- TV9 Kannada Kannada News Photos Cricket Photos IPL 2026 Auction: 10 players traded before ipl auction
IPL 2026: ಹರಾಜಿಗೂ ಮುನ್ನವೇ 10 ಆಟಗಾರರು ಬೇರೆ ತಂಡಗಳಿಗೆ ಎಂಟ್ರಿ
IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ 2026ರ (ಐಪಿಎಲ್ 2026) ಮಿನಿ ಹರಾಜು ಡಿಸೆಂಬರ್ 16 ರಂದು ನಡೆಯಲಿದೆ. ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ಜರುಗಲಿರುವ ಈ ಹರಾಜಿನಲ್ಲಿ 349 ಕ್ಕಿಂತ ಹೆಚ್ಚಿನ ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಇವರಲ್ಲಿ ಗರಿಷ್ಠ 77 ಆಟಗಾರರಿಗೆ ಮಾತ್ರ ಅವಕಾಶ ದೊರೆಯಲಿದೆ. ಏಕೆಂದರೆ 10 ಫ್ರಾಂಚೈಸಿಗಳಲ್ಲಿ ಒಟ್ಟು 77 ಸ್ಥಾನಗಳು ಮಾತ್ರ ಖಾಲಿಯಿದ್ದು, ಈ ಸ್ಥಾನಗಳಿಗಾಗಿ ಬಿಡ್ಡಿಂಗ್ ನಡೆಯಲಿದೆ.
Updated on: Dec 14, 2025 | 8:55 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹರಾಜಿಗಾಗಿ ವೇದಿಕೆ ಸಿದ್ಧವಾಗಿದೆ. ಈ ಹರಾಜಿಗೂ ಮುನ್ನವೇ 10 ಆಟಗಾರರು ಬೇರೆ ಬೇರೆ ತಂಡಗಳಿಗೆ ಎಂಟ್ರಿ ಕೊಟ್ಟಿದ್ದಾರೆ. ಅಂದರೆ ಐಪಿಎಲ್ ಮಿನಿ ಆಕ್ಷನ್ಗೂ ಮುನ್ನವೇ ಕೆಲ ಫ್ರಾಂಚೈಸಿಗಳು ಟ್ರೇಡಿಂಗ್ ಆಯ್ಕೆಗಳ ಮೂಲಕ ಕೆಲ ಆಟಗಾರರನ್ನು ಖರೀದಿಸಿದೆ. ಇನ್ನು ಕೆಲ ಫ್ರಾಂಚೈಸಿಗಳು ಟ್ರೇಡ್ ಆಯ್ಕೆಯೊಂದಿಗೆ ಸ್ವಾಪ್ ಡೀಲ್ ಮಾಡಿಕೊಂಡಿದೆ. ಹೀಗೆ ಹರಾಜಿಗೂ ಮುನ್ನ ಹೊಸ ತಂಡಗಳಿಗೆ ಎಂಟ್ರಿ ಕೊಟ್ಟಿರುವ ಆಟಗಾರರ ಸಂಪೂರ್ಣ ಪಟ್ಟಿ ಈ ಕೆಳಗಿನಂತಿದೆ...

ಸಂಜು ಸ್ಯಾಮ್ಸನ್: ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮುಂದಿನ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಸಿಎಸ್ಕೆ ಫ್ರಾಂಚೈಸಿಯು ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ನೀಡಿ ಸಂಜು ಸ್ಯಾಮ್ಸನ್ ಅವರನ್ನು ಸ್ವಾಪ್ ಡೀಲ್ ಮಾಡಿಕೊಂಡಿದೆ.

ಮಯಾಂಕ್ ಮಾರ್ಕಂಡೆ: ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿದ್ದ ಯುವ ಸ್ಪಿನ್ನರ್ ಮಯಾಂಕ್ ಮಾರ್ಕಂಡೆಯನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು 30 ಲಕ್ಷ ರೂ. ಕ್ಯಾಶ್ ಡೀಲ್ನೊಂದಿಗೆ ತನ್ನದಾಗಿಸಿಕೊಂಡಿದೆ. ಅದರಂತೆ ಮುಂದಿನ ಸೀಸನ್ನಲ್ಲಿ ಮಯಾಂಕ್ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲಿದ್ದಾರೆ.

ರವೀಂದ್ರ ಜಡೇಜಾ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಮುಂದಿನ ಸೀಸನ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯಲಿದ್ದಾರೆ. ರವೀಂದ್ರ ಜಡೇಜಾ ಅವರನ್ನು ಸ್ವಾಪ್ ಡೀಲ್ ಮಾಡಿಕೊಳ್ಳುವ ಮೂಲಕ ಸಿಎಸ್ಕೆ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಿದೆ.

ನಿತೀಶ್ ರಾಣಾ: ಐಪಿಎಲ್ 2025 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದಿದ್ದ ನಿತೀಶ್ ರಾಣಾ ಮುಂದಿನ ಸೀಸನ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಬರೋಬ್ಬರಿ 4.2 ಕೋಟಿ ರೂ. ನೀಡಿ ಆರ್ಆರ್ ತಂಡದಿಂದ ನಿತೀಶ್ ರಾಣಾ ಅವರನ್ನು ಖರೀದಿಸಿದೆ.

ಅರ್ಜುನ್ ತೆಂಡೂಲ್ಕರ್: ಮುಂಬೈ ಇಂಡಿಯನ್ಸ್ ತಂಡದ ಆಲ್ರೌಂಡರ್ ಅರ್ಜುನ್ ತೆಂಡೂಲ್ಕರ್ ಮುಂಬರುವ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 30 ಲಕ್ಷ ರೂ.ಗೆ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಅರ್ಜುನ್ ತೆಂಡೂಲ್ಕರ್ ಅವರನ್ನು ಟ್ರೇಡ್ ಮಾಡಿಕೊಂಡಿದೆ.

ಶೆರ್ಫೆನ್ ರದರ್ಫೋರ್ಡ್: ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದ ವೆಸ್ಟ್ ಇಂಡೀಸ್ ದಾಂಡಿಗ ಶೆರ್ಫೆನ್ ರದರ್ಫೋರ್ಡ್ ಅವರನ್ನು 2.6 ಕೋಟಿ ರೂ.ಗೆ ಟ್ರೇಡ್ ಮಾಡಿಕೊಳ್ಳುವಲ್ಲಿಯೂ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಯಶಸ್ವಿಯಾಗಿದೆ. ಅದರಂತೆ ಐಪಿಎಲ್ 2026 ರಲ್ಲಿ ಶೆರ್ಫೆನ್ ರದರ್ಫೋರ್ಡ್ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲಿದ್ದಾರೆ.

ಸ್ಯಾಮ್ ಕರನ್: ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆದ ಸ್ವಾಪ್ ಡೀಲ್ನೊಂದಿಗೆ ಸ್ಯಾಮ್ ಕರನ್ ಆರ್ಆರ್ ತಂಡದ ಪಾಲಾಗಿದ್ದಾರೆ. ಸಂಜು ಸ್ಯಾಮ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಸಿಎಸ್ಕೆ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ನೀಡಿದ್ದಾರೆ.

ಡೊನೊವನ್ ಫೆರೀರಾ: ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಸೌತ್ ಆಫ್ರಿಕಾದ ಸ್ಫೋಟಕ ದಾಂಡಿಗ ಡೊನೊವನ್ ಅವರನ್ನು ರಾಜಸ್ಥಾನ ರಾಯಲ್ಸ್ 1 ಕೋಟಿ ರೂ.ಗೆ ಖರೀದಿಸಿದೆ. ಅದರಂತೆ ಡೊನೊವನ್ ಫೆರೀರಾ ಮುಂದಿನ ಸೀಸನ್ನಲ್ಲಿ ಆರ್ಆರ್ ಪರ ಕಣಕ್ಕಿಳಿಯಲಿದ್ದಾರೆ.

ಮೊಹಮ್ಮದ್ ಶಮಿ: ಸನ್ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ವೇಗದ ಬೌಲರ್ ಮೊಹಮ್ಮದ್ ಶಮಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಟ್ರೇಡ್ ಆಗಿದ್ದಾರೆ. ಎಸ್ಆರ್ಹೆಚ್ ಫ್ರಾಂಚೈಸಿಗೆ 10 ಕೋಟಿ ರೂ. ನೀಡಿ ಶಮಿಯನ್ನು ಲಕ್ನೋ ಸೂಪರ್ ಜೈಂಟ್ಸ್ ಖರೀದಿಸಿದೆ.

ಶಾದೂರ್ಲ್ ಠಾಕೂರ್: ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಖರೀದಿಸಿದೆ. ಎಲ್ಎಸ್ಜಿ ಫ್ರಾಂಚೈಸಿಗೆ 2 ಕೋಟಿ ರೂ. ನೀಡುವ ಮೂಲಕ ಮುಂಬೈ ಇಂಡಿಯನ್ಸ್ ಶಾರ್ದೂಲ್ ಠಾಕೂರ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



