AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಆರಂಭಿಕ ಜೋಡಿ ಫಿಕ್ಸ್

IPL 2025 RCB: ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಹೊಸ ಆರಂಭಿಕ ಜೋಡಿ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಕಳೆದ ಸೀಸನ್​ನಲ್ಲಿ ಆರಂಭಿಕನಾಗಿ ಆಡಿದ್ದ ಫಾಫ್ ಡುಪ್ಲೆಸಿಸ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದಾರೆ. ಹೀಗಾಗಿ ಈ ಬಾರಿ ವಿರಾಟ್ ಕೊಹ್ಲಿ ಜೊತೆ ಮತ್ತೋರ್ವ ದಾಂಡಿಗ ಇನಿಂಗ್ಸ್ ಆರಂಭಿಸಲಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 19, 2025 | 9:04 AM

Share
ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಆರಂಭಕ್ಕೆ ದಿನಗಳು ಮಾತ್ರ ಉಳಿದಿವೆ. ಅದಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಮಾಸ್ಟರ್ ಪ್ಲ್ಯಾನ್​ ರೂಪಿಸುತ್ತಿದೆ. ಈ ಪ್ಲ್ಯಾನ್​​ನೊಂದಿಗೆ ಈ ಬಾರಿ ಆರ್​ಸಿಬಿ ಪರ ಯಾರು ಆರಂಭಿಕರಾಗಿ ಕಣಕ್ಕಿಳಿಯಬೇಕೆಂದು ನಿರ್ಧಾರವಾಗಿದೆ.

1 / 6
ಅದರಂತೆ ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸುವುದು ಕನ್ಫರ್ಮ್​. ಇದನ್ನು ಆರ್​ಸಿಬಿ ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಕೂಡ ಖಚಿತಪಡಿಸಿದ್ದಾರೆ. ಹೀಗಾಗಿ ಈ ಬಾರಿ ಆರ್​ಸಿಬಿ ಪರ ಕೊಹ್ಲಿ-ಸಾಲ್ಟ್ ಜೋಡಿ ಓಪನರ್​​ಗಳಾಗಿ ಕಣಕ್ಕಿಳಿಯಲಿದ್ದಾರೆ.

2 / 6
ಸಂದರ್ಶನವೊಂದರಲ್ಲಿ ಮಾತನಾಡಿದ ಆ್ಯಂಡಿ ಫ್ಲವರ್, ಆರ್​ಸಿಬಿ ಪರ ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸುವುದು ಬಹಳ ಮುಖ್ಯ. ಅವರ ಜೊತೆ ಈ ಬಾರಿ ಟಾಪ್ ಆರ್ಡರ್​ನಲ್ಲಿ ಫಿಲ್ ಸಾಲ್ಟ್ ಕೂಡ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೂಲಕ ಕೊಹ್ಲಿ ಹಾಗೂ ಸಾಲ್ಟ್ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಲು ಯೋಜನೆ ರೂಪಿಸಿರುವುದನ್ನು ಬಹಿರಂಗಪಡಿಸಿದ್ದಾರೆ.

3 / 6
ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ 113 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದಾರೆ. ಈ ವೇಳೆ 8 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ 45.81ರ ಸರಾಸರಿಯಲ್ಲಿ ಒಟ್ಟು 4352 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಆರಂಭಿಕ ಎನಿಸಿಕೊಂಡಿದ್ದಾರೆ.

4 / 6
ಮತ್ತೊಂದೆಡೆ ಫಿಲ್ ಸಾಲ್ಟ್ ಇಂಗ್ಲೆಂಡ್ ಪರ ಆರಂಭಿಕನಾಗಿ ಕಣಕ್ಕಿಳಿದ ಅನುಭವ ಹೊಂದಿದ್ದಾರೆ. ಇದರ ಜೊತೆ ಕಳೆದ ಸೀಸನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ 12 ಪಂದ್ಯಗಳಲ್ಲಿ ಫಿಲ್ ಸಾಲ್ಟ್ ಇನಿಂಗ್ಸ್​ ಆರಂಭಿಸಿದ್ದರು. ಈ ವೇಳೆ 4 ಅರ್ಧಶತಕಗಳೊಂದಿಗೆ ಒಟ್ಟು 435 ರನ್ ಬಾರಿಸಿ ಅಬ್ಬರಿಸಿದ್ದರು.

5 / 6
ಇದೀಗ ಕಿಂಗ್ ಕೊಹ್ಲಿ - ಸ್ಪೋಟಕ ಸಾಲ್ಟ್​ರನ್ನು ಜೊತೆಯಾಗಿ ಕಣಕ್ಕಿಳಿಸಲು ಆರ್​ಸಿಬಿ ಫ್ರಾಂಚೈಸಿ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಅದರಂತೆ ಮಾರ್ಚ್ 22 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ - ಫಿಲ್ ಸಾಲ್ಟ್ ಜೊತೆಗೂಡಿ ಆರ್​ಸಿಬಿ ಪರ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ