IPL 2026: ಮೂವರು ಭಾರತೀಯರು: 10 ತಂಡಗಳ ಕೋಚ್ ಫೈನಲ್
IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಗಾಗಿ ಡಿಸೆಂಬರ್ 16 ರಂದು ಮಿನಿ ಹರಾಜು ನಡೆಯಲಿದೆ. ಅಬುಧಾಬಿಯಲ್ಲಿ ನಡೆಯಲಿರುವ ಈ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ತಮ್ಮ ತಂಡಗಳ ಮುಖ್ಯ ತರಬೇತುದಾರರನ್ನು ನೇಮಕ ಮಾಡಿಕೊಂಡಿದೆ. ಅದರಂತೆ ಮುಂಬರುವ ಐಪಿಎಲ್ನಲ್ಲಿ ಕೋಚ್ ಹುದ್ದೆಯಲ್ಲಿ ಕಾಣಿಸಿಕೊಳ್ಳಲಿರುವ ಮಾಜಿ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...
Updated on:Nov 18, 2025 | 12:54 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಸೀಸನ್-19 ರ ಮಿನಿ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ತಮ್ಮ ತಂಡಗಳ ಕೋಚ್ಗಳನ್ನು ಫೈನಲ್ ಮಾಡಿಕೊಂಡಿದೆ. ವಿಶೇಷ ಎಂದರೆ ಈ ಹತ್ತು ಕೋಚ್ಗಳಲ್ಲಿ ಕೇವಲ ಮೂವರು ಭಾರತೀಯರು ಮಾತ್ರ ಪ್ರಧಾನ ಹುದ್ದೆ ಅಲಂಕರಿಸಿದ್ದಾರೆ. ಹಾಗಿದ್ರೆ ಈ ಬಾರಿಯ ಐಪಿಎಲ್ನಲ್ಲಿ ಕೋಚ್ಗಳಾಗಿ ಕಾಣಿಸಿಕೊಳ್ಳುವವರು ಯಾರು ಎಂಬುದನ್ನು ನೋಡೋಣ...

ಮುಂಬೈ ಇಂಡಿಯನ್ಸ್: ಶ್ರೀಲಂಕಾದ ಮಾಜಿ ಆಟಗಾರ ಮಹೇಂದ್ರ ಜಯವರ್ಧನೆ ಕಳೆದ ಸೀಸನ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಕೋಚ್ ಆಗಿ ನೇಮಕವಾಗಿದ್ದರು. ಈ ಬಾರಿ ಕೂಡ ಅವರನ್ನೇ ಹೆಡ್ ಕೋಚ್ ಆಗಿ ಮುಂದುವರೆಸಲು ಮುಂಬೈ ಇಂಡಿಯನ್ಸ್ ನಿರ್ಧರಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್: ಸಿಎಸ್ಕೆ ತಂಡದ ತರಬೇತಿಯ ಉಸ್ತುವಾರಿ ಈ ಬಾರಿ ಕೂಡ ನ್ಯೂಝಿಲೆಂಡ್ ತಂಡದ ಮಾಜಿ ಆಟಗಾರ ಸ್ಟೀಫನ್ ಫ್ಲೇಮಿಂಗ್ ಕೈಯಲ್ಲಿದೆ. ಕಳೆದ ಕೆಲ ವರ್ಷಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಯಶಸ್ವಿ ಪಥದತ್ತ ಮುನ್ನಡೆಸಿರುವ ಫ್ಲೆಮಿಂಗ್ ಸಿಎಸ್ಕೆ ತಂಡದ ಬೆನ್ನೆಲುಬು ಎಂದರೆ ತಪ್ಪಾಗಲಾರದು.

ಸನ್ರೈಸರ್ಸ್ ಹೈದರಾಬಾದ್: ಎಸ್ಆರ್ಹೆಚ್ ತಂಡದ ಕೋಚ್ ಆಗಿ ನ್ಯೂಝಿಲೆಂಡ್ ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಆರ್ಸಿಬಿ ತಂಡವನ್ನು ಮುನ್ನಡೆಸಿದ್ದ ವೆಟ್ಟೋರಿ ಇದೀಗ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಗುಜರಾತ್ ಟೈಟಾನ್ಸ್: ಗುಜರಾತ್ ಟೈಟಾನ್ಸ್ ತಂಡ ತಮ್ಮ ಕೋಚ್ ಅನ್ನು ಬದಲಿಸಿಲ್ಲ. ಟೀಮ್ ಇಂಡಿಯಾದ ಮಾಜಿ ಆಟಗಾರ ಆಶಿಶ್ ನೆಹ್ರಾ ಮುಖ್ಯ ಕೋಚ್ ಆಗಿ ಈ ಬಾರಿ ಕೂಡ ಮುಂದುವರೆದಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್: ಲಕ್ನೋ ತಂಡದ ಹೊಸ ಕೋಚ್ ಆಗಿ ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಜಸ್ಟಿನ್ ಲ್ಯಾಂಗರ್ ಆಯ್ಕೆಯಾಗಿದ್ದಾರೆ. ಅದರಂತೆ ಲ್ಯಾಂಗರ್- ರಿಷಭ್ ಪಂತ್ ಜೋಡಿಯು ಎಲ್ಎಸ್ಜಿ ತಂಡದ ಪ್ಲ್ಯಾನ್ಗಳನ್ನು ರೂಪಿಸಲಿದ್ದಾರೆ.

ರಾಜಸ್ಥಾನ್ ರಾಯಲ್ಸ್: ಶ್ರೀಲಂಕಾ ತಂಡದ ಮಾಜಿ ನಾಯಕ ಕುಮಾರ್ ಸಂಗಾಕ್ಕರ ಈ ಬಾರಿ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಬಾರಿ ರಾಹುಲ್ ದ್ರಾವಿಡ್ ಆರ್ಆರ್ ತಂಡ ಹೆಡ್ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು.

ಕೊಲ್ಕತ್ತಾ ನೈಟ್ ರೈಡರ್ಸ್: ಕೆಕೆಆರ್ ತಂಡದ ಕೋಚ್ ಸ್ಥಾನದಿಂದ ಚಂದ್ರಕಾಂತ್ ಪಂಡಿತ್ ನಿರ್ಗಮಿಸಿದ್ದು, ಅವರ ಸ್ಥಾನಕ್ಕೆ ಅಭಿಷೇಕ್ ನಾಯರ್ ನೇಮಕವಾಗಿದ್ದಾರೆ. ಅದರಂತೆ ಈ ಬಾರಿ ಅಭಿಷೇಕ್ ನಾಯರ್ ಪ್ಲ್ಯಾನಿಂಗ್ನೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ಕಣಕ್ಕಿಳಿಯಲಿದೆ.

ಡೆಲ್ಲಿ ಕ್ಯಾಪಿಟಲ್ಸ್: ಟೀಮ್ ಇಂಡಿಯಾದ ಮಾಜಿ ಆಟಗಾರ ಹೆಮಾಂಗ್ ಬದಾನಿ ಐಪಿಎಲ್ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ನೇಮಕವಾಗಿದ್ದರು. ಈ ಬಾರಿ ಕೂಡ ಬದಾನಿ ಅವರನ್ನೇ ಹೆಡ್ ಕೋಚ್ ಹುದ್ದೆಯಲ್ಲಿ ಮುಂದುವರೆಸಲು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ನಿರ್ಧರಿಸಿದೆ.

ಪಂಜಾಬ್ ಕಿಂಗ್ಸ್: ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಕಳೆದ ಸೀಸನ್ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಆಗಿ ಕಾಣಿಸಿಕೊಂಡಿದ್ದರು. ಈ ಬಾರಿ ಕೂಡ ಅವರನ್ನೇ ಮುಂದುವರೆಸಲು ಪಂಜಾಬ್ ಕಿಂಗ್ಸ್ ನಿರ್ಧರಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಹಾಲಿ ಚಾಂಪಿಯನ್ ಆರ್ಸಿಬಿ ತಂಡದ ಮುಖ್ಯ ಕೋಚ್ ಆಗಿ ಝಿಂಬಾಬ್ವೆ ತಂಡದ ಮಾಜಿ ಆಟಗಾರ ಆ್ಯಂಡಿ ಫ್ಲವರ್ ಮುಂದುವರೆಯಲಿದ್ದಾರೆ. ಕಳೆದ ಸೀಸನ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಕಾರಣ ಆರ್ಸಿಬಿ ತನ್ನ ಸಿಬ್ಬಂದಿ ವರ್ಗದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
Published On - 12:53 pm, Tue, 18 November 25
