IPL 2026: ಮೊದಲ ಪಂದ್ಯಕ್ಕೆ RCB ತಂಡದ ಮೂವರು ಅಲಭ್ಯ..!

Updated on: Mar 28, 2026 | 7:08 AM

IPL 2026: ರಂಗು ರಂಗಿನ ಕ್ರಿಕೆಟ್ ಟೂರ್ನಿ ಐಪಿಎಲ್ ಇಂದಿನಿಂದ ಶುರುವಾಗಲಿದೆ. ಮೊದಲ ಪಂದ್ಯವು ಬೆಂಗಳೂರಿನಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರರೈಸರ್ಸ್ ಹೈದರಾಬಾದ್ (SRH) ತಂಡಗಳು ಕಣಕ್ಕಿಳಿಯಲಿವೆ. ಆದರೆ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಪ್ರಮುಖ ಮೂವರು ವೇಗಿಗಳು ಅಲಭ್ಯರಾಗಿದ್ದಾರೆ.

1 / 5
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಗೆ ಇಂದು (ಮಾ.28) ಚಾಲನೆ ದೊರೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಅಲಭ್ಯರಾಗಿದ್ದಾರೆ. ಅವರೆಂದರೆ...

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಗೆ ಇಂದು (ಮಾ.28) ಚಾಲನೆ ದೊರೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಅಲಭ್ಯರಾಗಿದ್ದಾರೆ. ಅವರೆಂದರೆ...

2 / 5

ಜೋಶ್ ಹೇಝಲ್​ವುಡ್: ಆರ್​ಸಿಬಿ ತಂಡದಲ್ಲಿರುವ ಆಸ್ಟ್ರೇಲಿಯನ್ ವೇಗಿ ಜೋಶ್ ಹೇಝಲ್​​ವುಡ್ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಫಿಟ್​​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಇಂದು ಅವರು ಕಣಕ್ಕಿಳಿಯುವುದಿಲ್ಲ ಎಂದು ಆರ್​ಸಿಬಿ ಕೋಚ್ ಆ್ಯಂಡಿ ಫ್ಲವರ್ ಖಚಿತಪಡಿಸಿದ್ದಾರೆ.

3 / 5

ನುವಾನ್ ತುಷಾರ: ಆರ್​ಸಿಬಿ ತಂಡದಲ್ಲಿರುವ ಶ್ರೀಲಂಕಾದ ವೇಗದ ಬೌಲರ್​ ನುವಾನ್ ತುಷಾರ ಇನ್ನೂ ಸಹ ಬೆಂಗಳೂರಿಗೆ ಬಂದಿಲ್ಲ. ಹೀಗಾಗಿ ಎಸ್​ಆರ್​ಹೆಚ್​ ವಿರುದ್ಧದ ಪಂದ್ಯಕ್ಕೆ ಅವರು ಸಹ ಅಲಭ್ಯರಾಗಲಿದ್ದಾರೆ. ಫಿಟ್​​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ನುವಾನ್​​ಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಐಪಿಎಲ್ ಆಡಲು ಇನ್ನೂ ಸಹ ಎನ್​​ಒಸಿ ನೀಡಿಲ್ಲ. ಅಂದರೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ನಡೆಸುವ ಫಿಟ್​​ನೆಸ್ ಟೆಸ್ಟ್​ನಲ್ಲಿ ಪಾಸಾದರೆ ಮಾತ್ರ ಅವರಿಗೆ ಐಪಿಎಲ್​ನಲ್ಲಿ ಆಡಲು ಅವಕಾಶ ಸಿಗಲಿದೆ.

4 / 5

ಯಶ್ ದಯಾಳ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿರುವ ಎಡಗೈ ವೇಗಿ ಯಶ್ ದಯಾಳ್ ಈ ಬಾರಿಯ ಐಪಿಎಲ್​​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ವೈಯುಕ್ತಿಕ ಕಾರಣಗಳಿಂದಾಗಿ ಯಶ್ ದಯಾಳ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರು ಸಹ ಆರ್​ಸಿಬಿ ಮತ್ತು ಎಸ್​ಆರ್​​ಹೆಚ್ ನಡುವಣ ಪಂದ್ಯದ ವೇಳೆ ಕಾಣಿಸಿಕೊಳ್ಳುವುದಿಲ್ಲ.

5 / 5

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ಯಶ್ ದಯಾಳ್ (ಅಲಭ್ಯ).

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us