- Kannada News Photo gallery Cricket photos IPL 2026: Ambati Rayudu predicts his Top 4 Teams for Playoffs
IPL 2026: ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭದಲ್ಲೇ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಈ ಬಾರಿ ಪ್ಲೇಆಫ್ಗೆ ಪ್ರವೇಶಿಸಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ. ಈ ನಾಲ್ಕು ತಂಡಗಳಲ್ಲಿ ಸಿಎಸ್ಕೆ ತಂಡ ಇಲ್ಲ ಎಂಬುದು ವಿಶೇಷ.
Updated on: Mar 30, 2026 | 10:22 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿದೆ. ಮೊದಲ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿಸಿದೆ. ಈ ಎರಡು ಅಮೋಘ ಗೆಲುವುಗಳ ಬೆನ್ನಲ್ಲೇ ಸಿಎಸ್ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಈ ಬಾರಿಯ ಐಪಿಎಲ್ನಲ್ಲಿ ಪ್ಲೇಆಫ್ ಪ್ರವೇಶಿಸಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ...

ಕೊಲ್ಕತ್ತಾ ನೈಟ್ ರೈಡರ್ಸ್: ಕೆಕೆಆರ್ ತಂಡವು ಈ ಬಾರಿ ಸಮತೋಲನದಿಂದ ಕೂಡಿದೆ. ಅದರಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಉತ್ತಮ ಬ್ಯಾಟರ್ಗಳು ಇರುವ ಕಾರಣ ಈ ಬಾರಿ ಅವರ ಕಡೆಯಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ಮುಂದಾಳತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಅದರಲ್ಲೂ ಕಳೆದ ಬಾರಿ ಉತ್ತಮ ಪ್ರದರ್ಶನ ನೀಡಿದ್ದ ಎಲ್ಎಸ್ಜಿ ಈ ಬಾರಿ ಕೂಡ ಸಾಂಘಿಕ ಪ್ರದರ್ಶನದೊಂದಿಗೆ ಪ್ಲೇಆಫ್ಗೇರಲಿದೆ ಎಂದು ರಾಯುಡು ಭವಿಷ್ಯ ನುಡಿದಿದ್ದಾರೆ.

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡದಲ್ಲಿರುವುದು ಅನುಭವಿ ಆಟಗಾರರು. ಅದರಲ್ಲೂ ಬಹುತೇಕ ಆಟಗಾರರು ಅತ್ಯುತ್ತಮ ಫಾರ್ಮ್ನಲ್ಲಿದ್ದಾರೆ. ಹೀಗಾಗಿ ಮುಂಬೈ ಇಂಡಿಯನ್ಸ್ ತಂಡವು ಈ ಬಾರಿ ಕೂಡ ಪ್ಲೇಆಫ್ಗೇರಲಿದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದಿರುವ ಆರ್ಸಿಬಿ ತಂಡದಲ್ಲಿ ಮಹತ್ವದ ಬದಲಾಗಿಲ್ಲ. ಅದರಲ್ಲೂ ಕಳೆದ ಬಾರಿ ಕಣಕ್ಕಿಳಿದಿದ್ದ ಪ್ಲೇಯಿಂಗ್ ಇಲೆವೆನ್ನ ಆಟಗಾರರು ಈ ಬಾರಿ ಕೂಡ ತಂಡದಲ್ಲಿದ್ದಾರೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಈ ಬಾರಿ ಕೂಡ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಈ ಪ್ರದರ್ಶನದೊಂದಿಗೆ ಆರ್ಸಿಬಿ ಸಹ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ ಎಂದು ಅಂಬಾಟಿ ರಾಯುಡು ಭವಿಷ್ಯ ನುಡಿದಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




