AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ನಲ್ಲಿ ಭರ್ಜರಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

Yashasvi Jaiswal Record: ಇಂಡಿಯನ್ ಪ್ರೀಮಿಯರ್ ಲೀಗ್​ನ 61ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು 187 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ 19 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 36 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ ನೆರವಿನೊಂದಿಗೆ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು 6 ವಿಕೆಟ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 21, 2025 | 10:32 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಯಶಸ್ವಿ ಜೈಸ್ವಾಲ್ (Yashasvi Jaiswal) ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಕೂಡ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಮುರಿಯುವ ಮೂಲಕ ಎಂಬುದು ವಿಶೇಷ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 61ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಿದ್ದರು.

1 / 5
ಸಿಎಸ್​ಕೆ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಾಣಿಸಿಕೊಂಡ ಯಶಸ್ವಿ ಜೈಸ್ವಾಲ್ ಮೊದಲ ಎಸೆತದಲ್ಲೇ ಫೋರ್ ಬಾರಿಸಿದರು. ಈ ಫೋರ್​ನೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಇನಿಂಗ್ಸ್​ನ ಮೊದಲ ಎಸೆತದಲ್ಲಿ ಅತೀ ಹೆಚ್ಚು ಬಾರಿ ಬೌಂಡರಿ ಬಾರಿಸಿದ ದಾಖಲೆಯೊಂದು ಯಶಸ್ವಿ ಜೈಸ್ವಾಲ್ ಪಾಲಾಯಿತು.

2 / 5
ಇದಕ್ಕೂ ಮುನ್ನ ಇಂತಹದೊಂದು ದಾಖಲೆ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿತ್ತು. ಡ್ಯಾಶಿಂಗ್ ಓಪನರ್ ಆಗಿ ಗುರುತಿಸಿಕೊಂಡಿದ್ದ ಸೆಹ್ವಾಗ್ 2014 ರ ಐಪಿಎಲ್​ನಲ್ಲಿ 5 ಬಾರಿ ಇನಿಂಗ್ಸ್​ನ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ.

3 / 5
2023 ರಲ್ಲಿ ಯಶಸ್ವಿ ಜೈಸ್ವಾಲ್ 5 ಬಾರಿ ಇನಿಂಗ್ಸ್​ನ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿ ವೀರೇಂದ್ರ ಸೆಹ್ವಾಗ್ ಅವರ ದಾಖಲೆ ಸರಿಗಟ್ಟಿದ್ದರು. ಇದೀಗ 2025 ರಲ್ಲೂ ಈ ಸಾಧನೆಯನ್ನು ಪುನರಾವರ್ತಿಸಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿ 14 ಪಂದ್ಯಗಳಲ್ಲಿ ಇನಿಂಗ್ಸ್ ಆರಂಭಿಸಿರುವ ಯಶಸ್ವಿ ಜೈಸ್ವಾಲ್ 5 ಬಾರಿ ಮೊದಲ ಎಸೆತದಲ್ಲೇ ಬೌಂಡರಿ ಸಿಡಿಸಿದ್ದಾರೆ.

4 / 5
ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಎರಡು ಸೀಸನ್​ಗಳಲ್ಲಿ 10 ಬಾರಿ ಇನಿಂಗ್ಸ್​ನ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ದಾಖಲೆಯೊಂದಿಗೆ ಯಶಸ್ವಿ ಜೈಸ್ವಾಲ್ ಈ ಬಾರಿ 559 ರನ್​ ಕಲೆಹಾಕುವ ಮೂಲಕ ಐಪಿಎಲ್ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ.

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್

ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ

ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ

ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ

ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ

ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!

ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ

ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ