AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಗರಿಷ್ಠ ಮೂಲ ಬೆಲೆ ಘೋಷಿಸಿದ RCB ತಂಡದಿಂದ ಹೊರಬಿದ್ದ ಆಟಗಾರರು..!

IPL 2026: ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಒಟ್ಟು 22 ಆಟಗಾರರು ಕಾಣಿಸಿಕೊಂಡಿದ್ದರು. ಈ 22 ಆಟಗಾರರಲ್ಲಿ ಬಹುತೇಕ ಪ್ಲೇಯರ್ಸ್ ಅನ್ನು ಮುಂದಿನ ಸೀಸನ್​ಗಾಗಿ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಇದಾಗ್ಯೂ ಪ್ರಮುಖ ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದ ಲುಂಗಿ ಎನ್​ಗಿಡಿ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಅವರನ್ನು ಆರ್​ಸಿಬಿ ರಿಟೈನ್ ಮಾಡಿಕೊಂಡಿಲ್ಲ. ಇದೀಗ ಈ ಇಬ್ಬರು ಆಟಗಾರರು ಮಿನಿ ಹರಾಜಿಗಾಗಿ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 02, 2025 | 12:24 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗಾಗಿ ಬರೋಬ್ಬರಿ 1355 ಆಟಗಾರರು ಹೆಸರು ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಈ 1355 ಆಟಗಾರರಲ್ಲಿ 45 ಮಂದಿ ಗರಿಷ್ಠ ಮೂಲ ಬೆಲೆ ಘೋಷಿಸಿದ್ದಾರೆ. ಅವರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಇಬ್ಬರು ಮಾಜಿ ಆಟಗಾರರು ಕೂಡ ಇರುವುದು ವಿಶೇಷ.

1 / 5
ಐಪಿಎಲ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಸೌತ್ ಆಫ್ರಿಕಾ ವೇಗಿ ಲುಂಗಿ ಎನ್​ಗಿಡಿ ಹಾಗೂ ಇಂಗ್ಲೆಂಡ್ ಆಲ್​ರೌಂಡರ್ ಲಿಯಾಮ್ ಲಿವಿಂಗ್​ಸ್ಟೋನ್ ಮುಂಬರುವ ಐಪಿಎಲ್​ಗಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದು ಸಹ ಗರಿಷ್ಠ ಮೂಲ ಬೆಲೆಯೊಂದಿಗೆ ಎಂಬುದು ವಿಶೇಷ.

2 / 5
ಐಪಿಎಲ್​ 2025 ರಲ್ಲಿ ಆರ್​ಸಿಬಿ ಪರ ಆಲ್​ರೌಂಡರ್ ಆಗಿ ಕಾಣಿಸಿಕೊಂಡಿದ್ದ ಲಿಯಾಮ್ ಲಿವಿಂಗ್​ಸ್ಟೋನ್ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದರು. ಒಟ್ಟು 10 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ಲಿವಿಂಗ್​ಸ್ಟೋನ್ ಕೇವಲ 112 ರನ್​ ಮಾತ್ರ ಕಲೆಹಾಕಿದ್ದರು. ಅಲ್ಲದೆ 5 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಕಬಳಿಸಿದ್ದು 2 ವಿಕೆಟ್ ಮಾತ್ರ. ಹೀಗಾಗಿಯೇ ಆರ್​ಸಿಬಿ ಲಿಯಾಮ್ ಲಿವಿಂಗ್​ಸ್ಟೋನ್​ ಅವರನ್ನು ತಂಡದಿಂದ ಬಿಡುಗಡೆ ಮಾಡಿತ್ತು. ಇದೀಗ 2 ಕೋಟಿ ರೂ. ಬೇಸ್​ ಪ್ರೈಸ್​ನೊಂದಿಗೆ ಲಿವಿಂಗ್​ಸ್ಟೋನ್ ಹರಾಜಿಗಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ.

3 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಳೆದ ಸೀಸನ್​ನಲ್ಲಿ 2 ಮ್ಯಾಚ್ ಆಡಿದ್ದ ಸೌತ್ ಆಫ್ರಿಕಾ ವೇಗಿ ಲುಂಗಿ ಎನ್​ಗಿಡಿ 4 ವಿಕೆಟ್ ಕಬಳಿಸಿದ್ದರು. ಇದಾಗ್ಯೂ ಆರ್​ಸಿಬಿ ಅವರನ್ನು ರಿಟೈನ್ ಮಾಡಿಕೊಂಡಿರಲಿಲ್ಲ. ಇದೀಗ ಮಿನಿ ಹರಾಜಿಗಾಗಿ ಲುಂಗಿ ಎನ್​ಗಿಡಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದು ಸಹ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಎಂಬುದು ವಿಶೇಷ.

4 / 5
ಅಂದಹಾಗೆ ಲಿಯಾಮ್ ಲಿವಿಂಗ್​ಸ್ಟೋನ್ ಅವರನ್ನು ಕಳೆದ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬರೋಬ್ಬರಿ 8.75 ಕೋಟಿ ರೂ.ಗೆ ಖರೀದಿಸಿತ್ತು. ಹಾಗೆಯೇ ಲುಂಗಿ ಎನ್​ಗಿಡಿ 1 ಕೋಟಿ ರೂ.ಗೆ ಆರ್​ಸಿಬಿ ಪರ ಆಡಿದ್ದರು. ಇದೀಗ ಇಬ್ಬರು ಆಟಗಾರರು 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಹರಾಜಿಗೆ ಹೆಸರು ರಿಜಿಸ್ಟರ್ ಮಾಡಿಕೊಂಡಿದ್ದಾರೆ. 

5 / 5
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?

ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ

ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್

ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು

ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ

ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​

ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ

ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು

ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​