Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್ 5 ಬೌಲರ್‌ಗಳಿವರು, ನಂಬರ್ 1 ಯಾರು?

IPL Top 5 Highest Wicket-takers: ಐಪಿಎಲ್ 18ನೇ ಸೀಸನ್ ಆರಂಭಕ್ಕೆ ಕ್ಷಣಗಣನೆ ನಡೆಯುತ್ತಿದೆ. ಅದಕ್ಕೂ ಮುನ್ನ ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಐದು ಬೌಲರ್‌ಗಳನ್ನು ನೋಡುವುದಾದರೆ, ಯುಜುವೇಂದ್ರ ಚಾಹಲ್, ಪಿಯೂಷ್ ಚಾವ್ಲಾ, ಡ್ವೇನ್ ಬ್ರಾವೋ, ಭುವನೇಶ್ವರ್ ಕುಮಾರ್ ಮತ್ತು ಸುನಿಲ್ ನರೈನ್ ಮೊದಲ ಐದು ಸ್ಥಾನಗಳಲಿದ್ದಾರೆ.

ಪೃಥ್ವಿಶಂಕರ
|

Updated on: Mar 13, 2025 | 7:16 PM

ಐಪಿಎಲ್ 18ನೇ ಸೀಸನ್​ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಾರ್ಚ್ 22 ರಂದು ಪ್ರಾರಂಭವಾಗಲಿರುವ ಈ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ತಂಡವು ಬೆಂಗಳೂರು ತಂಡವನ್ನು ಎದುರಿಸಲಿದೆ. ಅದಕ್ಕೂ ಮುನ್ನ ಈ ಮಿಲಿಯನ್ ಡಾಲರ್ ಟೂರ್ನಿಯ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ 5 ಬೌಲರ್‌ಗಳ ಬಗ್ಗೆ ತಿಳಿದುಕೊಳ್ಳೋಣ.

1 / 6
ಯುಜುವೇಂದ್ರ ಚಾಹಲ್: ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಯುಜುವೇಂದ್ರ ಚಾಹಲ್ ಹೆಸರಿನಲ್ಲಿದೆ. ಚಾಹಲ್ ಇದುವರೆಗೆ 160 ಪಂದ್ಯಗಳಲ್ಲಿ 205 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಐಪಿಎಲ್‌ನಲ್ಲಿ 200 ವಿಕೆಟ್ ಪಡೆದ ಏಕೈಕ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ, ಚಾಹಲ್ ಈ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಲಿದ್ದು, ಈ ಹಿಂದೆ ಅವರು ರಾಜಸ್ಥಾನ, ಬೆಂಗಳೂರು ಮತ್ತು ಮುಂಬೈ ತಂಡಗಳನ್ನು ಪ್ರತಿನಿಧಿಸಿದ್ದರು.

2 / 6
ಪಿಯೂಷ್ ಚಾವ್ಲಾ: ಪಿಯೂಷ್ ಚಾವ್ಲಾ ಐಪಿಎಲ್‌ನಲ್ಲಿ ಚೆನ್ನೈ, ಕೋಲ್ಕತ್ತಾ, ಪಂಜಾಬ್ ಮತ್ತು ಮುಂಬೈ ತಂಡಗಳನ್ನು ಪ್ರತಿನಿಧಿಸಿದ್ದಾರೆ. ಚಾವ್ಲಾ 192 ಪಂದ್ಯಗಳಲ್ಲಿ 192 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಚಾವ್ಲಾ ಎರಡನೇ ಸ್ಥಾನದಲ್ಲಿದ್ದಾರೆ.

3 / 6
ಡ್ವೇನ್ ಬ್ರಾವೋ: ವೆಸ್ಟ್ ಇಂಡೀಸ್‌ನ ಮಾಜಿ ಆಲ್‌ರೌಂಡರ್ ಡ್ವೇನ್ ಬ್ರಾವೋ ಕೂಡ ಐಪಿಎಲ್‌ನಿಂದ ನಿವೃತ್ತರಾಗಿದ್ದಾರೆ. ಆದಾಗ್ಯೂ, ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಡ್ವೇನ್ ಇನ್ನೂ ಮೂರನೇ ಸ್ಥಾನದಲ್ಲಿದ್ದಾರೆ. ಡ್ವೇನ್ 161 ಪಂದ್ಯಗಳಲ್ಲಿ 183 ವಿಕೆಟ್‌ಗಳನ್ನು ಪಡೆದಿದ್ದಾರೆ.

4 / 6
ಭುವನೇಶ್ವರ್ ಕುಮಾರ್:  ಭುವನೇಶ್ವರ್ ಕುಮಾರ್ ಇದುವರೆಗೆ ಐಪಿಎಲ್‌ನಲ್ಲಿ ಒಟ್ಟು 176 ಪಂದ್ಯಗಳಲ್ಲಿ ಆಡಿದ್ದು, ಐಪಿಎಲ್‌ನಲ್ಲಿ ವಿವಿಧ ತಂಡಗಳಿಗಾಗಿ ಆಡಿದ್ದಾರೆ. ಈ ಅವಧಿಯಲ್ಲಿ ಭುವನೇಶ್ವರ್ 181 ವಿಕೆಟ್‌ಗಳನ್ನು ಪಡೆದಿದ್ದಾರೆ. ಭುವಿ ಈ ವರ್ಷ ಬೆಂಗಳೂರು ಪರ ಆಡಲಿದ್ದಾರೆ.

5 / 6
ಸುನಿಲ್ ನರೈನ್: ಕೋಲ್ಕತ್ತಾದ ಸ್ಟಾರ್ ಆಲ್‌ರೌಂಡರ್ ಸುನಿಲ್ ನರೈನ್ ಇದುವರೆಗೆ ಐಪಿಎಲ್‌ನಲ್ಲಿ 177 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಸುನಿಲ್ 180 ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಿದ್ದು, ಅಧಿಕ ವಿಕೆಟ್ ಪಡೆದವರ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.

6 / 6
Follow us
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ

ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​

ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ

ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು

ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ

ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ

ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ

ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ

ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್

ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್