IPL 2025: ಪ್ಲೇಆಫ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ ಸೆಹ್ವಾಗ್

|

Updated on: Mar 22, 2025 | 12:09 PM

IPL 2025: ಐಪಿಎಲ್​ನ 18ನೇ ಆವೃತ್ತಿಗೆ ಕ್ಷಣಗಣನೆ ಶುರುವಾಗಿದೆ. 10 ತಂಡಗಳ ನಡುವಣ ಈ ಕ್ರಿಕೆಟ್ ಕದನಕ್ಕೆ ಇಂದು (ಮಾ.22) ರಾತ್ರಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಚಾಲನೆ ಸಿಗಲಿದೆ. ವಿಶೇಷ ಎಂದರೆ ಈ ಬಾರಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಣಕ್ಕಿಳಿಯಲಿದೆ.

1 / 6
ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​ ಸೀಸನ್-18 ಕ್ಕೆ ಇಂದು ಚಾಲನೆ ದೊರೆಯಲಿದೆ. ಕೊಲ್ಕತ್ತಾದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನವೇ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಈ ಬಾರಿಯ ಐಪಿಎಲ್​ನಲ್ಲಿ ಪ್ಲೇಆಫ್ ಪ್ರವೇಶಿಸುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ...

2 / 6
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಮುಂಬೈ ಇಂಡಿಯನ್ಸ್ ತಂಡವು ಈ ಬಾರಿ ಮತ್ತಷ್ಟು ಬಲಿಷ್ಠವಾಗಿದೆ. ಹೀಗಾಗಿ ಮುಂಬೈ ತಂಡದಿಂದ ಈ ಸಲ ಉತ್ತಮ ಪ್ರದರ್ಶನ ನಿರೀಕ್ಷಿಸಬಹುದು. ಅಲ್ಲದೆ ಅವರು ಪ್ಲೇಆಫ್ ಹಂತಕ್ಕೇರುವುದು ಖಚಿತ ಎಂದಿದ್ದಾರೆ ಸೆಹ್ವಾಗ್.

3 / 6
ಸನ್​ರೈಸರ್ಸ್ ಹೈದರಾಬಾದ್: ಕಳೆದ ಬಾರಿ ಫೈನಲ್​ಗೇರಿದ್ದ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲೂ ಅಂತಹ ಬದಲಾವಣೆ ಕಂಡು ಬಂದಿಲ್ಲ. ಅದರಲ್ಲೂ ಅವರ ಬ್ಯಾಟಿಂಗ್ ಲೈನಪ್ ಬಲಿಷ್ಠವಾಗಿರುವುದರಿಂದ ಈ ಸಲ ಕೂಡ ಎಸ್​ಆರ್​ಹೆಚ್ ಟಾಪ್-4 ಹಂತ್ಕೇರಲಿದೆ ಎಂದು ವೀರು ಭವಿಷ್ಯ ನುಡಿದಿದ್ದಾರೆ.

4 / 6
ಪಂಜಾಬ್ ಕಿಂಗ್ಸ್: ಈ ಬಾರಿ ಪಂಜಾಬ್ ಕಿಂಗ್ಸ್ ಸಮತೋಲಿತ ಕಂಡುವನ್ನು ರೂಪಿಸಿದ್ದಾರೆ. ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿರುವ ಪಂಜಾಬ್ ಕಿಂಗ್ಸ್ ತಂಡದಲ್ಲಿ ಅತ್ಯುತ್ತಮ ಆಟಗಾರರಿದ್ದು, ಹೀಗಾಗಿ ಈ ಪಂಜಾಬ್ ಕೂಡ ಪ್ಲೇಆಫ್ ಹಂತಕ್ಕೇರುವುದನ್ನು ಎದುರು ನೋಡಬಹುದು ಎಂದಿದ್ದಾರೆ.

5 / 6
ಲಕ್ನೋ ಸೂಪರ್ ಜೈಂಟ್ಸ್​: ಎಲ್​ಎಸ್​ಜಿ ಫ್ರಾಂಚೈಸಿ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ತಂಡಕ್ಕೆ ನಾಯಕನಾಗಿ ರಿಷಭ್ ಪಂತ್ ಎಂಟ್ರಿ ಕೊಟ್ಟಿದ್ದಾರೆ. ಅಲ್ಲದೆ ತಂಡದಲ್ಲಿ ಉತ್ತಮ ಆಟಗಾರರ ದಂಡೇ ಇದೆ. ಹಾಗಾಗಿ ಲಕ್ನೋ ಸೂಪರ್ ಜೈಂಟ್ಸ್ ಕೂಡ ಪ್ಲೇಆಫ್ ಆಡಲಿದೆ ಎಂದು ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.

6 / 6
ಇದಾಗ್ಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್ ಹಂತಕ್ಕೇರುವುದು ಡೌಟ್ ಎಂದಿದ್ದಾರೆ. ಸೆಹ್ವಾಗ್ ಭವಿಷ್ಯದಂತೆ ಈ ಬಾರಿಯ ಐಪಿಎಲ್​ನ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಲಕ್ನೋ ಸೂಪರ್ ಜೈಂಟ್ಸ್, ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಟಾಪ್-4 ಹಂತದಲ್ಲಿ ಕಾಣಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.