುಭವಿಸಿದ್ದಾರೆ: ಗಣಿಗ

ಆಗ ಅಹಿಂದ ಅಯ್ತು ಈಗ ಜಾತಿ ಗಣತಿ ವರದಿಯ ಸರದಿ: ಪ್ರತಾಪ್ ಸಿಂಹ

ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಬಂತು ಇಕೋಫಿಕ್ಸ್ ತಂತ್ರಜ್ಞಾನ

ಚುನಾಯಿತ ಪ್ರತಿನಿಧಿಗಳು ಶಿವಕುಮಾರ್​ರನ್ನು ಭೇಟಿಯಾಗುವುದು ತಪ್ಪಲ್ಲ: ಸಂಸದ

ಕಳೆದ ವರ್ಷಕ್ಕಿಂತ ಈ ವರ್ಷ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ: ಪರಮೇಶ್ವರ್