IPL 2025: ಐಪಿಎಲ್​ನಿಂದ ಹಿಂದೆ ಸರಿದ ಐವರು ಸ್ಟಾರ್ ಆಟಗಾರರು

|

Updated on: Nov 16, 2024 | 1:53 PM

IPL 2025 Mega Auction: ಈ ಬಾರಿಯ ಐಪಿಎಲ್ ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಸೌದಿ ಅರೇಬಿಯಾದ ಜಿದ್ದಾದಲ್ಲಿ ಜರುಗಲಿರುವ ಐಪಿಎಲ್ ಮೆಗಾ ಆಕ್ಷನ್​ನಲ್ಲಿ ಒಟ್ಟು 574 ಆಟಗಾರರ ಹೆಸರನ್ನು ಹರಾಜು ಕೂಗಳಿದ್ದು, ಇವರಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

1 / 6
ಈ ಬಾರಿಯ ಐಪಿಎಲ್ (IPL 2025) ಮೆಗಾ ಹರಾಜಿನಲ್ಲಿ ಒಟ್ಟು 574 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಇವರಲ್ಲಿ 241 ರಾಷ್ಟ್ರೀಯ ತಂಡದ ಪರ ಕಣಕ್ಕಿಳಿದ ಆಟಗಾರರಿದ್ದಾರೆ. ಆದರೆ ಈ ಪಟ್ಟಿಯಲ್ಲಿ ಐವರು ಸ್ಟಾರ್ ಆಟಗಾರರು ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ಈ ಬಾರಿಯ ಮೆಗಾ ಹರಾಜಿನಿಂದ ಕೆಲ ಪ್ರಮುಖ ಆಟಗಾರರು ಹೊರಗುಳಿದಿದ್ದಾರೆ. ಆ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

2 / 6
ಬೆನ್ ಸ್ಟೋಕ್ಸ್: ಐಪಿಎಲ್ 2023 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಈ ಬಾರಿಯ ಮೆಗಾ ಹರಾಜಿಗೆ ಹೆಸರು ನೋಂದಾಯಿಸಿಕೊಂಡಿಲ್ಲ. 2025ರ ಆ್ಯಶಸ್ ಸರಣಿಯ ಸಿದ್ಧತೆಗಾಗಿ ಅವರು ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

3 / 6
ಕ್ಯಾಮರೋನ್ ಗ್ರೀನ್: ಐಪಿಎಲ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಕ್ಯಾಮರೋನ್ ಗ್ರೀನ್ ಅವರು ಸಹ ಈ ಬಾರಿ ಹರಾಜಿಗೆ ಹೆಸರು ನೀಡಿಲ್ಲ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಹೀಗಾಗಿ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

4 / 6
ಜೋಫ್ರಾ ಆರ್ಚರ್: ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಗಾಯದ ಸಮಸ್ಯೆಯ ಕಾರಣ ಅವರು ಹೆಚ್ಚಿನ ಪಂದ್ಯವಾಡಿರಲಿಲ್ಲ. ಇದೀಗ ಫಿಟ್​ನೆಸ್ ಸಮಸ್ಯೆಯನ್ನು ಮುಂದಿಟ್ಟು ಐಪಿಎಲ್​ನಿಂದ ಹೊರಗುಳಿದಿದ್ದಾರೆ.

5 / 6
ಜೇಸನ್ ರಾಯ್: ಇಂಗ್ಲೆಂಡ್ ತಂಡದ ಸ್ಪೋಟಕ ದಾಂಡಿಗ ಜೇಸನ್ ರಾಯ್ ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ವೈಯುಕ್ತಿಕ ಕಾರಣಗಳಿಂದಾಗಿ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದರು. ಅಲ್ಲದೆ ಈ ಬಾರಿಯ ಮೆಗಾ ಹರಾಜಿನಿಂದಲೂ ಹೊರಗುಳಿಯಲು ನಿರ್ಧರಿಸಿದ್ದಾರೆ.

6 / 6
ಕ್ರಿಸ್ ವೋಕ್ಸ್: ಐಪಿಎಲ್ 2024 ರಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಕ್ರಿಸ್ ವೋಕ್ಸ್ ಕೂಡ ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೆ ಹೆಸರು ನೋಂದಾಯಿಸಿಕೊಂಡಿಲ್ಲ. ಹೀಗಾಗಿ ವೋಕ್ಸ್ ಕೂಡ ಈ ಬಾರಿ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ.