AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: 10 ತಂಡಗಳ ಆರಂಭಿಕ ಜೋಡಿಗಳ ಪಟ್ಟಿ ಇಲ್ಲಿದೆ

IPL 2026:  ಐಪಿಎಲ್​ನ 19ನೇ ಆವೃತ್ತಿ ಇಂದಿನಿಂದ ಶುರುವಾಗಲಿದೆ. ಮೊದಲ ಪಂದ್ಯವು ಬೆಂಗಳೂರಿನಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರರೈಸರ್ಸ್ ಹೈದರಾಬಾದ್ (SRH) ತಂಡಗಳು ಕಣಕ್ಕಿಳಿಯಲಿವೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ಸಾಲ್ಟ್-ಕೊಹ್ಲಿ ಇನಿಂಗ್ಸ್ ಆರಂಭಿಸಿದರೆ, ಎಸ್​ಆರ್​ಹೆಚ್ ಪರ ಅಭಿಷೇಕ್-ಹೆಡ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 28, 2026 | 2:22 PM

Share
IPL 2026: ರಂಗು ರಂಗಿನ ಕ್ರಿಕೆಟ್ ಟೂರ್ನಿ ಐಪಿಎಲ್​ಗೆ ಇಂದು (ಮಾ.28) ಚಾಲನೆ ದೊರೆಯಲಿದೆ. ಹತ್ತು ತಂಡಗಳ ನಡುವಣ ಈ ಕದನಕ್ಕಾಗಿ ಎಲ್ಲಾ ತಂಡಗಳು ಈಗಾಗಲೇ ಸಜ್ಜಾಗಿದೆ. ಇನ್ನು ಈ ಸೀಸನ್​ಗಾಗಿ ಪ್ರತಿ ತಂಡಗಳು ಈ ಬಾರಿ ಬ್ಯಾಟಿಂಗ್ ಲೈನಪ್​ ಅನ್ನು ಮತ್ತಷ್ಟು ಬಲಿಷ್ಠಗೊಳಿಸಿದೆ. ಅದರಲ್ಲೂ 10 ತಂಡಗಳು ಬಲಿಷ್ಠ ಓಪನಿಂಗ್ ಜೋಡಿಯನ್ನು ಕಣಕ್ಕಿಳಿಸುತ್ತಿದ್ದು, ಯಾವ ತಂಡದ ಪರ ಯಾರು ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ನೋಡುವುದಾದರೆ...

1 / 11
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ಪರ ಈ ಬಾರಿ ಕೂಡ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸಲಿದ್ದಾರೆ. ಕಳೆದ ಸೀಸನ್​ನಲ್ಲಿ ಈ ಜೋಡಿಯು ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ಕಾರಣ ಈ ಜೋಡಿಯನ್ನು ಬದಲಿಸುವ ಸಾಧ್ಯತೆಯಿಲ್ಲ.

2 / 11
ಚೆನ್ನೈ ಸೂಪರ್ ಕಿಂಗ್ಸ್​: ಸಿಎಸ್​ಕೆ ಪರ ಈ ಬಾರಿ ಸಂಜು ಸ್ಯಾಮ್ಸನ್ ಇನಿಂಗ್ಸ್ ಆರಂಭಿಸುವುದು ಖಚಿತ. ಇನ್ನು ಸಂಜು ಜೊತೆ ರುತುರಾಜ್ ಗಾಯಕ್ವಾಡ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸಲು ಚೆನ್ನೈ ಸೂಪರ್ ಕಿಂಗ್ಸ್ ಪ್ಲ್ಯಾನ್ ರೂಪಿಸಿದೆ.

3 / 11
ಲಕ್ನೋ ಸೂಪರ್ ಜೈಂಟ್ಸ್: ಎಲ್​ಎಸ್​ಜಿ ಪರ ಕಳೆದ ಸೀಸನ್​​ನಲ್ಲಿ ಮಿಚೆಲ್ ಮಾರ್ಷ್ ಹಾಗೂ ಐಡೆನ್ ಮಾರ್ಕ್ರಾಮ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಹೀಗಾಗಿ ಇದೇ ಜೋಡಿಯನ್ನೇ ಈ ಬಾರಿ ಕೂಡ ಆರಂಭಿಕರಾಗಿ ಕಣಕ್ಕಿಳಿಸಲಿದ್ದಾರೆ.

4 / 11
ಡೆಲ್ಲಿ ಕ್ಯಾಪಿಟಲ್ಸ್: ಕನ್ನಡಿಗ ಕೆಎಲ್ ರಾಹುಲ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಇನಿಂಗ್ಸ್ ಆರಂಭಿಸಲಿದ್ದಾರೆ. ಕೆಎಲ್​​ಆರ್​ಗೆ ಜೋಡಿಯಾಗಿ ಶ್ರೀಲಂಕಾದ ಸ್ಫೋಟಕ ದಾಂಡಿಗ ಪಾತುಮ್ ನಿಸ್ಸಂಕಾ ಆರಂಭಿಕನ ಸ್ಥಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 11
ಕೊಲ್ಕತ್ತಾ ನೈಟ್ ರೈಡರ್ಸ್: ಕೆಕೆಆರ್ ಪರ ನ್ಯೂಝಿಲೆಂಡ್ ತಂಡದ ದಾಂಡಿಗ ಫಿನ್ ಅಲೆನ್ ಆರಂಭಿಕನಾಗಿ ಕಣಕ್ಕಿಳಿಯುವುದು ಖಚಿತ. ಅಲೆನ್ ಜೊತೆ ಮತ್ತೊಂದು ತುದಿಯಲ್ಲಿ ಅಜಿಂಕ್ಯ ರಹಾನೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

6 / 11
ಸನ್​ರೈಸರ್ಸ್ ಹೈದರಾಬಾದ್: ಎಸ್​ಆರ್​ಹೆಚ್ ಪರ ಈ ಬಾರಿ ಕೂಡ ಸ್ಫೋಟಕ ದಾಂಡಿಗರಾದ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಇನಿಂಗ್ಸ್ ಆರಂಭಿಸಲಿದ್ದಾರೆ. 

7 / 11
ಗುಜರಾತ್ ಟೈಟಾನ್ಸ್: ಜಿಟಿ ತಂಡದ ಪರ ಶುಭ್​​ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಇನಿಂಗ್ಸ್ ಆರಂಭಿಸಲಿದ್ದಾರೆ. ಕಳೆದ ಎರಡು ಸೀಸನ್​ಗಳಲ್ಲಿ ಈ ಇಬ್ಬರು ದಾಂಡಿಗರು ಗುಜರಾತ್ ಟೈಟಾನ್ಸ್ ತಂಡಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಈ ಜೋಡಿಯನ್ನು ಬದಲಿಸುವ ಸಾಧ್ಯತೆಯಿಲ್ಲ.

8 / 11
ರಾಜಸ್ಥಾನ್ ರಾಯಲ್ಸ್: ಆರ್​ಆರ್ ಪರ ಈ ಬಾರಿ ಕೂಡ ಇಬ್ಬರು ಯುವ ಎಡಗೈ ದಾಂಡಿಗರು ಇನಿಂಗ್ಸ್ ಆರಂಭಿಸಲಿದ್ದಾರೆ. ಇಲ್ಲಿ ಆರಂಭಿಕರಾಗಿ ಕಾಣಿಸಿಕೊಳ್ಳಲಿರುವುದು ಯಂಗ್ ಸೆನ್ಸೇಷನ್ ಯಶಸ್ವಿ ಜೈಸ್ವಾಲ್ ಹಾಗೂ ಬಾಸ್ ಬೇಬಿ ಖ್ಯಾತಿಯ ವೈಭವ್ ಸೂರ್ಯವಂಶಿ.

9 / 11
ಮುಂಬೈ ಇಂಡಿಯನ್ಸ್: ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಹಾಗೂ ಸೌತ್ ಆಫ್ರಿಕಾದ ಎಡಗೈ ದಾಂಡಿಗ ಕ್ವಿಂಟನ್ ಡಿಕಾಕ್ ಮುಂಬೈ ಇಂಡಿಯನ್ಸ್ ಪರ ಇನಿಂಗ್ಸ್ ಆರಂಭಿಸಲಿದ್ದಾರೆ.

10 / 11
ಪಂಜಾಬ್ ಕಿಂಗ್ಸ್​: ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಪ್ರಿಯಾಂಶ್ ಆರ್ಯ ಹಾಗೂ ಪ್ರಭ್​ಸಿಮ್ರಾನ್ ಸಿಂಗ್ ಅತ್ಯುತ್ತಮ ಆರಂಭ ಒದಗಿಸಿದ್ದರು. ಹೀಗಾಗಿ ಈ ಬಾರಿ ಕೂಡ ಪ್ರಭ್​ಸಿಮ್ರಾನ್ ಹಾಗೂ ಪ್ರಿಯಾಂಶ್ ಪಂಜಾಬ್ ಪರ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

11 / 11
Follow Us
ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ

ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದಾನೆ; ಯುವತಿಯ ಹೇಳಿಕೆ ವೈರಲ್

ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಪ್ರದೀಪ್ ಈಶ್ವರ್

ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!

ಕಾಫಿನಾಡಿನಲ್ಲಿ ವರುಣನ ಅಬ್ಬರ
ಕಾಫಿನಾಡಿನಲ್ಲಿ ವರುಣನ ಅಬ್ಬರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ

ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ

ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ

ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!

‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!