- Kannada News Photo gallery Cricket photos IPL 2025: Top five players who are missing from the IPL 2025 Mega Auction
IPL 2025: ಐಪಿಎಲ್ನಿಂದ ಹಿಂದೆ ಸರಿದ ಐವರು ಸ್ಟಾರ್ ಆಟಗಾರರು
IPL 2025 Mega Auction: ಈ ಬಾರಿಯ ಐಪಿಎಲ್ ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಸೌದಿ ಅರೇಬಿಯಾದ ಜಿದ್ದಾದಲ್ಲಿ ಜರುಗಲಿರುವ ಐಪಿಎಲ್ ಮೆಗಾ ಆಕ್ಷನ್ನಲ್ಲಿ ಒಟ್ಟು 574 ಆಟಗಾರರ ಹೆಸರನ್ನು ಹರಾಜು ಕೂಗಳಿದ್ದು, ಇವರಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
Updated on: Nov 16, 2024 | 1:53 PM

ಈ ಬಾರಿಯ ಐಪಿಎಲ್ (IPL 2025) ಮೆಗಾ ಹರಾಜಿನಲ್ಲಿ ಒಟ್ಟು 574 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಇವರಲ್ಲಿ 241 ರಾಷ್ಟ್ರೀಯ ತಂಡದ ಪರ ಕಣಕ್ಕಿಳಿದ ಆಟಗಾರರಿದ್ದಾರೆ. ಆದರೆ ಈ ಪಟ್ಟಿಯಲ್ಲಿ ಐವರು ಸ್ಟಾರ್ ಆಟಗಾರರು ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ಈ ಬಾರಿಯ ಮೆಗಾ ಹರಾಜಿನಿಂದ ಕೆಲ ಪ್ರಮುಖ ಆಟಗಾರರು ಹೊರಗುಳಿದಿದ್ದಾರೆ. ಆ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಬೆನ್ ಸ್ಟೋಕ್ಸ್: ಐಪಿಎಲ್ 2023 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಈ ಬಾರಿಯ ಮೆಗಾ ಹರಾಜಿಗೆ ಹೆಸರು ನೋಂದಾಯಿಸಿಕೊಂಡಿಲ್ಲ. 2025ರ ಆ್ಯಶಸ್ ಸರಣಿಯ ಸಿದ್ಧತೆಗಾಗಿ ಅವರು ಐಪಿಎಲ್ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಕ್ಯಾಮರೋನ್ ಗ್ರೀನ್: ಐಪಿಎಲ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಕ್ಯಾಮರೋನ್ ಗ್ರೀನ್ ಅವರು ಸಹ ಈ ಬಾರಿ ಹರಾಜಿಗೆ ಹೆಸರು ನೀಡಿಲ್ಲ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಹೀಗಾಗಿ ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ.

ಜೋಫ್ರಾ ಆರ್ಚರ್: ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಗಾಯದ ಸಮಸ್ಯೆಯ ಕಾರಣ ಅವರು ಹೆಚ್ಚಿನ ಪಂದ್ಯವಾಡಿರಲಿಲ್ಲ. ಇದೀಗ ಫಿಟ್ನೆಸ್ ಸಮಸ್ಯೆಯನ್ನು ಮುಂದಿಟ್ಟು ಐಪಿಎಲ್ನಿಂದ ಹೊರಗುಳಿದಿದ್ದಾರೆ.

ಜೇಸನ್ ರಾಯ್: ಇಂಗ್ಲೆಂಡ್ ತಂಡದ ಸ್ಪೋಟಕ ದಾಂಡಿಗ ಜೇಸನ್ ರಾಯ್ ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ವೈಯುಕ್ತಿಕ ಕಾರಣಗಳಿಂದಾಗಿ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದರು. ಅಲ್ಲದೆ ಈ ಬಾರಿಯ ಮೆಗಾ ಹರಾಜಿನಿಂದಲೂ ಹೊರಗುಳಿಯಲು ನಿರ್ಧರಿಸಿದ್ದಾರೆ.

ಕ್ರಿಸ್ ವೋಕ್ಸ್: ಐಪಿಎಲ್ 2024 ರಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಕ್ರಿಸ್ ವೋಕ್ಸ್ ಕೂಡ ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೆ ಹೆಸರು ನೋಂದಾಯಿಸಿಕೊಂಡಿಲ್ಲ. ಹೀಗಾಗಿ ವೋಕ್ಸ್ ಕೂಡ ಈ ಬಾರಿ ಐಪಿಎಲ್ನಲ್ಲಿ ಕಾಣಿಸಿಕೊಳ್ಳುವುದಿಲ್ಲ.




