AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಮೊದಲ ಸುತ್ತಿನಲ್ಲಿ ಹರಾಜಾಗಲಿರುವ 7 ಆಲ್​ರೌಂಡರ್​ಗಳು ಇವರೇ

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ 2026ರ (ಐಪಿಎಲ್ 2026) ಮಿನಿ ಹರಾಜಿನಲ್ಲಿ ಒಟ್ಟು 350 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಈ ಆಟಗಾರರಿಂದ ಪ್ರಮುಖರನ್ನು ಟಾಪ್-5 ಸೆಟ್​ಗಳಲ್ಲಿ ವಿಂಗಡಿಸಲಾಗಿದೆ. ಅದರಂತೆ ಮೊದಲ ಸೆಟ್​​​ನಲ್ಲಿ ಸ್ಥಾನ ಪಡೆದಿರುವ 7 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on:Dec 10, 2025 | 8:20 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೆ ವೇದಿಕೆ ಸಿದ್ಧವಾಗಿದೆ. ಡಿಸೆಂಬರ್-16 ರಂದು ಅಬುಧಾಬಿಯಲ್ಲಿ ನಡೆಯಲಿರುವ ಹರಾಜಿನಲ್ಲಿ ಒಟ್ಟು 350 ಆಟಗಾರರ ಹೆಸರುಗಳು ಕಾಣಿಸಿಕೊಳ್ಳಲಿದೆ. ಈ 350 ಆಟಗಾರರಲ್ಲಿ 7 ಪ್ಲೇಯರ್ಸ್​ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಮೊದಲ ಸುತ್ತಿನಲ್ಲೇ ಹರಾಜು ನಡೆಯಲಿದೆ. ಅದರಂತೆ ಮೊದಲ ಸುತ್ತಿನ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ಆಲ್​ರೌಂಡರ್​ ಆಟಗಾರರು ಯಾರೆಲ್ಲಾ ಎಂದು ನೋಡೋಣ...

1 / 8
ಗಸ್ ಅಟ್ಕಿನ್ಸನ್: ಇಂಗ್ಲೆಂಡ್ ತಂಡದ ಆಲ್​​ರೌಂಡರ್ ಗಸ್ ಅಟ್ಕಿನ್ಸನ್ ಈ ಬಾರಿ ಎ1 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಹಿಂದೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಅಟ್ಕಿನ್ಸನ್ ಕಳೆದ ಸೀಸನ್​​ನಲ್ಲಿ ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ಈ ಬಾರಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಮಾರ್ಕ್ಯೂ ಲಿಸ್ಟ್​​ನಲ್ಲಿ ಸ್ಥಾನ ಪಡೆದಿದ್ದಾರೆ.

2 / 8
ವನಿಂದು ಹಸರಂಗ: ಶ್ರೀಲಂಕಾ ತಂಡದ ಸ್ಪಿನ್ನರ್ ವನಿಂದು ಹಸರಂಗ ಕಳೆದ ಸೀಸನ್​​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು. ಇದೀಗ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿರುವ ಹಸರಂಗ ಅವರು ಸಹ ಮೊದಲ ಸುತ್ತಿನ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

3 / 8
ದೀಪಕ್ ಹೂಡಾ: ಭಾರತದ ಬ್ಯಾಟರ್ ದೀಪಕ್ ಹೂಡಾ ಕಳೆದ ಸೀಸನ್​​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದರು. ಇದಾಗ್ಯೂ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದೀಗ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿರುವ ಹೂಡಾಗಾಗಿ ಮೊದಲ ಸುತ್ತಿನಲ್ಲೇ ಬಿಡ್ಡಿಂಗ್ ನಡೆಯಲಿದೆ.

4 / 8
ವೆಂಕಟೇಶ್ ಅಯ್ಯರ್: ಭಾರತದ ಆಲ್​​ರೌಂಡರ್ ವೆಂಕಟೇಶ್ ಅಯ್ಯರ್ ಕಳೆದ ಸೀಸನ್​​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದಿದ್ದರು. ಆದರೆ ಅಯ್ಯರ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಕಂಡು ಬಂದಿರಲಿಲ್ಲ. ಹೀಗಾಗಿ ಕೆಕೆಆರ್ ಅವರನ್ನು ಬಿಡುಗಡೆ ಮಾಡಿದೆ. ಇದೀಗ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿರುವ ವೆಂಕಟೇಶ್ ಅಯ್ಯರ್ ಮಾರ್ಕ್ಯೂ ಲಿಸ್ಟ್​​ನಲ್ಲಿ ಸ್ಥಾನ ಪಡೆದಿದ್ದಾರೆ.

5 / 8
ವಿಯಾನ್ ಮುಲ್ಡರ್: ಸೌತ್ ಆಫ್ರಿಕಾ ತಂಡದ ಆಲ್​​ರೌಂಡರ್ ವಿಯಾನ್ ಮುಲ್ಡರ್ ಕಳೆದ ಸೀಸನ್​​ನಲ್ಲಿ ಸನ್​​ರೈಸರ್ಸ್ ಹೈದರಾಬಾದ್ ತಂಡದಲ್ಲಿ ಕಾಣಿಸಿಕೊಂಡಿದ್ದರು. ಇದೀಗ 1 ಕೋಟಿ ರೂ. ಮೂಲ ಬೆಲೆ ಘೋಷಿಸಿರುವ ಮುಲ್ಡರ್ ಕೂಡ ಮೊದಲ ಸುತ್ತಿನ ಹರಾಜು​ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

6 / 8
ರಚಿನ್ ರವೀಂದ್ರ: ಐಪಿಎಲ್ 2026 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದ ನ್ಯೂಝಿಲೆಂಡ್​ನ ಯುವ ಆಲ್​​ರೌಂಡರ್ ರಚಿನ್ ರವೀಂದ್ರ ಈ ಬಾರಿ ಹರಾಜಿನಲ್ಲಿದ್ದಾರೆ. 2 ಕೋಟಿ ರೂ. ಮೂಲ ಬೆಲೆ ಘೋಷಿಸಿರುವ ಅವರು ಕೂಡ ಮಾರ್ಕ್ಯೂ ಲಿಸ್ಟ್​​ನಲ್ಲಿ ಸ್ಥಾನ ಪಡೆದಿದ್ದಾರೆ.

7 / 8
ಲಿಯಾಮ್ ಲಿವಿಂಗ್​ಸ್ಟೋನ್: ಇಂಗ್ಲೆಂಡ್ ಆಲ್​ರೌಂಡರ್ ಲಿಯಾಮ್ ಲಿವಿಂಗ್​ಸ್ಟೋನ್ ಕೂಡ ಈ ಬಾರಿ ಮೊದಲ ಸುತ್ತಿನ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಲಿವಿಂಗ್​ಸ್ಟೋನ್ ಈ ಬಾರಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

8 / 8

Published On - 7:53 am, Wed, 10 December 25