AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಒಂದಲ್ಲ, ಎರಡಲ್ಲ… ವಿರಾಟ್ ಕೊಹ್ಲಿ ಅಬ್ಬರಕ್ಕೆ ಹಲವು ದಾಖಲೆಗಳು ಉಡೀಸ್

IPL 2025, Virat Kohli Records: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2025) ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ದಾಖಲೆಗಳ ಸರಮಾಲೆ ಮುಂದುವರೆದಿದೆ. ಈ ದಾಖಲೆಗಳ ಪಟ್ಟಿಗೆ ಇದೀಗ ಒಂದಷ್ಟು ಹೊಸ ದಾಖಲೆಗಳು ಸೇರ್ಪಡೆಯಾಗಿವೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

ಝಾಹಿರ್ ಯೂಸುಫ್
|

Updated on:May 04, 2025 | 1:55 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 52ನೇ ಪಂದ್ಯದ ಮೂಲಕ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದು ಸಹ ದಾಖಲೆಗಳ ಮೇಲೆಯೇ ದಾಖಲೆಗಳನ್ನು ಬರೆಯುವ ಮೂಲಕ ಎಂಬುದು ವಿಶೇಷ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ 33 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 66 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಸಂಪೂರ್ಣ ಪಟ್ಟಿ ಈ ಕೆಳಗಿನಂತಿದೆ...

1 / 6
ಸಿಕ್ಸರ್ ಕಿಂಗ್: ಈ ಪಂದ್ಯದಲ್ಲಿ ಬಾರಿಸಿದ 5 ಸಿಕ್ಸ್​ಗಳೊಂದಿಗೆ ವಿರಾಟ್ ಕೊಹ್ಲಿ ಆರ್​ಸಿಬಿ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಆರ್​ಸಿಬಿ ಪರ 300+ ಸಿಕ್ಸ್ ಬಾರಿಸಿದ ಏಕೈಕ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ ಆರ್​ಸಿಬಿ ಪರ ಈವರೆಗೆ 304 ಸಿಕ್ಸ್​ಗಳನ್ನು ಬಾರಿಸಿದ್ದಾರೆ.

2 / 6
ಸಿಕ್ಸರ್ ಸರದಾರ: ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 151 ಸಿಕ್ಸ್ ಬಾರಿಸಿ ಗೇಲ್ ಈ ದಾಖಲೆ ಬರೆದಿದ್ದರು. ಇದೀಗ ಬೆಂಗಳೂರಿನಲ್ಲಿ 154 ಸಿಕ್ಸ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಈ ದಾಖಲೆ ಮುರಿದಿದ್ದಾರೆ.

3 / 6
500+ ರನ್ಸ್: ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ 500+ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಕೂಡ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ 7 ಬಾರಿ 500+ ರನ್​ ಕಲೆಹಾಕಿದ ಡೇವಿಡ್ ವಾರ್ನರ್ ಹೆಸರಿನಲ್ಲಿತ್ತು. ಇದೀಗ 8ನೇ ಬಾರಿ 500+ ಸ್ಕೋರ್​ಗಳಿಸಿ ವಿರಾಟ್ ಕೊಹ್ಲಿ ಇತಿಹಾಸ ನಿರ್ಮಿಸಿದ್ದಾರೆ.

4 / 6
ಅರ್ಧಶತಕದ ವೀರ: ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ಡೇವಿಡ್ ವಾರ್ನರ್ (62) ಅವರ ದಾಖಲೆಯನ್ನು ಸಹ ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ. ಸಿಎಸ್​ಕೆ ವಿರುದ್ಧದ ಅರ್ಧಶತಕದೊಂದಿಗೆ ಕೊಹ್ಲಿಯ ಐಪಿಎಲ್ ಹಾಫ್​ ಸೆಂಚುರಿಗಳ ಸಂಖ್ಯೆ 62 ಕ್ಕೇರಿದೆ.

5 / 6
ರನ್ ಸರದಾರ: ಐಪಿಎಲ್ ಇತಿಹಾಸದಲ್ಲಿ ಒಂದು ತಂಡದ ಪರ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಕೂಡ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಡೇವಿಡ್ ವಾರ್ನರ್ ಹೆಸರಿನಲ್ಲಿತ್ತು. ವಾರ್ನರ್ ಪಂಜಾಬ್ ಕಿಂಗ್ಸ್ ವಿರುದ್ಧ 1134 ರನ್ ಬಾರಿಸಿ ಈ ದಾಖಲೆ ಬರೆದಿದ್ದರು. ಇದೀಗ ಸಿಎಸ್​ಕೆ ವಿರುದ್ಧ 1146 ರನ್ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

6 / 6

Published On - 1:54 pm, Sun, 4 May 25

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!