IPL 2025: RCB ಆರಂಭಿಕರು ಯಾರೆಂದು ತಿಳಿಸಿದ ಕೋಚ್

|

Updated on: Jan 11, 2025 | 6:55 AM

IPL 2025 RCB: ಐಪಿಎಲ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಈ ಬಾರಿಯ ಮೆಗಾ ಹರಾಜಿನ ಮೂಲಕ ಡುಪ್ಲೆಸಿಸ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಖರೀದಿಸಿದೆ. ಹೀಗಾಗಿ ಐಪಿಎಲ್ 2025 ರಲ್ಲಿ ಆರ್​ಸಿಬಿ ಪರ ಹೊಸ ಆರಂಭಿಕ ಜೋಡಿ ಕಣಕ್ಕಿಳಿಯುವುದು ಖಚಿತ.

1 / 6
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಆರಂಭಕ್ಕೆ ಇನ್ನೂ ಎರಡು ತಿಂಗಳುಗಳಿವೆ. ಅದಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಮಾಸ್ಟರ್ ಪ್ಲ್ಯಾನ್​ ರೂಪಿಸುತ್ತಿದೆ. ಈ ಪ್ಲ್ಯಾನ್​​ನೊಂದಿಗೆ ಈ ಬಾರಿ ಆರ್​ಸಿಬಿ ಪರ ಯಾರು ಆರಂಭಿಕರಾಗಿ ಕಣಕ್ಕಿಳಿಯಬೇಕೆಂದು ನಿರ್ಧಾರವಾಗಿದೆ.

2 / 6
ಅದರಂತೆ ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸುವುದು ಕನ್ಫರ್ಮ್​. ಇದನ್ನು ಆರ್​ಸಿಬಿ ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಕೂಡ ಖಚಿತಪಡಿಸಿದ್ದಾರೆ. ಹೀಗಾಗಿ ಈ ಬಾರಿ ಆರ್​ಸಿಬಿ ಪರ ಕೊಹ್ಲಿ-ಸಾಲ್ಟ್ ಜೋಡಿ ಓಪನರ್​​ಗಳಾಗಿ ಕಣಕ್ಕಿಳಿಯಲಿದ್ದಾರೆ.

3 / 6
ಖಾಸಗಿ ಚಾನೆಲ್​ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಆ್ಯಂಡಿ ಫ್ಲವರ್, ಆರ್​ಸಿಬಿ ಪರ ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸುವುದು ಬಹಳ ಮುಖ್ಯ. ಅವರ ಜೊತೆ ಈ ಬಾರಿ ಟಾಪ್ ಆರ್ಡರ್​ನಲ್ಲಿ ಫಿಲ್ ಸಾಲ್ಟ್ ಕೂಡ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೂಲಕ ಕೊಹ್ಲಿ ಹಾಗೂ ಸಾಲ್ಟ್ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಲು ಯೋಜನೆ ರೂಪಿಸಿರುವುದನ್ನು ಬಹಿರಂಗಪಡಿಸಿದ್ದಾರೆ.

4 / 6
ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ 113 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದಾರೆ. ಈ ವೇಳೆ 8 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ 45.81ರ ಸರಾಸರಿಯಲ್ಲಿ ಒಟ್ಟು 4352 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಆರಂಭಿಕ ಎನಿಸಿಕೊಂಡಿದ್ದಾರೆ.

5 / 6
ಮತ್ತೊಂದೆಡೆ ಫಿಲ್ ಸಾಲ್ಟ್ ಇಂಗ್ಲೆಂಡ್ ಪರ ಆರಂಭಿಕನಾಗಿ ಕಣಕ್ಕಿಳಿದ ಅನುಭವ ಹೊಂದಿದ್ದಾರೆ. ಇದರ ಜೊತೆ ಕಳೆದ ಸೀಸನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ 12 ಪಂದ್ಯಗಳಲ್ಲಿ ಫಿಲ್ ಸಾಲ್ಟ್ ಇನಿಂಗ್ಸ್​ ಆರಂಭಿಸಿದ್ದರು. ಈ ವೇಳೆ 4 ಅರ್ಧಶತಕಗಳೊಂದಿಗೆ ಒಟ್ಟು 435 ರನ್ ಬಾರಿಸಿ ಅಬ್ಬರಿಸಿದ್ದರು.

6 / 6
ಇದೀಗ ಕಿಂಗ್ ಕೊಹ್ಲಿ - ಸ್ಪೋಟಕ ಸಾಲ್ಟ್​ರನ್ನು ಜೊತೆಯಾಗಿ ಕಣಕ್ಕಿಳಿಸಲು ಆರ್​ಸಿಬಿ ಫ್ರಾಂಚೈಸಿ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಹೀಗಾಗಿ ಈ ಬಾರಿ ಆರ್​ಸಿಬಿ ಆರಂಭಿಕರ ಕಡೆಯಿಂದ ಬೆಂಕಿ ಬಿರುಗಾಳಿ ಪ್ರದರ್ಶನವನ್ನು ನಿರೀಕ್ಷಿಸಬಹುದು.