- Kannada News Photo gallery Cricket photos IPL 2025: Tim david will be fully fit before the RCB's finals
IPL 2025: ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್
IPL 2025 Final: ಐಪಿಎಲ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್ಸಿಬಿ ತಂಡ 8 ವಿಕೆಟ್ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ನ ಫೈನಲ್ಗೆ ಲಗ್ಗೆಯಿಟ್ಟಿದೆ. ಅದರಂತೆ ಜೂನ್ 3 ರಂದು ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಆರ್ಸಿಬಿ ತಂಡ ಕಣಕ್ಕಿಳಿಯಲಿದೆ.
Updated on:May 30, 2025 | 12:07 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಫೈನಲ್ಗೆ ಪ್ರವೇಶಿಸಿದೆ. ಮುಲ್ಲನ್ಪುರ್ನ ಪಿಸಿಎ ಸ್ಟೇಡಿಯಂನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಆರ್ಸಿಬಿ ಫೈನಲ್ಗೆ ಅರ್ಹತೆ ಪಡೆದುಕೊಂಡಿದೆ.

ಅದರಂತೆ ಜೂನ್ 3 ರಂದು ನಡೆಯಲಿರುವ ಅಂತಿಮ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿ ಪರ ಟಿಮ್ ಡೇವಿಡ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಮಂಡಿರಜ್ಜು ನೋವಿಗೆ ಒಳಗಾಗಿದ್ದ ಟಿಮ್ ಡೇವಿಡ್ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಅಲ್ಲದೆ ಅವರ ಬದಲಿಗೆ ಔಟ್ ಆಫ್ ಫಾರ್ಮ್ನಲ್ಲಿರುವ ಲಿಯಾಮ್ ಲಿವಿಂಗ್ಸ್ಟೋನ್ಗೆ ಚಾನ್ಸ್ ನೀಡಲಾಗಿತ್ತು.

ಇದೀಗ ಟಿಮ್ ಡೇವಿಡ್ ಅವರು ಚೇತರಿಸಿಕೊಂಡಿದ್ದು, ಅಹಮದಾಬಾದ್ನಲ್ಲಿ ಅಭ್ಯಾಸ ಆರಂಭಿಸಲಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಇನ್ನೆರಡು ದಿನಗಳಲ್ಲಿ ಟಿಮ್ ಡೇವಿಡ್ ಸಮರಭ್ಯಾಸಕ್ಕಿಳಿಯಲಿದ್ದಾರೆ. ಈ ವೇಳೆ ಕಾಲಿನಲ್ಲಿ ಯಾವುದೇ ಸ,ಮಸ್ಯೆ ಕಂಡು ಬರದಿದ್ದರೆ ಅವರು ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತ. ಇತ್ತ ಟಿಮ್ ಡೇವಿಡ್ ಎಂಟ್ರಿಯಿಂದ ಆರ್ಸಿಬಿ ತಂಡವು ಮತ್ತಷ್ಟು ಬಲಿಷ್ಠವಾಗುವುದರಲ್ಲಿ ಡೌಟೇ ಇಲ್ಲ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಯಶ್ ದಯಾಳ್, ಲಿಯಾಮ್ ಲಿವಿಂಗ್ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹೇಝಲ್ವುಡ್, ರಾಸಿಖ್ ಸಲಾಂ, ಸುಯಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಮಯಾಂಕ್ ಅಗರ್ವಾಲ್, ಟಿಮ್ ಸೈಫರ್ಟ್, ಬ್ಲೆಸಿಂಗ್ ಮುಝರಬಾನಿ.
Published On - 12:05 pm, Fri, 30 May 25









