- Kannada News Photo gallery Cricket photos IPL 2025: Virat Kohli Injury Update, RCB Coach Andy Flower Gives Big Update
Virat Kohli: ವಿರಾಟ್ ಕೊಹ್ಲಿಗೆ ಗಾಯ: ಬಿಗ್ ಅಪ್ಡೇಟ್ ನೀಡಿದ RCB ಕೋಚ್
IPL 2025 RCB vs GT: ಐಪಿಎಲ್ನ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 169 ರನ್ಗಳಿಸಿದರೆ, ಈ ಗುರಿಯನ್ನು ಗುಜರಾತ್ ಟೈಟಾನ್ಸ್ ಕೇವಲ 17.5 ಓವರ್ಗಳಲ್ಲಿ ಬೆನ್ನತ್ತಿ ಗೆದ್ದಿದೆ. ಇನ್ನು ಈ ಪಂದ್ಯದ ಫೀಲ್ಡಿಂಗ್ ವೇಳೆ ವಿರಾಟ್ ಕೊಹ್ಲಿ ಗಾಯಗೊಂಡಿದ್ದರು. ಇದೀಗ ಕೊಹ್ಲಿಯ ಗಾಯದ ಬಗ್ಗೆ ಬಿಗ್ ಅಪ್ಡೇಟ್ ಹೊರಬಿದ್ದಿದೆ.
Updated on: Apr 03, 2025 | 1:54 PM

IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಐಪಿಎಲ್ನ 14ನೇ ಪಂದ್ಯದ ವೇಳೆ ಗಾಯಗೊಂಡಿದ್ದರು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ಫೀಲ್ಡಿಂಗ್ ವೇಳೆ ಕೊಹ್ಲಿಯ ಕೈಗೆ ಗಾಯವಾಗಿತ್ತು.

ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಡೀಪ್ ಮಿಡ್ ವಿಕೆಟ್ನತ್ತ ಬಾರಿಸಿದ ಚೆಂಡನ್ನು ಹಿಡಿಯುವ ಯತ್ನದಲ್ಲಿ ಕೊಹ್ಲಿಯ ಹೆಬ್ಬರಳಿನ ಭಾಗಕ್ಕೆ ಗಾಯವಾಗಿದೆ. ಅತ್ತ ಚೆಂಡು ತಾಗುತ್ತಿದ್ದಂತೆ ಕೊಹ್ಲಿ ನೋವಿನಿಂದ ಕುಸಿದು ಕೂತಿದ್ದರು. ಈ ಗಾಯದ ಕಾರಣ ವಿರಾಟ್ ಕೊಹ್ಲಿ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿತ್ತು.

ಇದೀಗ ವಿರಾಟ್ ಕೊಹ್ಲಿಯ ಗಾಯದ ಬಗ್ಗೆ ಆರ್ಸಿಬಿ ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಮಾಹಿತಿ ನೀಡಿದ್ದಾರೆ. ಕೊಹ್ಲಿಗೆ ಉಂಟಾಗಿರುವ ಗಾಯವು ಗಂಭೀರವೇನಲ್ಲ. ಅಲ್ಲದೆ ಅವರು ಫೈನ್ ಆಗಿದ್ದು, ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಹೀಗಾಗಿ ಏಪ್ರಿಲ್ 7 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಈ ಪಂದ್ಯಕ್ಕೆ ಇನ್ನೂ ಮೂರು ದಿನಗಳ ಕಾಲಾವಕಾಶವಿದ್ದು, ಅದರೊಳಗೆ ಅವರ ಬೆರಳಿನ ಗಾಯವು ಸಂಪೂರ್ಣ ಗುಣಮುಖವಾಗುವ ನಿರೀಕ್ಷೆಯಿದೆ.

ಇನ್ನು ಈ ಬಾರಿಯ ಐಪಿಎಲ್ನಲ್ಲಿ ಮೂರು ಪಂದ್ಯಗಳನ್ನಾಡಿರುವ ಆರ್ಸಿಬಿ ತಂಡವು 2 ಜಯ ಹಾಗೂ ಒಂದು ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಬಗ್ಗು ಬಡಿದಿದ್ದ ಆರ್ಸಿಬಿ, ದ್ವಿತೀಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ಗೆ ಮಣ್ಣು ಮುಕ್ಕಿಸಿತ್ತು. ಆದರೆ ತವರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನುಭವಿಸಿ ನಿರಾಸೆ ಮೂಡಿಸಿದೆ. ಇದಾಗ್ಯೂ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ಮೂಲಕ ಆರ್ಸಿಬಿ ಮತ್ತೆ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ.



















