IPL 2025: ಅಣ್ಣಾ ಬಿಟ್ ಬಿಡಣ್ಣ… RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

Updated on: Apr 26, 2025 | 9:04 AM

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 9 ಪಂದ್ಯಗಳನ್ನಾಡಿದೆ. ಈ 9 ಮ್ಯಾಚ್​ಗಳಲ್ಲಿ 6 ಗೆಲುವು ದಾಖಲಿಸಿರುವ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನುಳಿದ 5 ಮ್ಯಾಚ್​ಗಳಲ್ಲಿ 2 ಗೆಲುವು ದಾಖಲಿಸಿದರೆ, ಆರ್​ಸಿಬಿ ಪ್ಲೇಆಫ್​ಗೇರಲಿದೆ.

1 / 6
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರೋಚಕ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಆರ್​ಸಿಬಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 205 ರನ್ ಕಲೆಹಾಕಿತ್ತು.

2 / 6
ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವನ್ನು 194 ರನ್​ಗಳಿಗೆ ನಿಯಂತ್ರಿಸುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ. ಈ ಮೂಲಕ ಆರ್​ಸಿಬಿ ಪಡೆ 11 ರನ್​ಗಳ ರೋಚಕ ಗೆಲುವು ದಾಖಲಿಸಿದೆ. ಈ ಗೆಲುವಿನ ಹೊರತಾಗಿಯೂ ಆರ್​ಸಿಬಿ ತಂಡದಲ್ಲಿ ಎಲ್ಲವೂ ಸರಿಯಿಲ್ವಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

3 / 6
ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಪಂದ್ಯದ ನಡುವೆ ವಿರಾಟ್ ಕೊಹ್ಲಿ ನೀಡಿದ ರಿಯಾಕ್ಷನ್. ಅತ್ಯುತ್ತಮ ಪೈಪೋಟಿಗೆ ಕಾರಣವಾಗಿದ್ದ ಈ ಪಂದ್ಯದ ನಡುವೆ ಆರ್​ಸಿಬಿ ತಂಡದ ಮೆಂಟರ್ ದಿನೇಶ್ ಕಾರ್ತಿಕ್ ಹಾಗೂ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ವಿರಾಟ್ ಕೊಹ್ಲಿಯೊಂದಿಗೆ ಬೌಂಡರಿ ಲೈನ್​ನಲ್ಲಿ ನಿಂತು ಚರ್ಚಿಸಿದ್ದರು.

4 / 6
ಈ ವೇಳೆ ದಿನೇಶ್ ಕಾರ್ತಿಕ್ ಕೆಲ ಸಲಹೆಗಳನ್ನು ಸಹ ನೀಡಿದ್ದಾರೆ. ಆದರೆ ಈ ಸಲಹೆಗಳ ವೇಳೆ ವಿರಾಟ್ ಕೊಹ್ಲಿ ಕೈ ಮುಗಿಯುತ್ತಿರುವುದು ಕಾಣಬಹುದು. ಮೇಲ್ನೋಟಕ್ಕೆ ನನ್ನನ್ನು ಬಿಟ್ಟು ಬಿಡು ಎಂಬಾರ್ಥದಲ್ಲಿ ಕೈ ಮುಗಿಯುತ್ತಿರುವ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

5 / 6
ಇದರ ಬೆನ್ನಲ್ಲೇ ಆರ್​ಸಿಬಿ ತಂಡದಲ್ಲಿ ಎಲ್ಲವೂ ಸರಿಯಿಲ್ವಾ ಎಂಬ ಪ್ರಶ್ನೆಯೊಂದು ಮೂಡಿದೆ. ಏಕೆಂದರೆ ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ನಾಯಕ ರಜತ್ ಪಾಟಿದಾರ್ ತನ್ನ ಸಲಹೆಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂಬಾರ್ಥದಲ್ಲಿ ವಿರಾಟ್ ಕೊಹ್ಲಿ ದಿನೇಶ್ ಕಾರ್ತಿಕ್ ಬಳಿ ದೂರುತ್ತಿರುವುದು ಕಂಡು ಬಂದಿತ್ತು.

6 / 6
ಇದೀಗ ಮತ್ತೊಮ್ಮೆ ಬೌಂಡರಿ ಲೈನ್​ನಲ್ಲಿ ದಿನೇಶ್ ಕಾರ್ತಿಕ್ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾಗ, ವಿರಾಟ್ ಕೊಹ್ಲಿ ಕೈ ಮುಗಿಯುತ್ತಿರುವ ಫೋಟೋಗಳು ವೈರಲ್ ಆಗಿದೆ. ಇದರ ಬೆನ್ನಲ್ಲೇ ಆರ್​ಸಿಬಿ ನಾಯಕ ರಜತ್ ಪಾಟಿದಾರ್ ಹಾಗೂ ವಿರಾಟ್ ಕೊಹ್ಲಿ ನಡುವೆ ಹೊಂದಾಣಿಕೆ ಇಲ್ವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.