ಖಾಸಗಿ ಚಾನೆಲ್ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಆ್ಯಂಡಿ ಫ್ಲವರ್, ಆರ್ಸಿಬಿ ಪರ ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸುವುದು ಬಹಳ ಮುಖ್ಯ. ಅವರ ಜೊತೆ ಈ ಬಾರಿ ಟಾಪ್ ಆರ್ಡರ್ನಲ್ಲಿ ಫಿಲ್ ಸಾಲ್ಟ್ ಕೂಡ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೂಲಕ ಕೊಹ್ಲಿ ಹಾಗೂ ಸಾಲ್ಟ್ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಲು ಯೋಜನೆ ರೂಪಿಸಿರುವುದನ್ನು ಬಹಿರಂಗಪಡಿಸಿದ್ದಾರೆ.