- TV9 Kannada Kannada News Photos Cricket Photos IPL 2025 vs PSL 2025: rcb fans in pakistan super league
PSL 2025: ಪಾಕಿಸ್ತಾನ್ ಸೂಪರ್ ಲೀಗ್ನಲ್ಲೂ RCB ಫ್ಯಾನ್ಸ್
IPL 2025 vs PSL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಹಾಗೂ ಪಾಕಿಸ್ತಾನ್ ಸೂಪರ್ ಲೀಗ್ (ಪಿಎಸ್ಎಲ್ 2025) ನಡುವಣ ಹೋಲಿಕೆಗಳು ಸಿಕ್ಕಾಪಟ್ಟೆ ಸುದ್ದಿಯಲ್ಲಿದೆ. ಇದರ ನಡುವೆ ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳು ಕಾಣಿಸಿಕೊಂಡಿದ್ದಾರೆ.
Updated on: Apr 17, 2025 | 2:00 PM

ಭಾರತದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಜರುಗುತ್ತಿದ್ದರೆ, ಪಕ್ಕದ ಪಾಕ್ನಲ್ಲಿ ಪಾಕಿಸ್ತಾನ್ ಸೂಪರ್ ಲೀಗ್ (PSL 2025) ನಡೆಯುತ್ತಿದೆ. ಒಂದೇ ಸಮಯದಲ್ಲಿ ಎರಡು ಲೀಗ್ಗಳು ಜರುಗುತ್ತಿರುವುದರಿಂದ ಯಾವ ಟೂರ್ನಿ ಬೆಸ್ಟ್ ಎಂಬ ಚರ್ಚೆಗಳು ಕೂಡ ಜೋರಾಗಿದೆ. ಈ ಚರ್ಚೆಗಳ ನಡುವೆಯೇ ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ RCB ಅಭಿಮಾನಿಗಳು ಕಾಣಿಸಿಕೊಂಡಿದ್ದಾರೆ.

ಕರಾಚಿಯ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಿಎಸ್ಎಲ್ನ 6ನೇ ಪಂದ್ಯದಲ್ಲಿ ಲಾಹೋರ್ ಖಲಂದರ್ಸ್ ಹಾಗೂ ಕರಾಚಿ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ವೀಕ್ಷಿಸಲು ಆಗಮಿಸಿದ ಅಭಿಮಾನಿಗಳಲ್ಲಿ ಇಬ್ಬರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫ್ಯಾನ್ಗಳಿದ್ದರು ಎಂಬುದು ವಿಶೇಷ.

ಪಂದ್ಯದ ನಡುವೆ ಆರ್ಸಿಬಿ ಜೆರ್ಸಿ ಧರಿಸಿ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದ ಇಬ್ಬರ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ವೈರಲ್ ಆಗುತ್ತಿದ್ದಂತೆ, ಇಂಡಿಯನ್ ಪ್ರೀಮಿಯರ್ ಲೀಗಾ ಅಥವಾ ಪಾಕಿಸ್ತಾನ್ ಸೂಪರ್ ಲೀಗಾ ಬೆಸ್ಟ್ ಎಂಬ ಪ್ರಶ್ನೆಗೆ ಈ ಫೋಟೋ ಉತ್ತರ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

ಅಂದಹಾಗೆ ಪಾಕಿಸ್ತಾನ್ ಸೂಪರ್ ಲೀಗ್ ವೇಳೆ ಆರ್ಸಿಬಿ ಅಭಿಮಾನಿಗಳು ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. 2024 ರ ಪಿಎಸ್ಎಲ್ನಲ್ಲಿ ನಡೆದ ಪೇಶಾವರ್ ಝಲ್ಮಿ ಹಾಗೂ ಲಾಹೋರ್ ಖಲಂದರ್ಸ್ ನಡುವಣ ಪಂದ್ಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೆರ್ಸಿ ಧರಿಸಿದ ಅಭಿಮಾನಿಯೊಬ್ಬರು ಕಾಣಿಸಿಕೊಂಡಿದ್ದರು. ಇದೀಗ ಈ ಬಾರಿ ಕೂಡ ಪಿಎಸ್ಎಲ್ನಲ್ಲಿ ಆರ್ಸಿಬಿ ಜೆರ್ಸಿ ರಾರಾಜಿಸಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಾಹೋರ್ ಖಲಂದರ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಕರಾಚಿ ಕಿಂಗ್ಸ್ ತಂಡವು ಕೇವಲ 136 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಲಾಹೋರ್ ಖಲಂದರ್ಸ್ ತಂಡ 65 ರನ್ಗಳ ಭರ್ಜರಿ ಜಯ ಸಾಧಿಸಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



