AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರವೇಗದ ಶತಕ: ವೈಭವ್ ಸೂರ್ಯವಂಶಿ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

IPL 2025 RR vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 47ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 209 ರನ್​ ಕಲೆಹಾಕಿತು. ಈ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಸೂರ್ಯವಂಶಿ (Vaibhav Suryavanshi)  38 ಎಸೆತಗಳಲ್ಲಿ 11 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 101 ರನ್ ಬಾರಿಸಿದ್ದರು. ಈ ಸ್ಪೋಟಕ ಸೆಂಚುರಿ ನೆರವಿನಿನೊಂದಿಗೆ ರಾಜಸ್ಥಾನ್ ರಾಯಲ್ಸ್ 15.5 ಓವರ್​ಗಳಲ್ಲಿ 212 ರನ್ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Apr 29, 2025 | 7:24 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಹೀಗೆ ಹೊಸ ಇತಿಹಾಸ ನಿರ್ಮಿಸಿದ್ದು 14 ವರ್ಷದ ವೈಭವ್ ಸೂರ್ಯವಂಶಿ (Vaibhav Suryavanshi). ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವೈಭವ್ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.

1 / 6
ಈ ಶತಕದೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ  ಅತೀ ವೇಗವಾಗಿ ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರ ಜೊತೆಗೆ ಟಿ20 ಕ್ರಿಕೆಟ್​ನಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ವಿಶ್ವ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

2 / 6
ಇದಕ್ಕೂ ಮುನ್ನ ಈ ದಾಖಲೆ ವಿಜಯ್ ಝೋಲ್ ಹೆಸರಿನಲ್ಲಿತ್ತು. 2013 ರಲ್ಲಿ ನಡೆದ ಮುಂಬೈ ವಿರುದ್ಧದ ಟಿ20 ಪಂದ್ಯದಲ್ಲಿ ಮಹಾರಾಷ್ಟ್ರ ಪರ ಕಣಕ್ಕಿಳಿದಿದ್ದ 18 ವರ್ಷದ ಝೋಲ್ ಭರ್ಜರಿ ಸೆಂಚುರಿ ಸಿಡಿಸಿ ಈ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ವೈಭವ್ ಯಶಸ್ವಿಯಾಗಿದ್ದಾರೆ.

3 / 6
ಈ ಮೂಲಕ 14ನೇ ವಯಸ್ಸಿನಲ್ಲಿ ಸೆಂಚುರಿ ಸಿಡಿಸಿ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಹಾಗೂ 15 ವಯಸ್ಸಿನೊಳಗೆ 20 ಸೆಂಚುರಿ ಬಾರಿಸಿದ ವಿಶ್ವದ ಏಕೈಕ ಬ್ಯಾಟ್ಸ್​ಮನ್ ಎಂಬ ವಿಶ್ವ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ.

4 / 6
ಇನ್ನು ಐಪಿಎಲ್​ನಲ್ಲಿ ಕ್ರಿಸ್ ಗೇಲ್ (30 ಎಸೆತಗಳು) ಬಳಿಕ ಅತೀ ವೇಗದ ಶತಕ ಸಿಡಿಸಿದ ದಾಖಲೆ ಕೂಡ ವೈಭವ್ ಸೂರ್ಯವಂಶಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಯೂಸುಫ್ ಪಠಾಣ್ ಹೆಸರಿನಲ್ಲಿತ್ತು. 2010 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದಿದ್ದ ಪಠಾಣ್ 37 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿದು ವೈಭವ್ ಸೂರ್ಯವಂಶಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ.

5 / 6
ಒಟ್ಟಿನಲ್ಲಿ ಚೊಚ್ಚಲ ಐಪಿಎಲ್​ ಆಡುತ್ತಿರುವ 14ರ ಹರೆಯದ ವೈಭವ್ ಸೂರ್ಯವಂಶಿ ಸ್ಪೋಟಕ ಸೆಂಚುರಿ ಸಿಡಿಸಿ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ದಾಖಲೆಯೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಗುಜರಾತ್ ಟೈಟಾನ್ಸ್ ನೀಡಿದ 209 ರನ್​ಗಳನ್ನು ಚೇಸ್ ಮಾಡಿ ಭರ್ಜರಿ ಗೆಲುವು ದಾಖಲಿಸಿದೆ.

6 / 6
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?